ನ್ಯಾಯಾಂಗದ ರೀತಿ ವರ್ತಿಸಲು ಎಸ್ ಸಿ/ ಎಸ್ ಟಿ ಆಯೋಗಕ್ಕೆ ಅಧಿಕಾರವಿಲ್ಲ: ಹೈಕೋರ್ಟ್

ಕರ್ನಾಟಕ ರಾಜ್ಯ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಆಯೋಗ ನ್ಯಾಯಾಂಗ ಪಾತ್ರ ನಿರ್ವಹಿಸಲು ಸಾಧ್ಯವಿಲ್ಲ ಎಂದು ಕರ್ನಾಟಕ ಹೈಕೋರ್ಟ್ ಅಭಿಪ್ರಾಯ ಪಟ್ಟಿದೆ.
ಕರ್ನಾಟಕ ಹೈಕೋರ್ಟ್
ಕರ್ನಾಟಕ ಹೈಕೋರ್ಟ್

ಬೆಂಗಳೂರು: ಕರ್ನಾಟಕ ರಾಜ್ಯ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಆಯೋಗ ನ್ಯಾಯಾಂಗ ಪಾತ್ರ ನಿರ್ವಹಿಸಲು ಸಾಧ್ಯವಿಲ್ಲ ಎಂದು ಕರ್ನಾಟಕ ಹೈಕೋರ್ಟ್ ಅಭಿಪ್ರಾಯ ಪಟ್ಟಿದೆ.

ಪದವಿ ಪೂರ್ವ ಶಿಕ್ಷಣ ಇಲಾಖೆ ನಿರ್ದೇಶಕರ ಕಚೇರಿಯಲ್ಲಿ ಕೆಲಸ ಮಾಡುತ್ತಿರುವ ಪರಿಶಿಷ್ಟ ಜಾತಿಗೆ ಸೇರಿದ ಇಬ್ಬರು ನೌಕರರ ನಡುವೆ ಈ ವಿವಾದವಿತ್ತು. ಎಂ.ಬಿ.ಸಿದ್ದಲಿಂಗಸ್ವಾಮಿ ಅವರು ಅಧೀಕ್ಷಕರಾಗಿ 2012ರಲ್ಲಿ ಬಡ್ತಿ ಹೊಂದಿದ್ದರು. ಕೆ.ಆರ್‌.ಮುರುಳೀಧರ್ ಅವರು 2015ರಲ್ಲಿ ಬಡ್ತಿ ಹೊಂದಿದ್ದರು.

ಮುರುಳೀಧರ್ ಅವರು ಎಸ್‌ಸಿಎಸ್‌ಟಿ ಆಯೋಗಕ್ಕೆ ಅರ್ಜಿ ಸಲ್ಲಿಸಿ ಸಿದ್ದಲಿಂಗಸ್ವಾಮಿ ಅವರಿಗಿಂತ ಸೇವಾ ಹಿರಿತನ ಇರುವ ಕಾರಣ ಎಲ್ಲಾ ಸೌಲಭ್ಯಗಳನ್ನು ಕೊಡಿಸಬೇಕು ಎಂದು ಕೋರಿದ್ದರು. ‘2012 ರಿಂದ ಜಾರಿಗೆ ಬರುವಂತೆ ಸೌಲಭ್ಯಗಳನ್ನು ಒದಗಿಸಬೇಕು’ ಎಂದು 2016ರಲ್ಲಿ ಆಯೋಗ ಆದೇಶ ಹೊರಡಿಸಿತ್ತು. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com