ನವೀಕರಿಸಬಹುದಾದ ಇಂಧನ ಪ್ರಾದೇಶಿಕ ಕಚೇರಿ ಕಲಬುರಗಿಯಲ್ಲೇ ಇರಲಿ: ಪ್ರಿಯಾಂಕ್ ಖರ್ಗೆ

ನವೀಕರಿಸಬಹುದಾದ ಇಂಧನ ಅಭಿವೃದ್ದಿ ಪ್ರಾದೇಶಿಕ ಕಚೇರಿಯನ್ನು ಕಲಬುರಗಿಯಲ್ಲೇ ಉಳಿಸುವಂತೆ ಆಗ್ರಹಿಸಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರಿಗೆ ಕೆಪಿಸಿಸಿ ವಕ್ತಾರ, ಶಾಸಕ ಪ್ರಿಯಾಂಕ್ ಖರ್ಗೆ ಪತ್ರ ಬರೆದು ಆಗ್ರಹಿಸಿದ್ದಾರೆ.
ಪ್ರಿಯಾಂಕ್‌ ಖರ್ಗೆ
ಪ್ರಿಯಾಂಕ್‌ ಖರ್ಗೆ
Updated on: 

ಕಲಬುರಗಿ: ನವೀಕರಿಸಬಹುದಾದ ಇಂಧನ ಅಭಿವೃದ್ದಿ ಪ್ರಾದೇಶಿಕ ಕಚೇರಿಯನ್ನು ಕಲಬುರಗಿಯಲ್ಲೇ ಉಳಿಸುವಂತೆ ಆಗ್ರಹಿಸಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರಿಗೆ ಕೆಪಿಸಿಸಿ ವಕ್ತಾರ, ಶಾಸಕ ಪ್ರಿಯಾಂಕ್ ಖರ್ಗೆ ಪತ್ರ ಬರೆದು ಆಗ್ರಹಿಸಿದ್ದಾರೆ.

ಕಲ್ಯಾಣ ಕರ್ನಾಟಕದ ಪ್ರಮಖ ಕೇಂದ್ರವಾದ ಕಲಬುರಗಿ ಯಲ್ಲಿ ನವೀಕರಿಸಬಹುದಾದ ಇಂಧನ ಅಭಿವೃದ್ದಿ ಪ್ರಾದೇಶಿಕ ಕಚೇರಿ ಮಂಜೂರಾಗಿ ಉದ್ಘಾಟನೆಗೊಂಡಿತ್ತು. ಆದರೆ, ಸದ್ಯದ ಮಾಹಿತಿ ಹಾಗೂ ಮಾಧ್ಯಮ ವರದಿ ಪ್ರಕಾರ ಪ್ರಾದೇಶಿಕ ಕಚೇರಿಯನ್ನು ಕಲಬುರಗಿಯಿಂದ ಬೇರೆಡೆ ಸ್ಥಳಾಂತರಿಸುವ ಮಾಹಿತಿ ಇದೆ.  ಹಾಗಾಗಿ, ಈ ಕೂಡಲೇ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಕಚೇರಿಯನ್ನು ಕಲಬುರಗಿ ಯಲ್ಲೇ ಉಳಿಸಬೇಕು ಎಂದು ಅವರು ಒತ್ತಾಯಿಸಿದ್ದಾರೆ.

ನವೀಕರಿಸಬಹುದಾದ ಇಂಧನ ಅಭಿವೃದ್ಧಿ ಕಚೇರಿಯಿಂದಾಗಿ ಹಿಂದುಳಿದ‌ ಕಲ್ಯಾಣ ಕರ್ನಾಟಕದಲ್ಲಿ‌ ಆಗಬಹುದಾಗದ ಪ್ರಮುಖ ಅನುಕೂಲಗಳನ್ನು ಹೆಸರಿಸಿದುವ ಶಾಸಕರು, ಈ ಭಾಗದ ರೈತರಿಗೆ ಹಾಗೂ ಜನಸಾಮಾನ್ಯರಿಗೆ ಕೈಗೆಟುಕುವ ದರದಲ್ಲಿ‌ ಸೋಲಾರ್ ಪೆನಲ್ ದೊರಕಿಸಿಕೊಡಬಹುದು. ಜೊತೆಗೆ ಸೋಲಾರ್  ಪಾರ್ಕ್ ನಿರ್ಮಾಣ ಮತ್ತು‌ ವಿಂಡ್ ಮಿಲ್ ಸ್ಥಾಪನೆ ಮಾಡಬಹುದು. 

ಕಲ್ಯಾಣ ಕರ್ನಾಟಕ ಭಾಗದಲ್ಲಿ ನೀರಾವರಿ‌‌ ಕೊರತೆ ಬಹಳಷ್ಟಿದ್ದು, ನೀರಿನ ಸಮಸ್ಯೆ ನೀಗಿಸಲು ನೀರಿನ ಕಾಲುವೆಯುದ್ದಕ್ಕೂ ಅಥವಾ ನದಿಗಳಿಗೆ ಸೋಲಾರ್ ಪೆನಲ್ ಅಳವಡಿಸಿ‌ ಜಮೀನುಗಳಿಗೆ ನೀರು ಹರಿಸಬಹುದಾಗಿದೆ. ಇದರಿಂದ ರೈತರ ನೀರಿನ‌ ಸಮಸ್ಯೆ ಬಗೆಹರಿಯುತ್ತದೆ. ಇದರ ಜೊತೆಗೆ ಇನ್ನಿತರ ಪ್ರಮಖ  ಕಾರ್ಯಕ್ರಮಗಳನ್ನು ರೂಪಿಸುವುದರ ಮೂಲಕ ಈ ಭಾಗದ ಸಮಗ್ರ ಅಭಿವೃದ್ದಿಗೆ ನಿಗಮದ ಪ್ರಾದೇಶಿಕ ಕಚೇರಿ ಪ್ರಮಖ ಪಾತ್ರ ವಹಿಸಲಿದೆ ಎಂದು  ಒತ್ತಿ ಹೇಳಿದ್ದಾರೆ. ಪ್ರಸ್ತುತ ಸರ್ಕಾರ ಕಲ್ಯಾಣ ಕರ್ನಾಟಕ ಅಭಿವೃದ್ಧಿಗೆ ನಿರಾಸಕ್ತಿ ತೋರಿಸುತ್ತಿದ್ದು, ಈ ಕಚೇರಿಯನ್ನು ಬೇರೆಡೆಗೆ ಸ್ಥಳಾಂತರ ಮಾಡುವ ಮೂಲಕ  ಮತ್ತೊಮ್ಮೆ ಈ ಭಾಗಕ್ಕೆ ಅನ್ಯಾಯ ಮಾಡಿದಂತಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com