ರಾಮನಗರ: ವೇದಿಕೆ ಮೇಲೆಯೇ ಕುಸಿದು ಬಿದ್ದು ಬಿಜೆಪಿ ಕಾರ್ಯಕರ್ತ ಸಾವು

ಕಾರ್ಯಕರ್ತರ ಸೇರ್ಪಡೆ ಕಾರ್ಯಕ್ರಮದಲ್ಲಿ ವೇದಿಕೆ ಮೇಲೆಯೇ ಕುಸಿದು ಬಿದ್ದು ಬಿಜೆಪಿ ಕಾರ್ಯಕರ್ತನೊಬ್ಬ ಮೃತಪಟ್ಟಿರುವ ಘಟನೆ ಮಾಗಡಿಯಲ್ಲಿ ಗುರುವಾರ ನಡೆದಿದೆ. 
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
Updated on: 

ರಾಮನಗರ: ಕಾರ್ಯಕರ್ತರ ಸೇರ್ಪಡೆ ಕಾರ್ಯಕ್ರಮದಲ್ಲಿ ವೇದಿಕೆ ಮೇಲೆಯೇ ಕುಸಿದು ಬಿದ್ದು ಬಿಜೆಪಿ ಕಾರ್ಯಕರ್ತನೊಬ್ಬ ಮೃತಪಟ್ಟಿರುವ ಘಟನೆ ಮಾಗಡಿಯಲ್ಲಿ ಗುರುವಾರ ನಡೆದಿದೆ. 

ಮೃತರನ್ನು ತಿಪ್ಪಸಂದ್ರ ಹೋಬಳಿಯ ಹೆಬ್ಬೆಳಲು ಗ್ರಾಮದ ಶಿವರಾಜು ಎಂದು ಗುರುತಿಸಲಾಗಿದ್ದು, ಹೃದಯಾಘಾತದಿಂದ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. ಮೃತ ಶಿವರಾಜು, ತಿಪ್ಪಸಂದ್ರ ಹೋಬಳಿ ಮಂಡಲದ ಕಾರ್ಯದರ್ಶಿಯಾಗಿದ್ದರು ಎಂದು ತಿಳಿದು ಬಂದಿದೆ.

ಉಪಮುಖ್ಯಮಂತ್ರಿ ಅಶ್ವತ್ಥನಾರಾಯಣ ನೇತೃತ್ವದಲ್ಲಿ ಮಾಗಡಿಯ ಮೈದಾನದಲ್ಲಿ ಬಿಜೆಪಿ ಸೇರ್ಪಡೆ ಕಾರ್ಯಕ್ರಮ ನಡೆದಿತ್ತು. ಕಾರ್ಯಕ್ರಮದ ಮುಕ್ತಾಯ ಹಂತದ ವೇಳೆ ವೇದಿಕೆಯ ಮೇಲೆಯೇ ಶಿವರಾಜು ಕುಸಿದು ಬಿದ್ದರು. 

ತಕ್ಷಣವೇ ಅವರು ಆಸ್ಪತ್ರೆಗೆ ಸಾಗಿಸಲಾಯಿತಾದರೂ ವ್ಯಕ್ತಿ ಅದಾಗಲೇ ಮೃತಪಟ್ಟಿರುವುದಾಗಿ ವೈದ್ಯರು ಪ್ರತಿಕ್ರಿಯಿಸಿದ್ದಾರೆ. ಉಪ ಮುಖ್ಯಮಂತ್ರಿ ಡಾ. ಸಿ. ಎನ್. ಅಶ್ವತ್ ನಾರಾಯಣ ವೇದಿಕೆ ಇಳಿಯುತ್ತಿದ್ದಂತೆ ಶಿವರಾಜು ಕುಸಿದು ಬಿದ್ದರು ಎಂದು ಪ್ರತ್ಯಕ್ಷದರ್ಶಿ ಒಬ್ಬರು ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com