ಕೋಲಾರ ಗ್ರಾಮ ಪಂಚಾಯಿತಿ ಸ್ಥಾನ ಐದು ಲಕ್ಷಕ್ಕೆ ಹರಾಜು!

ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಅಣಕಿಸುವಂತಹ ಮತ್ತೊಂದು ಘಟನೆ ನಡೆದಿದೆ.  ಕೋಲಾರದ ಮದ್ದೇರಿ ಗ್ರಾಮ ಪಂಚಾಯಿತಿ ಸದಸ್ಯತ್ವ ಸ್ಥಾನವನ್ನು 5 ಲಕ್ಷ ರುಪಾಯಿಗೆ ಹರಾಜು ಹಾಕಲಾಗಿದೆ ಎಂದು ಆರೋಪಿಸಲಾಗಿದೆ
ಕಲಬುರಗಿ ಗ್ರಾಮ ಪಂಚಾಯಿತಿ ಸದಸ್ಯತ್ವ ಸ್ಥಾನ ಹರಾಜು
ಕಲಬುರಗಿ ಗ್ರಾಮ ಪಂಚಾಯಿತಿ ಸದಸ್ಯತ್ವ ಸ್ಥಾನ ಹರಾಜು
Updated on

ಕೋಲಾರ: ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಅಣಕಿಸುವಂತಹ ಮತ್ತೊಂದು ಘಟನೆ ನಡೆದಿದೆ.  ಕೋಲಾರದ ಮದ್ದೇರಿ ಗ್ರಾಮ ಪಂಚಾಯಿತಿ ಸದಸ್ಯತ್ವ ಸ್ಥಾನವನ್ನು 5 ಲಕ್ಷ ರುಪಾಯಿಗೆ ಹರಾಜು ಹಾಕಲಾಗಿದೆ ಎಂದು ಆರೋಪಿಸಲಾಗಿದೆ. 

ಮದ್ದೇರಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ 13 ಗ್ರಾಮಗಳು ಬರಲಿದ್ದು, ಅದರಲ್ಲಿ ಇರಸಂದ್ರ ಬೆಡ್ಲಿ ಎಂಬ ಗ್ರಾಮ ಪಂಚಾಯಿತಿ ಸದಸ್ಯತ್ವ ಸ್ಥಾನವನ್ನು ಹರಾಜು ಹಾಕಲಾಗಿದೆ. 

ಪಂಚಾಯಿತಿ ಚುನಾವಣೆಯಲ್ಲಿ ಸ್ಪರ್ಧಿಸಲು ಆಸಕ್ತಿಯಿರುವ ಅಭ್ಯರ್ಥಿಗಳನ್ನು ಬಿಡ್ ಮಾಡುತ್ತಾರೆ, ಹರಾಜಿನಲ್ಲಿ ಶ್ರೀರಾಮಪ್ಪ ಅವರು 5 ಲಕ್ಷ ರೂ.ಗಳ ಅತ್ಯಧಿಕ ಬಿಡ್ ನೀಡುವ ಮೂಲಕ ಗೆದ್ದಿದ್ದಾರೆ ಎನ್ನಲಾಗಿದೆ.

ಡಿಸೆಂಬರ್ 23 ರಂದು ಚುನಾವಣೆ ನಡೆದಾಗ ಗ್ರಾಮಸ್ಥರು ಅವರಿಗೆ ಸಾಮೂಹಿಕವಾಗಿ ಮತ ಚಲಾಯಿಸಲು ನಿರ್ಧರಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.  ಈ ಮಾಹಿತಿ ತಾಲೂಕು ಆಡಳಿತಕ್ಕೆ ತಿಳಿದ ನಂತರ ತಹಶೀಲ್ದಾರ್ ವೇಮಗಲ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದು, ತನಿಖೆ ಮುಂದುವರಿಸಿದ್ದಾರೆ.

ರಾಜ್ಯಾದ್ಯಂತ ಇಂಥಹ ಘಟನೆಗಳು ಇತ್ತೀಚೆಗೆ ಹೆಚ್ಚಾಗಿದ್ದು, ತುಮಕೂರಿನ ದೊಡ್ಡನರವಂಗಲ ಗ್ರಾಮ ಪಂಚಾಯಿತಿಯ ಅಸ್ಲಿಪುರ ಸದಸ್ಯತ್ವ ಸ್ಥಾನ ಹರಾಜಾಗಿದೆ ಎನ್ನಲಾಗಿತ್ತು. ಇನ್ನು ಕಲಬುರಗಿ ಮತ್ತು ಬಳ್ಳಾರಿ ಜಿಲ್ಲೆಗಳಲ್ಲು ಗ್ರಾಮಪಂಚಾಯಿತಿ ಸದಸ್ಯತ್ವ ಸ್ಥಾನಗಳು ಹರಾಜಿನ ವಿಡಿಯೋ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿತ್ತು.

ಹರಾಜು ಪ್ರಕ್ರಿಯೆ ನಡೆಯದಂತೆ ಜಿಲ್ಲಾಧಿಕಾರಿಗಳು ಎಚ್ಚರಿಕೆ ನೀಡಿದ್ದರೂ ಇಂತಹ ಪ್ರಕರಣಗಳು ಮುಂದುವರಿಯುತ್ತಿವೆ, ಹೀಗಾಗಿ ಈ ದುಷ್ಕೃತ್ಯ ನಡೆಸುವವರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಲಾಗುವುದು ಎಂದು, ಇಂಥ ಘಟನೆಗಳು ಕಂಡು ಬಂದರೇ ತಿಳಿಸಬೇಕೆಂದು ಜಿಲ್ಲಾಧಿಕಾರಿಗಳು ಜನರಲ್ಲಿ ಮನವಿ ಮಾಡಿದ್ದಾರೆ.

ಮುಕ್ತ ಮತ್ತು ನ್ಯಾಯಯುತ ಮತದಾನವನ್ನು ನಡೆಸುವುದು ನಮ್ಮ ಉದ್ದೇಶವಾಗಿದೆ ಎಂದು ಅವರು ಹೇಳಿದ್ದಾರೆ. ಹರಾಜು ಪ್ರಕ್ರಿಯೆ ಪ್ರತಿಯೊಂದು ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಹರಾಜು ಪ್ರಕ್ರಿಯೆ ನಡೆಯುತ್ತದೆ, ಈ ಬಾರಿ ಹೆಚ್ಚಿನ ಹಣಕ್ಕಾಗಿ ಮಾರಾಟ ಮಾಡಲಾಗಿದೆ ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com