ಧಾರವಾಡ: ಚುನಾವಣೆ ದಿನವೇ ಗ್ರಾಮ ಪಂಚಾಯಿತಿ ಅಭ್ಯರ್ಥಿ ಆತ್ಮಹತ್ಯೆಗೆ ಶರಣು

ಗ್ರಾಮ ಪಂಚಾಯತಿ ಚುನಾವಣೆ ದಿನವೇ ಅಭ್ಯರ್ಥಿಯೊಬ್ಬರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಧಾರವಾಡ ತಾಲೂಕಿನ ಗರಗ ಗ್ರಾಮದಲ್ಲಿ ನಡೆದಿದೆ. 
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
Updated on

ಧಾರವಾಡ: ಗ್ರಾಮ ಪಂಚಾಯತಿ ಚುನಾವಣೆ ದಿನವೇ ಅಭ್ಯರ್ಥಿಯೊಬ್ಬರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಧಾರವಾಡ ತಾಲೂಕಿನ ಗರಗ ಗ್ರಾಮದಲ್ಲಿ ನಡೆದಿದೆ. 

ದಾಮೋದರ ಯಲಿಗಾರ (36) ಆತ್ಮಹತ್ಯೆಗೆ ಶರಣಾದ ವ್ಯಕ್ತಿಯಾಗಿದ್ದಾರೆ. ಗರಗ ಗ್ರಾಮದ 2ನೇ ವಾರ್ಡ್ ನ ಅಭ್ಯರ್ಥಿಯಾಗಿ‌ ದಾಮೋದರ ಯಲಿಗಾರ ಅವರು ಕಣಕ್ಕಿಳಿದಿದ್ದರು. ಆದರೆ, ಚುನಾವಣೆ ದಿನವೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. 

ಆತ್ಮಹತ್ಯೆಗೆ ನಿಖರ ಕಾರಣಗಳು ತಿಳಿದುಬಂದಿಲ್ಲ. ಆತ್ಮಹತ್ಯೆ ವಿಚಾರ ತಿಳಿಯುತ್ತಿದ್ದಂತೆಯೇ ಯಲಿಗಾರ ಅವರ ಬೆಂಬಲಿಗರು ಹಾಗೂ ಗ್ರಾಮಸ್ಥರು ನಿವಾಸಕ್ಕೆ ಆಗಿಮಿಸಿದ್ದಾರೆ. 

ಈ ನಡುವೆ ಪ್ರಕರಣ ಸಂಬಂಧ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ದೂರು ದಾಖಲಿಸಿಕೊಂಡಿದ್ದಾರೆ. ಚುನಾವಣೆಯಲ್ಲಿ ಸೋಲಿನ ಭೀತಿಯಿಂದಾಗಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆಂದು ಹೇಳಲಾಗುತ್ತಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com