ಸಾರಿಗೆ ಸಚಿವ ಲಕ್ಷ್ಮಣ್ ಸವದಿ
ರಾಜ್ಯ
ನಾಳೆಯಿಂದ ಖಾಸಗಿ ವಾಹನಗಳ ವ್ಯವಸ್ಥೆ: ಸಚಿವ ಲಕ್ಷ್ಮಣ್ ಸವದಿ
ಸಾರಿಗೆ ನೌಕರರು ಹಾಗೂ ಸರ್ಕಾರದ ನಡುವಿನ ಸಂಘರ್ಷ ತೀವ್ರಗೊಂಡಿದ್ದು, ನಾಳೆಯಿಂದ ಖಾಸಗಿ ವಾಹನಗಳನ್ನು ಬಳಸಿಕೊಂಡು ಸೇವೆ ನೀಡಲು ಸರ್ಕಾರ ನಿರ್ಧರಿಸಿದೆ.
ಬೆಂಗಳೂರು: ಸಾರಿಗೆ ನೌಕರರು ಹಾಗೂ ಸರ್ಕಾರದ ನಡುವಿನ ಸಂಘರ್ಷ ತೀವ್ರಗೊಂಡಿದ್ದು, ನಾಳೆಯಿಂದ ಖಾಸಗಿ ವಾಹನಗಳನ್ನು ಬಳಸಿಕೊಂಡು ಸೇವೆ ನೀಡಲು ಸರ್ಕಾರ ನಿರ್ಧರಿಸಿದೆ.
ನಗರದಲ್ಲಿಂದು ಸುದ್ಗಿಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ ಸಚಿವ ಲಕ್ಷ್ಮಣ್ ಸವದಿ, ಸರ್ಕಾರಿ ದರದಲ್ಲೇ ಖಾಸಗಿ ವಾಹನಗಳನ್ನು ಓಡಿಸುತ್ತೇವೆ. ಈ ಸಂಬಂಧ ಅಧಿಕಾರಿಗಳೊಂದಿಗೆ ಈಗಾಗಲೇ ಒಂದು ಸುತ್ತಿನ ಮಾತುಕತೆ ನಡೆದಿದೆ ಎಂದರು.
ನಿಮ್ಮ ಬೇಡಿಕೆಗಳನ್ನು ಸಹಾನುಭೂತಿಯಿಂದ ಆಲಿಸುತ್ತೇವೆ, ಧರಣಿ ಕೈ ಬಿಟ್ಟು ಮಾತುಕತೆಗೆ ಬನ್ನಿ ಎಂದು ಮುಷ್ಕರ ನಿರತ ಸಾರಿಗೆ ನೌಕರರಿಗೆ ಮನವಿ ಮಾಡಿಕೊಂಡ ಸಚಿವರು, ಸಿಬ್ಬಂದಿ ಜೊತೆಗೆ ಕುಳಿತು ಸಮಸ್ಯೆಗೆ ಪರಿಹಾರ ಕಂಡುಕೊಳ್ಳಲು ಸಿದ್ಧರಿದ್ದೇವೆ ಎಂದರು.
ಇಲಾಖೆ ಸಿಬ್ಬಂದಿ ಜೊತೆಗೆ ಮಾತುಕತೆಗೆ ಸಿದ್ಧ, ಆದರೆ, ಕೋಡಿಹಳ್ಳಿ ಚಂದ್ರಶೇಖರ್ ಜೊತೆಗೆ ಮಾತುಕತೆ ನಡೆಸುವುದಿಲ್ಲ, ಪರ್ಯಾಯವಾಗಿ ಖಾಸಗಿ ಬಸ್ ಗಳಿಗೆ ಮೊದಲ ಆದ್ಯತೆ ನೀಡುತ್ತೇವೆ ಎಂದು ಹೇಳಿದರು.

