ಕರ್ತವ್ಯನಿರತ ಪೊಲೀಸರಿಗೆ ಬಾಡಿ ಕ್ಯಾಮೆರಾ ಕಡ್ಡಾಯ: ಸರ್ಕಾರಕ್ಕೆ ಹೈಕೋರ್ಟ್ ನೊಟೀಸ್
ಬೆಂಗಳೂರು: ಕರ್ತವ್ಯನಿರತ ಪೊಲೀಸರು ಕಡ್ಡಾಯವಾಗಿ ಬಾಡಿ ಕ್ಯಾಮೆರಾ ಧರಿಸಲು ನಿರ್ದೇಶಿಸಲು ಕೋರಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಆಧರಿಸಿ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್ ಜಾರಿ ಮಾಡಿದೆ. ಇದರಿಂದ ಪೊಲೀಸ್ ಸಿಬ್ಬಂದಿಯಲ್ಲಿನ ಭ್ರಷ್ಟಾಚಾರವನ್ನು ತಡೆಗಟ್ಟಲು ಮತ್ತು ಕೋವಿಡ್ -19 ಕಾರಣದಿಂದಾಗಿ ನಾಗರಿಕರ ಸುರಕ್ಷತೆಯ ಹಿತದೃಷ್ಟಿಯಿಂದ ಕೂಡಿದೆ ಎಂದು ಅರ್ಜಿಯಲ್ಲಿ ತಿಳಿಸಲಾಗಿದೆ.
ಬೆಂಗಳೂರಿನ ವಕೀಲೆ ಗೀತಾ ಮಿಶ್ರ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎ.ಎಸ್. ಓಕಾ ನೇತೃತ್ವದ ವಿಭಾಗೀಯ ನ್ಯಾಯಪೀಠ ಈ ಆದೇಶ ನೀಡಿದೆ. ಪ್ರತಿವಾದಿಗಳಾದ ಗೃಹ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ, ರಾಜ್ಯ ಪೊಲೀಸ್ ಮಹಾನಿರ್ದೇಶಕ, ನಗರ ಪೊಲೀಸ್ ಆಯುಕ್ತ ಮತ್ತು ಸಂಚಾರ ವಿಭಾಗದ ಹೆಚ್ಚುವರಿ ಪೊಲೀಸ್ ಆಯುಕ್ತರಿಗೆ ನೋಟಿಸ್ ಜಾರಿಗೊಳಿಸಿ ವಿಚಾರಣೆ ಮುಂದೂಡಿತು.
ಬೆಂಗಳೂರು ನಗರದಲ್ಲಿ ಕರ್ತವ್ಯನಿರತ ಪೊಲೀಸರು ಸಮವಸ್ತ್ರಕ್ಕೆ ಅಳವಡಿಸಿಕೊಳ್ಳಲು 75 ಲಕ್ಷ ರು. ವೆಚ್ಚದಲ್ಲಿ 50 ಬಾಡಿ ಕ್ಯಾಮೆರಾ ಖರೀದಿಸಲಾಗಿದೆ. ಆದರೆ, ಬಳಕೆ ಮಾಡಿಲ್ಲ. 2020ರ ಸೆ.10ರಂದು ನಗರ ಪೊಲೀಸ್ ಆಯುಕ್ತರಿಗೆ ಮನವಿ ಪತ್ರ ಸಲ್ಲಿಸಲಾಗಿದೆ. ಈವರೆಗೆ ಮನವಿ ಪರಿಗಣಿಸಿಲ್ಲ’ . ‘ಬಾಡಿ ಕ್ಯಾಮೆರಾ ಧರಿಸುವುದರಿಂದ ಪೊಲೀಸ್ ಸಿಬ್ಬಂದಿಯ ಭ್ರಷ್ಟಾಚಾರಕ್ಕೆ ಕಡಿವಾಣ ಹಾಕಬಹುದು. ಸಿಬ್ಬಂದಿಯ ಕರ್ತವ್ಯ ನಿರ್ವಹಣೆಯನ್ನು ಠಾಣೆಯಿಂದಲೇ ಹಿರಿಯ ಅಧಿಕಾರಿಗಳು ಗಮನಿಸಿ ಮೇಲ್ವಿಚಾರಣೆ ನಡೆಸಬಹುದು.
ಬಾಡಿ ಕ್ಯಾಮೆರಾ ಧರಿಸುವುದರಿಂದ ಪೊಲೀಸರಿಗೆ ರಕ್ಷಣೆ ಸಿಗಲಿದೆ. ಕಿಡಿಗೇಡಿಗಳಿಗೂ ಭಯ ಹುಟ್ಟುತ್ತದೆ’ ಎಂದು ಹೇಳಿದರು. ‘ಈಗಾಗಲೇ ಖರೀದಿಸಿರುವ ಕ್ಯಾಮೆರಾ ಬಳಸಲು ನಗರಪೊಲೀಸ್ ಆಯುಕ್ತರಿಗೆ ನಿರ್ದೇಶನ ನೀಡಬೇಕು ಎಂದು ಅರ್ಜಿಯಲ್ಲಿ ಮನವಿ ಮಾಡಲಾಗಿದೆ.
Follow KannadaPrabha channel on WhatsApp
KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ