ಬ್ರಾಹ್ಮಣರ ಅವಹೇಳನ ಪಠ್ಯ ತೆಗೆದು ಹಾಕಲು ಸುರೇಶ್ ಕುಮಾರ್ ಸೂಚನೆ

ಆರನೇ ತರಗತಿಯ ಸಮಾಜ ವಿಜ್ಞಾನ ಪಠ್ಯದಲ್ಲಿ ಬ್ರಾಹ್ಮಣ ಸಮುದಾಯದ ಭಾವನೆಗಳನ್ನು ಘಾಸಿಗೊಳಿಸಬಹುದಾದ ಪಠ್ಯಭಾಗವನ್ನು ತಕ್ಷಣದಿಂದಲೇ ಕೈಬಿಡುವಂತೆ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಸೂಚಿಸಿದ್ದಾರೆ.
ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್
ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್
Updated on

ಬೆಂಗಳೂರು: ಆರನೇ ತರಗತಿಯ ಸಮಾಜ ವಿಜ್ಞಾನ ಪಠ್ಯದಲ್ಲಿ ಬ್ರಾಹ್ಮಣ ಸಮುದಾಯದ ಭಾವನೆಗಳನ್ನು ಘಾಸಿಗೊಳಿಸಬಹುದಾದ ಪಠ್ಯಭಾಗವನ್ನು ತಕ್ಷಣದಿಂದಲೇ ಕೈಬಿಡುವಂತೆ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಸೂಚಿಸಿದ್ದಾರೆ.

ಸಾರ್ವಜನಿಕ ಶಿಕ್ಷಣ ಇಲಾಖೆಯ ಆರನೇ ತರಗತಿಯ ಸಮಾಜ ವಿಜ್ಞಾನ ಭಾಗ-1ರ ಪಾಠ-7ರ ಅಂಶಗಳನ್ನು ಉಲ್ಲೇಖಿಸಿ ಈ ಪಠ್ಯಭಾಗ ಬ್ರಾಹ್ಮಣ ಜನಾಂಗದ ಭಾವನೆಗಳನ್ನುಂಟು ಮಾಡಿದೆ ಎಂಬ ವರದಿಗಳ ಹಿನ್ನೆಲೆಯಲ್ಲಿ ಈ ಸಂಕೀರ್ಣ ಪಠ್ಯಭಾಗವನ್ನು ತಕ್ಷಣದಿಂದಲೇ ಕೈಬಿಡುವಂತೆ ಇಲಾಖೆಯ ಪ್ರಧಾನ ಕಾರ್ಯದರ್ಶಿಗೆ ಸೂಚನೆ ನೀಡಲಾಗಿದೆ ಎಂದು ಸಚಿವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಈ ಕುರಿತು ಇಂದೇ ಅಗತ್ಯ ಸುತ್ತೋಲೆ ಹೊರಡಿಸಲು ಸಾರ್ವಜನಿಕ ಶಿಕ್ಷಣ ಇಲಾಖೆ ಅಯುಕ್ತರಿಗೆ ಸೂಚಿಸಿ ಟಿಪ್ಪ ಣಿ ನೀಡಲಾಗಿದೆ.ಇಲಾಖೆಯ 1ರಿಂದ 10ನೇ ತರಗತಿಯ ಸಮಾಜ ವಿಜ್ಞಾನ,ಭಾಷಾ ವಿಷಯಗಳ ಯಾವುದೇ ಪಠ್ಯ ಗಳಲ್ಲಿ ಇರಬಹುದಾದ ಇಂತಹ ಯಾವುದೇ ಸಂಕೀರ್ಣ ವಿಷಯಗಳ ಕುರಿತು ಶಿಕ್ಷಕರು ಮತ್ತು ವಿಷಯ ತಜ್ಞರ ನ್ನೊಳಗೊಂಡ ಸಮಿತಿ ರಚಿಸಿ ಅವರಿಂದ ವರದಿ ಪಡೆದು 15 ದಿನಗಳಲ್ಲಿ ವರದಿ ಸಲ್ಲಿಸಬೇಕೆಂದೂ ಕರ್ನಾಟಕ ಪಠ್ಯಪುಸ್ತಕ ಸಂಘದ ವ್ಯವಸ್ಥಾಪಕ ನಿರ್ದೇಶಕರಿಗೆ ನಿರ್ದೇಶನ ನೀಡಲಾಗಿದೆ. ವರದಿ ಪಡೆದ ನಂತರ ವರದಿಯಲ್ಲಿ ಅಂತಹ ಪಠ್ಯಭಾಗಗಳಿದ್ದರೆ ಅದರ ಪರಾಮರ್ಶೆಗೆ ತಜ್ಞ ಸಮಿತಿ ನೇಮಕ ಮಾಡಲಾಗುವುದು ಎಂದು  ಸಚಿವರು ವಿವರಿಸಿದ್ದಾರೆ.

ಸ್ವತಃ ಮಂತ್ರಾಲಯ ಶ್ರೀಕ್ಷೇತ್ರದ ಸ್ವಾಮೀಜಿಯವರು ನನಗೆ ದೂರವಾಣಿ ಕರೆ ಮಾಡಿ ಬ್ರಾಹ್ಮಣ ಸಮುದಾಯದ ಭಾವನೆಗಳನ್ನು ವ್ಯಕ್ತಪಡಿಸಿದ್ದಾರೆ.ಆದರೆ ನಮ್ಮ ಸರ್ಕಾರ ಅಸ್ತಿತ್ವಕ್ಕೆ ಬಂದ ನಂತರ ಯಾವುದೇ ಪಠ್ಯಪುಸ್ತಕಗಳ ಪರಿಷ್ಕರಣೆಯಾಗಿಲ್ಲ ಇಲ್ಲವೇ ಹೊಸ ಪಾಠಭಾಗಗಳನ್ನು ಸೇರ್ಪಡೆ ಮಾಡಿಲ್ಲ.ಈ ಹಿಂದೆಯೇ ಆಗಿರುವ ಹಾಗೂ ಪ್ರಸ್ತುತ ಬೆಳಕಿಗೆ ಬಂದಿರುವ ಈ ಪ್ರಮಾದ ಸರಿಪಡಿಸಲು ಇಂದೇ ಕ್ರಮ ಕೈಗೊಳ್ಳಲಾಗಿದೆ ಮುಂದಿನ ದಿನ ಗಳಲ್ಲಿ ಸಮಗ್ರ ಪಠ್ಯ ಅವಲೋಕನಕ್ಕೆ ಕ್ರಮ ವಹಿಸಲಾಗುತ್ತದೆ ಎಂದು ಅವರು ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com