ರಾಜ್ಯ

ಮಾರ್ಚ್ ತಿಂಗಳಲ್ಲಿ ಎಸ್ ಎಸ್ ಎಲ್ ಸಿ, ಪಿಯುಸಿ ಪರೀಕ್ಷೆ ನಡೆಯುವುದಿಲ್ಲ- ಸುರೇಶ್ ಕುಮಾರ್

ಮಾರ್ಚ್ 2021 ರಲ್ಲಿ‌ ಎಸ್ಎಸ್ಎಲ್ ಸಿ ಹಾಗೂ ಪಿಯುಸಿ ಪರೀಕ್ಷೆಗಳು ನಡೆಯುವುದಿಲ್ಲವೆಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ಖಚಿತಪಡಿಸಿದ್ದಾರೆ.

ಮಾರ್ಚ್ ತಿಂಗಳಲ್ಲಿ ಎಸ್ ಎಸ್ ಎಲ್ ಸಿ, ಪಿಯುಸಿ ಪರೀಕ್ಷೆ ನಡೆಯುವುದಿಲ್ಲ- ಸುರೇಶ್ ಕುಮಾರ್
ಎಸ್ . ಸುರೇಶ್ ಕುಮಾರ್
Published On :

ಬೆಂಗಳೂರು: ಮಕ್ಕಳ ಭವಿಷ್ಯದ ಹಿತದೃಷ್ಟಿಯಿಂದ ಶಿಕ್ಷಣ ಇಲಾಖೆ ಎಲ್ಲ ಪೂರ್ವ ಸಿದ್ಧತೆಗಳನ್ನು ಕೈಗೊಳ್ಳುತ್ತಿ ದ್ದು ಶಾಲಾರಂಭವೆನ್ನುವ ಪ್ರಕ್ರಿಯೆ ಸುರಕ್ಷಿತವಾಗಿ, ಸುಲಲಿತವಾಗಿ ನಿರ್ವಹಣೆಯಾಗಲಿದೆ ಹಾಗೂ ಲಭ್ಯವಾಗುವ ಸೀಮಿತ ಅವಧಿಯ ಹಿನ್ನೆಲೆಯಲ್ಲಿ  ಮಾರ್ಚ್ 2021 ರಲ್ಲಿ‌ ಎಸ್ಎಸ್ಎಲ್ ಸಿ ಹಾಗೂ ಪಿಯುಸಿ ಪರೀಕ್ಷೆಗಳು ನಡೆಯುವುದಿಲ್ಲವೆಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ಖಚಿತಪಡಿಸಿದ್ದಾರೆ.

ಸಂವಾದದಲ್ಲಿ ಮಾತನಾಡಿದ ಸುರೇಶ್ ಕುಮಾರ್, ಮಕ್ಕಳಿಗೆ ಹೊರೆಯಾಗದ ರೀತಿ ಪಠ್ಯಕ್ರಮವನ್ನು ಅಂತಿಮ ಗೊಳಿಸಲಾಗುತ್ತದೆ. ಕನಿಷ್ಟ ಕಲಿಕೆಗೆ ಒತ್ತು ನೀಡಲಾಗುತ್ತದೆಯಲ್ಲದೇ ವಿಶೇಷವಾಗಿ ರಾಷ್ಟ್ರೀಯ ಮಟ್ಟದ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಹಾಜರಾಗುವ ಹಿರಿಯ ತರಗತಿಗಳ ವಿದ್ಯಾರ್ಥಿಗಳ ಕಲಿಕೆಯ ಅವಶ್ಯಕತೆಗಳನ್ನು ಸಹ ಗಮನದಲ್ಲಿಟ್ಟುಕೊಂಡು ಕೆಲವೇ ದಿನಗಳಲ್ಲಿ ಸೂಕ್ತ ನಿರ್ಧಾರ ತೆಗೆದುಕೊಳ್ಳಲಾಗುತ್ತದೆ‌ ಎಂದು ಅವರು ಹೇಳಿದ್ದಾರೆ. 

ವಿಶೇಷವಾಗಿ ಗ್ರಾಮೀಣ ಭಾಗಗಳ ಮಕ್ಕಳ ಹಿತದೃಷ್ಟಿಯಿಂದ ಆರಂಭಿಸಲಾದ  ವಿದ್ಯಾಗಮ ಕಾರ್ಯಕ್ರಮವನ್ನು ಖಾಸಗಿ ಶಾಲೆಗಳು ಸಹ ಅಳವಡಿಸಿಕೊಳ್ಳಬೇಕೆಂದು ಸಲಹೆ ನೀಡಿರುವ ಸಚಿವರು, ಖಾಸಗಿ ಶಾಲೆಗಳ ಸಮಸ್ಯೆಗಳನ್ನು ಬಗೆಹರಿಸಲು ಸರ್ಕಾರ ಮುಕ್ತ ನಿಲುವನ್ನು ಹೊಂದಿದೆ ಎಂದಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.