ಬೆಂಗಳೂರು: ದುಷ್ಕರ್ಮಿಗಳಿಂದ ಇಬ್ಬರ ಮೇಲೆ ದಾಳಿ; ಮಗ ಸಾವು, ತಾಯಿ ಸ್ಥಿತಿ ಗಂಭೀರ

ಅಪರಿಚಿತ ದುಷ್ಕರ್ಮಿಗಳು ದಾಳಿ ನಡೆಸಿದ ಹಿನ್ನೆಲೆಯಲ್ಲಿ 12 ವರ್ಷದ ಬಾಲಕ ಸಾವನ್ನಪ್ಪಿದ್ದು, ಆತನ ತಾಯಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
Updated on

ಬೆಂಗಳೂರು: ಅಪರಿಚಿತ ದುಷ್ಕರ್ಮಿಗಳು ದಾಳಿ ನಡೆಸಿದ ಹಿನ್ನೆಲೆಯಲ್ಲಿ 12 ವರ್ಷದ ಬಾಲಕ ಸಾವನ್ನಪ್ಪಿದ್ದು, ಆತನ ತಾಯಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

ರಾಜು ಮೃತ ಬಾಲಕ, ಆತನ ತಾಯಿ ಹನುಮಂತಮ್ಮ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಆಕೆಯ ಪತಿ ಬಸವರಾಜು ಜ್ಞಾನ ಗಂಗಾ ನಗರದಲ್ಲಿ ದಿನಗೂಲಿ ಕೆಲಸಗಾರನಾಗಿದ್ದಾರೆ. ಇದೇ ಸ್ಥಳದಲ್ಲಿ ಈ ಕುಟುಂಬ ಶೆಡ್ ನಲ್ಲಿ ವಾಸವಾಗಿದ್ದಾರೆ.

ಗುರುವಾರ ಮಧ್ಯರಾತ್ರಿ 2 ಗಂಟೆ ಸುಮಾರಿನಲ್ಲಿ ಘಟನೆ ನಡೆದಿದೆ, ನೆರೆಹೊರೆಯವರು ಇವರ ಕಿರುಚಾಟ ಕೇಳಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಪೊಲೀಸರು ಸ್ಥಳಕ್ಕೆ ಬರುವಷ್ಟರಲ್ಲಿ ತಾಯಿ ಮತ್ತು ಮಗ ಇಬ್ಬರು ರಕ್ತದ ಮಡುವಿನಲ್ಲಿ ಬಿದ್ದಿದ್ದರು, ಬಾಲಕ ಸಾವನ್ನಪ್ಪಿದ್ದು, ಆತನ ತಾಯಿ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದಳು. 

ಸದ್ಯ ಚಿಕಿತ್ಸೆ ಪಡೆಯುತ್ತಿರುವ ಹನುಮಂತಮ್ಮ ಅಪಾಯದಿಂದ ಪಾರಾಗಿದ್ದಾಳೆ. ಬಾಲಕನ ತಲೆಯ ಮೇಲೆ ಸಿಮೆಂಟ್ ಇಟ್ಟಿಗೆಯಿಂದ ಹೊಡೆದು ಜಜ್ಜಲಾಗಿದೆ. ಅದೇ ಇಟ್ಟಿಗೆಯಿಂದ ಮಹಿಳೆ ಮೇಲೆ ಹಲ್ಲೆ ಮಾಡಲಾಗಿದೆ. 

ಈ ಕುಟಂಬ ಬಳ್ಳಾರಿ ಮೂಲದ್ದಾಗಿದೆ. ಘಟನೆ ನಡೆದ ಸಂದರ್ಭದಲ್ಲಿ ಬಸವರಾಜು ತಮ್ಮ ಊರಿಗೆ ತೆರಳಿದ್ದ ಎನ್ನಲಾಗಿದೆ. ಇನ್ನು ಪ್ರಕರಣ ದಾಖಲಿಸಿಕೊಂಡಿರುವ ಜ್ಞಾನಭಾರತಿ ಪೊಲೀಸರು ಆರೋಪಿಗಳನ್ನು ಶೀಘ್ರವೇ ಬಂಧಿಸುವುದಾಗಿ ತಿಳಿಸಿದ್ದಾರೆ. ಘಟನೆಗೆ ಕಾರಣ ತಿಳಿದು ಬಂದಿಲ್ಲ.
 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com