ಬಸ್ ಗಳ ಮೇಲೆ ಕಲ್ಲು ತೂರಾಟ ನಡೆಸಲು ಕೋಡಿಹಳ್ಳಿ ಚಂದ್ರಶೇಖರ್ ಪ್ರಚೋದನೆ: ಮುಖ್ಯಮಂತ್ರಿ ಯಡಿಯೂರಪ್ಪ

ರೈತ ಸಂಘದ ಮುಖಂಡ ಕೋಡಿಹಳ್ಳಿ ಚಂದ್ರಶೇಖರ್ ದುರುದ್ದೇಶದಿಂದ ಕೆಲವು ಸಾರಿಗೆ ನೌಕರರನ್ನು ಎತ್ತಿಕಟ್ಟಿ ಮುಷ್ಕರ ನಡೆಸಲು ಕಾರಣಕರ್ತರಾಗಿದ್ದಾರೆ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಆರೋಪಿಸಿದ್ದಾರೆ.
ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ, ಕೋಡಿಹಳ್ಳಿ ಚಂದ್ರಶೇಖರ್
ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ, ಕೋಡಿಹಳ್ಳಿ ಚಂದ್ರಶೇಖರ್
Updated on

ಬೆಂಗಳೂರು: ರೈತ ಸಂಘದ ಮುಖಂಡ ಕೋಡಿಹಳ್ಳಿ ಚಂದ್ರಶೇಖರ್ ದುರುದ್ದೇಶದಿಂದ ಕೆಲವು ಸಾರಿಗೆ ನೌಕರರನ್ನು ಎತ್ತಿಕಟ್ಟಿ ಮುಷ್ಕರ ನಡೆಸಲು ಕಾರಣಕರ್ತರಾಗಿದ್ದಾರೆ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಆರೋಪಿಸಿದ್ದಾರೆ.

ರಾಜ್ಯದ ವಿವಿಧೆಡೆ ಕೆಎಸ್ ಆರ್ ಟಿಸಿ ಮತ್ತು ಬಿಎಂಟಿಸಿ ಬಸ್ ಗಳ ಮೇಲೆ ಕಲ್ಲು ತೂರಾಟ ನಡೆಸಲು ಪ್ರಚೋದಿಸಿ ಸಾರ್ವಜನಿಕ ಆಸ್ತಿಪಾಸ್ತಿಗೆ ನಷ್ಟ ಉಂಟಾಗಲು ಕಾರಣಕರ್ತರಾಗಿದ್ದಾರೆ ಎಂದು ಮುಖ್ಯಮಂತ್ರಿ ಮಾಧ್ಯಮ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಅವಶ್ಯಕ ಸೇವೆಯಡಿ ಬರುವ ಸಾರಿಗೆ ಸಂಸ್ಥೆ ನೌಕರರು ಮುಷ್ಕರ ನಡೆಸುತ್ತಿರುವುದು ಅತ್ಯಂತ ದುರದೃಷ್ಟಕರ ಸಂಗತಿ. ಈ ಮುಷ್ಕರದಿಂದ ರಾಜ್ಯದೆಲ್ಲೆಡೆ ಪ್ರಯಾಣಿಕರಿಗೆ ತೀವ್ರ ತೊಂದರೆಯಾಗುತ್ತಿದೆ. ಈಗಾಗಲೇ ಸಾರಿಗೆ ಸಂಸ್ಥೆಯ ನೌಕರರ ಸಮಸ್ಯೆಗಳನ್ನು ಪ್ರಾಮಾಣಿಕವಾಗಿ ಬಗೆಹರಿಸಲು ಸಾರಿಗೆ ಸಚಿವ ಲಕ್ಷ್ಮಣ್ ಸವದಿಗೆ ಸಲಹೆ ಸೂಚನೆಗಳನ್ನು ನೀಡಿದ್ದು, ಅವರು ಕೂಡಾ ಸಮಸ್ಯೆ ಬಗೆಹರಿಸುವ ನಿಟ್ಟಿನಲ್ಲಿ ನಿರಂತರ ಪ್ರಯತ್ನ ಮಾಡುತ್ತಿದ್ದಾರೆ ಎಂದು ಅವರು ಹೇಳಿದ್ದಾರೆ.

ಕೋಡಿಹಳ್ಳಿ ಚಂದ್ರಶೇಖರ್  ಮಾಜಿ ಮುಖ್ಯಮಂತ್ರಿ ಹೆಚ್. ಡಿ. ಕುಮಾರ ಸ್ವಾಮಿ ಅವರ ಬಗ್ಗೆ ಅತ್ಯಂತ ಲಘುವಾಗಿ ಮಾತನಾಡಿರುವುದು ಕೂಡಾ ಖಂಡನೀಯವಾಗಿದೆ. ಸಾರ್ವಜನಿಕ ಹಿತದೃಷ್ಟಿಯಿಂದ ಕೂಡಲೇ ಸತ್ಯಾಗ್ರಹವನ್ನು ನಿಲ್ಲಿಸಿ ಕರ್ತವ್ಯಕ್ಕೆ ಮರಳಿ ನಂತರ ಸಾರಿಗೆ ಸಚಿವರ ಜೊತೆಗೆ ಚರ್ಚೆಗೆ ಬರಲು ಮತ್ತೊಮ್ಮೆ ಮನವಿ ಮಾಡುವುದಾಗಿ ಯಡಿಯೂರಪ್ಪ ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com