6ನೇ ತರಗತಿ ಪಾಠದಲ್ಲಿ ಬ್ರಾಹ್ಮಣ ಸಮುದಾಯದ ಕುರಿತು ಅವಹೇಳನ; ಪ್ರಮಾದ ಸರಿಪಡಿಸುತ್ತೇವೆ ಎಂದ ಶಿಕ್ಷಣ ಸಚಿವ 

ರಾಜ್ಯ ಸರ್ಕಾರದ ಪಠ್ಯಕ್ರಮದ ಆರನೇ ತರಗತಿಯ ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿ ಬ್ರಾಹ್ಮಣ ಸಮುದಾಯದ ಕುರಿತು ಅವಹೇಳನ ಮಾಡುವ ರೀತಿಯ ಪಾಠವೊಂದಿದೆ ಎಂಬ ಆರೋಪ ಇತ್ತೀಚೆಗೆ ಕೇಳಿಬಂದಿದ್ದು ಈ ಬಗ್ಗೆ ಸಾಮಾಜಿಕ ಜಾಲತಾಣ ಸೇರಿದಂತೆ ಶಿಕ್ಷಣ ವಲಯದಲ್ಲಿ ಭಾರೀ ಚರ್ಚೆ, ಆಕ್ಷೇಪ ನಡೆಯುತ್ತಿದೆ.
ಶಿಕ್ಷಣ ಸಚಿವ ಸುರೇಶ್ ಕುಮಾರ್ ಮತ್ತು 6ನೇ ತರಗತಿ ಪಠ್ಯಪುಸ್ತಕದ ಸಾಂದರ್ಭಿಕ ಚಿತ್ರ
ಶಿಕ್ಷಣ ಸಚಿವ ಸುರೇಶ್ ಕುಮಾರ್ ಮತ್ತು 6ನೇ ತರಗತಿ ಪಠ್ಯಪುಸ್ತಕದ ಸಾಂದರ್ಭಿಕ ಚಿತ್ರ

ಬೆಂಗಳೂರು: ರಾಜ್ಯ ಸರ್ಕಾರದ ಪಠ್ಯಕ್ರಮದ ಆರನೇ ತರಗತಿಯ ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿ ಬ್ರಾಹ್ಮಣ ಸಮುದಾಯದ ಕುರಿತು ಅವಹೇಳನ ಮಾಡುವ ರೀತಿಯ ಪಾಠವೊಂದಿದೆ ಎಂಬ ಆರೋಪ ಇತ್ತೀಚೆಗೆ ಕೇಳಿಬಂದಿದ್ದು ಈ ಬಗ್ಗೆ ಸಾಮಾಜಿಕ ಜಾಲತಾಣ ಸೇರಿದಂತೆ ಶಿಕ್ಷಣ ವಲಯದಲ್ಲಿ ಭಾರೀ ಚರ್ಚೆ, ಆಕ್ಷೇಪ ನಡೆಯುತ್ತಿದೆ.

ಈ ವಿಚಾರ ಶಿಕ್ಷಣ ಸಚಿವ ಎಸ್ ಸುರೇಶ್ ಕುಮಾರ್ ಅವರ ಗಮನಕ್ಕೆ ಬಂದಿದ್ದು, ಬಿಜೆಪಿ ಸರ್ಕಾರ ಬಂದ ಮೇಲೆ ಯಾವುದೇ ಪಠ್ಯಪುಸ್ತಕದ ಪರಿಷ್ಕರಣೆಯಾಗಿಲ್ಲ, ಹೊಸ ಪಾಠವನ್ನು ಕೂಡ ಸೇರಿಸಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಈ ಹಿಂದೆ ಪ್ರಮಾದ ಆಗಿರಬಹುದಾದ ಸಾಧ್ಯತೆಯಿದ್ದು ಕೂಡಲೇ ಸರಿಪಡಿಸಲು ಕ್ರಮ ಕೈಗೊಳ್ಳುತ್ತೇನೆ. ಈ ಬಗ್ಗೆ ಮಂತ್ರಾಲಯದ ಸ್ವಾಮೀಜಿಯವರು ನನಗೆ ತಿಳಿಸಿದ್ದು ತಪ್ಪನ್ನು ಸರಿಪಡಿಸುವುದಾಗಿ ಸಚಿವ ಸುರೇಶ್ ಕುಮಾರ್ ಭರವಸೆ ನೀಡಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com