ಫೆ.3ಕ್ಕೆ ಆಗಲಿದೆ ಏರೋ ಇಂಡಿಯಾ 2021 ಟೇಕ್ ಆಫ್!

2021ನೇ ಸಾಲಿನ ಫೆ.3 ರಿಂದ ಫೆ.7ರ ನಡುವೆ ಐದು ದಿನಗಳ ಕಾಲ ಯಲಹಂಕ ವಾಯುನೆಲೆಯಲ್ಲಿ ವೈಮಾನಿಕ ಪ್ರದರ್ಶನ ನಡೆಯಲಿದೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
Updated on

ಬೆಂಗಳೂರು: 2021ನೇ ಸಾಲಿನ ಫೆ.3 ರಿಂದ ಫೆ.7ರ ನಡುವೆ ಐದು ದಿನಗಳ ಕಾಲ ಯಲಹಂಕ ವಾಯುನೆಲೆಯಲ್ಲಿ ವೈಮಾನಿಕ ಪ್ರದರ್ಶನ ನಡೆಯಲಿದೆ. 

ರಕ್ಷಣಾ ಒಪ್ಪಂದಗಳ ಕುರಿತು ನಿನ್ನೆಯಷ್ಟೇ ತಜ್ಞರು ಉನ್ನತ ಮಟ್ಟದ ಸಭೆ ನಡೆಸಿದ್ದು, ಸಭೆಯಲ್ಲಿ ಏರೋ ಇಂಡಿಯಾ ಶೋ ಬಗ್ಗೆ ಮಾತುಕತೆ ನಡೆಸಿದ್ದಾರೆ. ಸಭೆಯಲ್ಲಿ 13ನೇ ಆವೃತ್ತಿಯ ಏರೋ ಇಂಡಿಯಾ 2021ನ್ನು ಬೆಂಗಳೂರಿನ ಯಲಹಂಕದಲ್ಲಿ ಫೆ.3 ರಿಂದ ಆರಂಭಿಸಲು ನಿರ್ಧರಿಸಲಾಗಿದೆ ಎಂದು ತಿಳಿದುಬಂದಿದೆ. 

ಈ ಕುರಿತು ಮಾಹಿತಿ ನೀಡಿರುವ ಮೂಲಸೌಕರ್ಯ ಅಭಿವೃದ್ಧಿ ಇಲಾಖೆಯ ಪ್ರಧಾನ ಕಾರ್ಯದರ್ಶಿ ಕಪಿಲ್ ಮೋಹನ್ ಅವರು, 2021 ಏರೋ ಇಂಡಿಯಾ ಶೋನಲ್ಲಿ ಯಾವುದೇ ಬದಲಾವಣೆಗಳನ್ನೂ ಮಾಡುವುದಿಲ್ಲ. ರಕ್ಷಣಾ ಸಚಿವಾಲಯವೇ ಕಾರ್ಯಕ್ರಮವನ್ನು ನೋಡಿಕೊಳ್ಳುತ್ತಿದ್ದು, ಈಗಾಗಲೇ ಸಿದ್ಧತೆಗಳೂ ನಡೆಯುತ್ತಿವೆ ಎಂದು ಹೇಳಿದ್ದಾರೆ. 

ಕೊರೋನಾ ಸಾಂಕ್ರಾಮಿಕ ರೋಗವನ್ನು ಗಮನದಲ್ಲಿಟ್ಟುಕೊಂಡು ಸಾರ್ವಜನಿಕರ ಆಗಮನಗಳಲ್ಲಿ ಕೊಂಚ ಬದಲಾವಣೆಗಳನ್ನು ಮಾಡಲಾಗಿದೆ. ಜನದಟ್ಟಣೆಯಾಗುವುದನ್ನು ತಡೆಯುನವ ಸಲುವಾಗಿ ನಿಯಂತ್ರಿತ ಸಂಖ್ಯೆಯ ಜನರಿಗಷ್ಟೇ ಅವಕಾಶವನ್ನು ನೀಡಲಾಗುತ್ತಿದೆ. ಕೆಲ ಕಾರ್ಯಕ್ರಮಗಳನ್ನು ಆನ್'ಲೈನ್ ನಲ್ಲಿ ನಡೆಸಲಾಗುತ್ತಿದೆ ಎಂದು ತಿಳಿಸಿದ್ದಾರೆ. 

ಈಗಾಗಲೇ ಸಾಕಷ್ಟು ದೇಶಗಳಲ್ಲಿ ಕೊರೋನಾ ಎರಡನೇ ಅಲೆ ಆರಂಭವಾಗಿದ್ದು, ಕಾರ್ಯಕ್ರಮದಲ್ಲಿ ವಿದೇಶಿ ಸಂಸ್ಥೆಗಳು ಆಗಮಿಸುವ ಹಿನ್ನೆಲೆಯಲ್ಲಿ ಆತಂಕ ಹೆಚ್ಚಾಗುವಂತೆ ಮಾಡಿದೆ. 

2019ರಲ್ಲಿ ನಡೆದ ಏರೋ ಇಂಡಿಯಾ ಕಾರ್ಯಕ್ರಮದಲ್ಲು 238 ಭಾರತೀಯ ಮತ್ತು 165 ವಿದೇಶಿಗಳು ಪ್ರದರ್ಶನಗಳನ್ನು ನೀಡಿದ್ದರು. ಸುಮಾರು 4 ಲಕ್ಷಕ್ಕೂ ಹೆಚ್ಚು ಉದ್ಯಮಿಗಳು ಹಾಗೂ ಸಾಮಾನ್ಯ ಜನರು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು. 

ಈ ಬಾರಿ ಕೊರೋನಾ ಸಾಂಕ್ರಾಮಿಕ ರೋಗ ಇರುವ ಕಾರಣ ಸಾಕಷ್ಟು ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದ್ದು, ಪ್ರವೇಶ ದ್ವಾರಗಳಲ್ಲಿ ಥರ್ಮಲ್ ಸ್ಕ್ಯಾನರ್ ನಡೆಸಲಾಗುತ್ತಿದೆ. ಅಲ್ಲದೆ, ಮಾಸ್ಕ್ ಧರಿಸದವರಿಗೆ ಪ್ರವೇಶಕ್ಕೆ ಅವಕಾಶ ನೀಡುವುದಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ. 

ಕೊರೋನಾ ಸಾಂಕ್ರಾಮಿಕ ಸಂದರ್ಭದಲ್ಲಿ ಕಾರ್ಯಕ್ರಮ ನಡೆಸುವುದು ದೊಡ್ಡ ಸವಾಲಾಗಿದೆ. ಮುಂದಿನ ವಾರಗಳಲ್ಲಿ ಪರಿಸ್ಥಿತಿಯನ್ನು ಅವಲೋಕಿಸಿ ನಿರ್ಧಾರನಗಳನ್ನು ಕೈಗೊಳ್ಳಲಾಗುತ್ತದೆ ಎಂದಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com