ಸರ್ಕಾರದ ಅನುದಾನ ಪಡೆಯುವ ಸಂಸ್ಥೆಗಳು ಮಾಹಿತಿ ಹಕ್ಕು ವ್ಯಾಪ್ತಿಗೊಳಪಡುತ್ತವೆ: ಮಾಹಿತಿ ಆಯೋಗದ ಸ್ಪಷ್ಟನೆ

 ರಾಜ್ಯ  ಸರ್ಕಾರದ ಅನುದಾನ ಪಡೆಯುವ ಸಂಸ್ಥೆಗಳು ಮಾಹಿತಿ ಹಕ್ಕು ಅಧಿನಿಯಮ-2005 ರ ವ್ಯಾಪ್ತಿಗೆ ಒಳಪಡುತ್ತದೆ  ಎಂದು ಕರ್ನಾಟಕ ಮಾಹಿತಿ ಹಕ್ಕು ಆಯೋಗ ಸ್ಪಷ್ಟಪಡಿಸಿದೆ.
ಮಾಹಿತಿ ಆಯೋಗ
ಮಾಹಿತಿ ಆಯೋಗ
Updated on: 

ಬೆಂಗಳೂರು: ರಾಜ್ಯ  ಸರ್ಕಾರದ ಅನುದಾನ ಪಡೆಯುವ ಸಂಸ್ಥೆಗಳು ಮಾಹಿತಿ ಹಕ್ಕು ಅಧಿನಿಯಮ-2005 ರ ವ್ಯಾಪ್ತಿಗೆ ಒಳಪಡುತ್ತದೆ  ಎಂದು ಕರ್ನಾಟಕ ಮಾಹಿತಿ ಹಕ್ಕು ಆಯೋಗ ಸ್ಪಷ್ಟಪಡಿಸಿದೆ.

ನಗರದ ಸೇಂಟ್ ಜೋಸೆಫ್  ಸಂಜೆ ಕಾಲೇಜು, ಸೇಂಟ್ ಜೋಸೆಫ್ ಕಲಾ ಮತ್ತು ವಿಜ್ಞಾನ ಕಾಲೇಜು ಮತ್ತು ಸೇಂಟ್ ಜೋಸೆಫ್ ವಾಣಿಜ್ಯ ಕಾಲೇಜುಗಳು ಸರ್ಕಾರದ ಅನುದಾನ ಪಡೆಯುತ್ತಿವೆ. ಸರ್ಕಾರದ ಅನುದಾನವು ಸಾರ್ವಜನಿಕರ ತೆರಿಗೆ ಹಣವಾಗಿರುವ ಹಿನ್ನೆಲೆಯುಲ್ಲಿ ಅನುದಾನ ಪಡೆಯುವ ಸಂಸ್ಥೆಗಳು  ಮಾಹಿತಿ ಹಕ್ಕು ಅಧಿನಿಯಮದ ವ್ಯಾಪ್ತಿಗೆ ಒಳಪಡುತ್ತದೆ ಎಂದು ಕರ್ನಾಟಕ ಮಾಹಿತಿ ಆಯೋಗ ಪುನರುಚ್ಛರಿಸಿದೆ.

ಮಾಹಿತಿ ಹಕ್ಕು ಅಧಿನಿಯಮ-2005 ರ ಅಡಿಯಲ್ಲಿ ಮಾಹಿತಿ ನೀಡುವಂತೆ ಕೋರಿ ಸಲ್ಲಿಸಿದ ಅರ್ಜಿಯನ್ನು ಈ ಕಾಲೇಜುಗಳು ತಿರಸ್ಕರಿಸಿ ಮಾಹಿತಿ ನೀಡದ ಹಿನ್ನೆಲೆಯಲ್ಲಿ ಸುಧಾ ಕಟ್ವಾ ಎಂಬುವವರು ಕರ್ನಾಟಕ ಮಾಹಿತಿ ಆಯೋಗಕ್ಕೆ ಮೇಲ್ಮನವಿ ಸಲ್ಲಿಸಿದ್ದರು.

 ಈ ಪ್ರಕರಣವನ್ನು ಗಂಭಿರವಾಗಿ ಪರಿಗಣಿಸಿದ ಆಯೋಗವು ಸ್ಪಷ್ಟನೆ ನೀಡಿದೆಯಲ್ಲದೆ, ಅರ್ಜಿದಾರರು ಕೋರಿರುವ ಮಾಹಿತಿಯನ್ನು 30 ದಿನಗಳೊಳಗೆ ನೀಡುವಂತೆ ಈ ಮೂರೂ ಶಿಕ್ಷಣ ಸಂಸ್ಥೆಗಳಿಗೆ ಸೂಚಿಸಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com