ಸರ್ದಾರ್ ವಲ್ಲಭಭಾಯಿ ಪಟೇಲ್ ಪುಣ್ಯತಿಥಿ: ಮುಖ್ಯಮಂತ್ರಿ, ಸಚಿವರಿಂದ ಗೌರವ ನಮನ

ಭಾರತ ರತ್ನ ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ ಪುಣ್ಯತಿಥಿ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸೇರಿ ಅನೇಕ ಗಣ್ಯರು ಗೌರವ ಸಲ್ಲಿಸಿದ್ದಾರೆ.
ಸಿಎಂ ಯಡಿಯೂರಪ್ಪ
ಸಿಎಂ ಯಡಿಯೂರಪ್ಪ

ಬೆಂಗಳೂರು: ಭಾರತ ರತ್ನ ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ ಪುಣ್ಯತಿಥಿ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸೇರಿ ಅನೇಕ ಗಣ್ಯರು ಗೌರವ ಸಲ್ಲಿಸಿದ್ದಾರೆ.

ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಟ್ವೀಟ್ ಮಾಡಿ, ಭಾರತ ರತ್ನ ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ ಪುಣ್ಯತಿಥಿಯಂದು ಆವರಿಗೆ ಗೌರವಪೂರ್ವಕ ಪ್ರಣಾಮಗಳು. ಸ್ವಾತಂತ್ರ್ಯ ಹೋರಾಟಗಾರರಾಗಿ ಮಾತ್ರವಲ್ಲ, ಸ್ವತಂತ್ರ ಭಾರತದ ಮೊದಲ ಗೃಹ ಸಚಿವರಾಗಿ ಅವರ ನಿರ್ಣಾಯಕ ನಾಯಕತ್ವ, ದೇಶದ ಅಖಂಡತೆ ಮತ್ತು ಏಕೀಕರಣಕ್ಕಾಗಿ ಅವರ ಕೊಡುಗೆ ಅವಿಸ್ಮರಣೀಯ ಎಂದು ತಿಳಿಸಿದ್ದಾರೆ.

ಸ್ವಾತಂತ್ರ್ಯಾನಂತರ ಭಾರತ ಒಂದು ಒಕ್ಕೂಟವಾಗಿ ಉಳಿದಿದ್ದರೆ ಅದಕ್ಕೆ ಕಾರಣ, ದೇಶದ ಪ್ರಪ್ರಥಮ ಗೃಹಮಂತ್ರಿ, ಉಕ್ಕಿನ ಮನುಷ್ಯ, ಭಾರತರತ್ನ ಸರ್ದಾರ್ ವಲ್ಲಭಭಾಯಿ ಪಟೇಲ್! ಅಂತಹ ಮಹಾನ್ ಸ್ವಾತಂತ್ರ್ಯ ಹೋರಾಟಗಾರ, ಧೀಮಂತ ನಾಯಕ, ಅದ್ವಿತೀಯ ಆಡಳಿತಗಾರ ಸರ್ದಾರ್ ಪಟೇಲರ ಪುಣ್ಯತಿಥಿಯಂದು ಅವರಿಗೆ ಅನಂತ ಶ್ರದ್ಧಾಪೂರ್ವಕ ಪ್ರಣಾಮಗಳು ಎಂದು ಯಡಿಯೂರಪ್ಪ ತಿಳಿಸಿದ್ದಾರೆ.

ಆರೋಗ್ಯ ಸಚಿವ ಡಾ.ಕೆ.ಸುಧಾಕರ್, ಸ್ವತಂತ್ರ ಭಾರತದ ಏಕತೆಯ ಸೂತ್ರದಾರ, 'ಉಕ್ಕಿನ ಮನುಷ್ಯ' ಸರ್ದಾರ್ ವಲ್ಲಭಭಾಯ್‌ ಪಟೇಲ್‌ ಅವರ ಪುಣ್ಯತಿಥಿಯಂದು ಆ ಮಹಾನ್ ನಾಯಕನಿಗೆ ನಮನಗಳು ಎಂದು ತಿಳಿಸಿದ್ದಾರೆ.

ಸಮಾಜ ಕಲ್ಯಾಣ ಸಚಿವ ಬಿ.ಶ್ರೀರಾಮುಲು, ಭಾರತದ ಏಕೀಕರಣಕ್ಕೆ ಶ್ರಮಿಸಿದ ಉಕ್ಕಿನ ಮನುಷ್ಯ ಭಾರತರತ್ನ ಸರ್ದಾರ್ ವಲ್ಲಭಭಾಯಿ ಪಟೇಲ್. ದೇಶ ಮೊದಲು ಎನ್ನುತ್ತಾ ಪ್ರಧಾನಿ ಹುದ್ದೆಯನ್ನೇ ಬಿಟ್ಟ ಇವರು ಪ್ರಾತಃಸ್ಮರಣೀಯರು. ದೇಶ ಕಂಡ ಮಹಾನ್ ನಾಯಕನಿಗೆ 70ನೇ ಪುಣ್ಯತಿಥಿಯಂದು ನಮನಗಳು ಎಂದು ಟ್ವಿಟ್ ಮಾಡಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com