ಆರೋಪಿ ಮಲ್ಲೇಶಪ್ಪ
ಆರೋಪಿ ಮಲ್ಲೇಶಪ್ಪ

ವಿವಾಹಿತ ಮಹಿಳೆಗೆ ಬೆದರಿಕೆ, ಒಂದು ವರ್ಷದಿಂದ ಅತ್ಯಾಚಾರ: ಹಾವೇರಿ ನಗರಸಭೆ ಮಾಜಿ ಸದಸ್ಯ ಬಂಧನ

ಆ್ಯಸಿಡ್ ಹಾಕುವುದಾಗಿ ಬೆದರಿಸಿ ವಿವಾಹಿತ ಮಹಿಳೆ ಮೇಲೆ ಕಳೆದ ಒಂದು ವರ್ಷದಿಂದ ಅತ್ಯಾಚಾರ ನಡೆಸುತ್ತಾ ಬಂದಿದ್ದ ಹಾವೇರಿ ನಗರಸಭೆ ಮಾಜಿ ಸದಸ್ಯನನ್ನು ಪೋಲೀಸರು ಬಂಧಿಸಿದ್ದಾರೆ. 

ಹಾವೇರಿ: ಆ್ಯಸಿಡ್ ಹಾಕುವುದಾಗಿ ಬೆದರಿಸಿ ವಿವಾಹಿತ ಮಹಿಳೆ ಮೇಲೆ ಕಳೆದ ಒಂದು ವರ್ಷದಿಂದ ಅತ್ಯಾಚಾರ ನಡೆಸುತ್ತಾ ಬಂದಿದ್ದ ಹಾವೇರಿ ನಗರಸಭೆ ಮಾಜಿ ಸದಸ್ಯನನ್ನು ಪೋಲೀಸರು ಬಂಧಿಸಿದ್ದಾರೆ. 

ಬಂಧಿತನನ್ನು ಮಲ್ಲೇಶಪ್ಪ ಪಟ್ಟಣಶೆಟ್ಟಿ(55) ಎಂದು ಗುರುತಿಸಲಾಗಿದೆ. ಈತ ನಗರಸಭೆಯ ಮಾಜಿ ಕಾಂಗ್ರೆಸ್ ಸದಸ್ಯನಾಗಿದ್ದ ಎಂದು ತಿಳಿದುಬಂದಿದೆ.

ಇಂದೂ ಕೂಡ ಮಲ್ಲೇಶಪ್ಪ ಮಹಿಳೆಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ್ದಾನೆ. ಅದಕ್ಕೆ ಒಪ್ಪದಿದ್ದ ಮಹಿಳೆಯನ್ನು ವೇಲ್ ನಿಂದ ಕುತ್ತಿಗೆ ಬಿಗಿದು ಕೊಲ್ಲಲು ಪ್ರಯತ್ನಿಸಿದ್ದಾನೆ ಎಂದು ಸಂತ್ರಸ್ತ ಮಹಿಳೆ ಆರೋಪಿಸಿದ್ದಾರೆ.

ಸಧ್ಯ ಸಂತ್ರಸ್ತೆಯನ್ನು ಜಿಲ್ಲಾ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನಿಡಲಾಗುತ್ತಿದೆ. 

ಈ ಸಂಬಂಧ ಹಾವೇರಿ ನಗರ ಮಹಿಳಾ ಠಾಣೆಯಲ್ಲಿ ದೂರು ದಾಖಲಾಗಿದ್ದು  ಪೋಲೀಸರು ತನಿಖೆ ತೀವ್ರಗೊಳಿಸಿದ್ದಾರೆ. 

Related Stories

No stories found.

Advertisement

X
Kannada Prabha
www.kannadaprabha.com