ರಾಜ್ಯ

ತಿಂಗಳುಗಳ ಬಳಿಕ ರಾಜ್ಯದಲ್ಲಿ ಅತೀ ಕಡಿಮೆ 772 ಕೊರೋನಾ ಪ್ರಕರಣ ಪತ್ತೆ, 7 ಸಾವು!

ತಿಂಗಳುಗಳ ಬಳಿಕ ರಾಜ್ಯದಲ್ಲಿ ಅತೀ ಕಡಿಮೆ 772 ಕೊರೋನಾ ಪ್ರಕರಣ ಪತ್ತೆ, 7 ಸಾವು!
ಕೊರೋನಾ ವೈರಸ್
Published On :

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಅಬ್ಬರ ಕಡಿಮೆಯಾಗುತ್ತಿದ್ದು, ಕಳೆದ ಎರಡೂ ತಿಂಗಳ ಬಳಿಕ ರಾಜ್ಯದಲ್ಲಿ ಅತೀ ಕಡಿಮೆ 772 ಕೊರೋನಾ ಪ್ರಕರಣಗಳು ವರದಿಯಾಗಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 9,10,241ಕ್ಕೆ ಏರಿಕೆಯಾಗಿದೆ.

ಇನ್ನು ಕಳೆದ 24 ಗಂಟೆಯಲ್ಲಿ ರಾಜ್ಯದಲ್ಲಿ ಕೊರೋನಾ ಸೋಂಕಿನಿಂದ 7 ಮಂದಿ ಸಾವನ್ನಪ್ಪಿದ್ದಾರೆ. ಒಟ್ಟಾರೆ ರಾಜ್ಯದಲ್ಲಿ ಸೋಂಕಿನಿಂದ 12,016 ಮಂದಿ ಬಲಿಯಾಗಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.

ಇಂದು ಬೆಂಗಳೂರಿನಲ್ಲಿ ಐವರು, ಹಾಸನ ಹಾಗೂ ಬಳ್ಳಾರಿಯಲ್ಲಿ ತಲಾ ಒಬ್ಬರು ಕೊರೋನಾದಿಂದ ಮೃತಪಟ್ಟಿದ್ದಾರೆ.

ಬೆಂಗಳೂರಿನಲ್ಲಿ ಇಂದು 363 ಮಂದಿಗೆ ಸೋಂಕು ದೃಢಪಟ್ಟಿದ್ದು, ಇದರೊಂದಿಗೆ ಸೋಂಕಿತರ ಸಂಖ್ಯೆ 3,83,231ಕ್ಕೆ ಏರಿಕೆಯಾಗಿದೆ. ಇನ್ನು ಸೋಂಕಿಗೆ 5 ಬಲಿಯಾಗಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.

ರಾಜ್ಯದಲ್ಲಿ ಇಂದು 1,261 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದರೊಂದಿಗೆ ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ 8,84,205ಕ್ಕೆ ಏರಿಕೆಯಾಗಿದೆ. ಇನ್ನು 14,001 ಸಕ್ರೀಯ ಪ್ರಕರಣಗಳಿದ್ದು, ಈ ಪೈಕಿ 219 ಮಂದಿ ಕೋವಿಡ್ ಆಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.