ಜನವರಿ 1 ರಿಂದ 10, 12ನೇ ತರಗತಿ ಆರಂಭಿಸಿ: ತಾಂತ್ರಿಕ ಸಲಹಾ ಸಮಿತಿ ಶಿಫಾರಸು

ರಾಜ್ಯದಲ್ಲಿ ಕೊರೋನಾ ಸೋಂಕಿನ ಪ್ರಮಾಣ ತಗ್ಗುತ್ತಿದ್ದು, 2ನೇ ಅಲೆಯ ಲಕ್ಷಣ ಕಂಡುಬಾರದ ಹಿನ್ನೆಲೆಯಲ್ಲಿ ಜ.1ರಿಂದಲೇ 10ನೇ ತರಗತಿ ಮತ್ತು ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಶಾಲೆ ಕಾಲೇಜುಗಳಲ್ಲಿ ತರಗತಿ ಬೋಧನೆ ಆರಂಭಿಸುವಂತೆ ತಾಂತ್ರಿಕ ಸಲಹಾ ಸಮಿತಿ ಸರ್ಕಾರಕ್ಕೆ ಶಿಫಾರಸು ಮಾಡಿದೆ ಎಂದು ತಿಳಿದುಬಂದಿದೆ. 
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಸೋಂಕಿನ ಪ್ರಮಾಣ ತಗ್ಗುತ್ತಿದ್ದು, 2ನೇ ಅಲೆಯ ಲಕ್ಷಣ ಕಂಡುಬಾರದ ಹಿನ್ನೆಲೆಯಲ್ಲಿ ಜ.1ರಿಂದಲೇ 10ನೇ ತರಗತಿ ಮತ್ತು ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಶಾಲೆ ಕಾಲೇಜುಗಳಲ್ಲಿ ತರಗತಿ ಬೋಧನೆ ಆರಂಭಿಸುವಂತೆ ತಾಂತ್ರಿಕ ಸಲಹಾ ಸಮಿತಿ ಸರ್ಕಾರಕ್ಕೆ ಶಿಫಾರಸು ಮಾಡಿದೆ ಎಂದು ತಿಳಿದುಬಂದಿದೆ. 

ತಾಂತ್ರಿಕ ಸಲಹಾ ಸಮಿತಿ ಶಿಫಾರಸು ಕುರಿತಂತೆ ಡಿಸೆಂಬರ್ ಕೊನೆಯ ವಾರದಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ ಅವರ ಅಧ್ಯಕ್ಷತೆಯಲ್ಲಿ ಶಿಕ್ಷಣ, ಆರೋಗ್ಯ ಸೇರಿದಂತೆ ವಿವಿಧ ಇಲಾಖೆಯ ಸಚಿವರು, ಉನ್ನತಾಧಿಕಾರಿಗಳೊಂದಿಗೆ ಮಹತ್ವದ ಸಭೆಯೊಂದು ನಡೆಯಲಿದ್ದು, ಸಭೆಯಲ್ಲಿ ಸರ್ಕಾರ ಅಂತಿಮ ನಿರ್ಧಾರ ಕೈಗೊಳ್ಳಲಿದೆ ಎಂದು ತಿಳಿದುಬಂದಿದೆ. 

ತರಗತಿ ಆರಂಭ ಕುರಿತು ನಿನ್ನೆಯಷ್ಟೇ ರಾಜ್ಯ ಕೋವಿಡ್ ತಾಂತ್ರಿಕ ಸಲಹಾ ಸಮಿತಿಯ ಸದಸ್ಯರು ನಿನ್ನೆಯಷ್ಟೇ ಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ. 

10 ಮತ್ತು 12ನೇ ತರಗತಿಗಳನ್ನು ಆರಂಭಿಸಲು ಸರ್ಕಾರ ಸಿದ್ಧತೆಗಳನ್ನು ನಡೆಸಬೇಕಿದೆ. ಆದರೆ, ನಿಯಂತ್ರಿತ ಸಂಖ್ಯೆಯಲ್ಲಿ ವಿದ್ಯಾರ್ಥಿಗಳು ಆಗಮಿಸುವಂತೆ ನೋಡಿಕೊಳ್ಳಬೇಕು. ವಾರದಲ್ಲಿ ಎರಡು ಬಾರಿ ವಿದ್ಯಾರ್ಥಿಗಳು ತರಗತಿಗಳಿಗೆ ಬರುವಂತೆ ನೋಡಿಕೊಳ್ಳಬೇಕು. 

10 ಮತ್ತು 12ನೇ ತರಗತಿಯ ಹಾಗೂ ಸ್ಪರ್ಧಾತ್ಮಕ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಇದರಿಂದ ಪ್ರಯೋಜನವಾಗಲಿದೆ. 10 ಮತ್ತು 12ನೇ ತರಗತಿ ಆರಂಭವಾದ ಬಳಿಕ ಪರಿಸ್ಥಿತಿ ಅವಲೋಕಿಸಿ ಇತರೆ ತರಗತಿ ಆರಂಭ ಕುರಿತು ನಿರ್ಧಾರ ಕೈಗೊಳ್ಳಬಹುದಾಗಿದೆ ಎಂದು ತಿಳಿಸಿದೆ ಎಂದು ತಿಳಿದುಬಂದಿದೆ. 

ಕೋವಿಡ್ ಸಲಹಾ ಸಮಿತಿ ವರದಿ ಆಧರಿಸಿ ಶಾಲಾರಂಭ : ಸಚಿವ ಸುರೇಶ್ ಕುಮಾರ್
ರಾಜ್ಯ ಕೋವಿಡ್ ತಾಂತ್ರಿಕ ಸಲಹಾ ಸಮಿತಿ ನೀಡಿರುವ ವರದಿಯ ಆಧಾರದ ಲ್ಲಿ ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಿ ಪ್ರಸ್ತುತ ವರ್ಷದಲ್ಲಿ ಶಾಲಾರಂಭ ಮಾಡಲು ಕ್ರಮ ಕೈಗೊಳ್ಳಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ತಿಳಿಸಿದ್ದಾರೆ.

ವಿಧಾನಸೌಧದಲ್ಲಿ ಆರೋಗ್ಯ ಇಲಾಖೆ ಅಧಿಕಾರಿಗಳು ಮತ್ತು ರಾಜ್ಯ ಕೋವಿಡ್ ತಾಂತ್ರಿಕ ಸಲಹಾ ಸಮಿತಿ ಸದ ಸ್ಯರೊಂದಿಗೆ ಚರ್ಚೆ ನಡೆಸಿದ ನಂತರ ಮಾತನಾಡಿದ ಅವರು,ಇಂದಿನ ಸಭೆಯಲ್ಲಿ ರಾಜ್ಯದ ಕೋವಿಡ್ ಪರಿಸ್ಥಿತಿ ಕುರಿತಂತೆ ಶಾಲೆಗಳ ಆರಂಭದ ಹಿನ್ನೆಲೆಯಲ್ಲಿ ಸುದೀರ್ಘವಾಗಿ ಚರ್ಚಿಸಲಾಯಿತು. 

ರಾಜ್ಯದ ಪ್ರಸ್ತುತ ಕೋವಿಡ್ ಪ್ರಸರಣ, ಕೋವಿಡ್ ಪಾಸಿಟಿವ್ ಪ್ರಕರಣಗಳ ದಾಖಲು,ಮರಣ ಪ್ರಮಾಣ ಸೇರಿದಂತೆ ಕೋವಿಡ್ ಗೆ ಸಂಬಂಧಿಸಿ ದಂತೆ ಎಲ್ಲ ಸ್ತರಗಳಲ್ಲಿ ಚರ್ಚೆ ನಡೆಸಿ ಶಾಲೆಗಳ ಆರಂಭದ ವಿಚಾರದಲ್ಲಿ ಕೈಗೊಳ್ಳಬಹುದಾದ ಎಲ್ಲ ಸಂಗತಿಗ ಳನ್ನು ಸಮಿತಿ ಸದಸ್ಯರು,ಆರೋಗ್ಯ ಇಲಾಖೆ ಅಧಿಕಾರಿಗಳು ಮತ್ತು ಶಿಕ್ಷಣ ಇಲಾಖೆ ಅಧಿಕಾರಿಗಳೊಂದಿಗೆ ಸುದೀ ರ್ಘವಾಗಿ ಚರ್ಚಿಸಲಾಯಿತು ಎಂದು ಸಚಿವರು ವಿವರಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com