ಕಳೆದ 7 ದಿನಗಳಲ್ಲಿ 12 ಜಿಲ್ಲೆಗಳಲ್ಲಿ ಕೋವಿಡ್-19ನಿಂದ ಮೃತಪಟ್ಟವರ ಸಂಖ್ಯೆ ಶೂನ್ಯ, ಉತ್ತಮ ಚಿಕಿತ್ಸೆ, ಅರಿವು ಕಾರಣ!

ಕಳೆದ ಏಳು ದಿನಗಳಲ್ಲಿ ಕರ್ನಾಟಕದ 12 ಜಿಲ್ಲೆಗಳಲ್ಲಿ ಕೋವಿಡ್-19ನಿಂದ ಮೃತಪಟ್ಟವರ ಸಂಖ್ಯೆ ಶೂನ್ಯವಾಗಿರುವುದು ಖುಷಿಯ ವಿಚಾರ. ಇನ್ನು 8 ಜಿಲ್ಲೆಗಳಲ್ಲಿ ಶೇಕಡಾ 1ಕ್ಕಿಂತ ಕಡಿಮೆ ಇದೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಬೆಂಗಳೂರು: ಕಳೆದ ಏಳು ದಿನಗಳಲ್ಲಿ ಕರ್ನಾಟಕದ 12 ಜಿಲ್ಲೆಗಳಲ್ಲಿ ಕೋವಿಡ್-19ನಿಂದ ಮೃತಪಟ್ಟವರ ಸಂಖ್ಯೆ ಶೂನ್ಯವಾಗಿರುವುದು ಖುಷಿಯ ವಿಚಾರ. ಇನ್ನು 8 ಜಿಲ್ಲೆಗಳಲ್ಲಿ ಶೇಕಡಾ 1ಕ್ಕಿಂತ ಕಡಿಮೆ ಇದೆ.

ಯಾದಗಿರಿ, ಶಿವಮೊಗ್ಗ, ರಾಮನಗರ, ಮಂಡ್ಯ, ಹಾವೇರಿ, ಗದಗ, ಧಾರವಾಡ, ದಾವಣಗೆರೆ, ಚಿತ್ರದುರ್ಗ,ಚಿಕ್ಕಮಗಳೂರು, ಬೆಳಗಾವಿ, ಬಾಗಲಕೋಟೆ ಮತ್ತು ಇತರ ಜಿಲ್ಲೆಗಳಲ್ಲಿ ಕೋವಿಡ್-19 ಸೋಂಕಿನಿಂದ ಮೃತಪಡುವವರ ಸಂಖ್ಯೆ ಗಣನೀಯವಾಗಿ ಇಳಿಕೆಯಾಗಿದೆ. 

ಬಳ್ಳಾರಿ, ಚಾಮರಾಜನಗರ, ಹಾಸನ, ಬೆಂಗಳೂರು ಗ್ರಾಮಾಂತರ, ಕೊಪ್ಪಳ, ಬೀದರ್, ಉಡುಪಿ, ರಾಯಚೂರು, ಕೊಡಗು ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಕಳೆದ ಏಳು ದಿನಗಳಲ್ಲಿ ಕೋವಿಡ್ ನಿಂದ ಮೃತಪಡುವವರ ಸಂಖ್ಯೆ ಹೆಚ್ಚಾಗಿದೆ.

ಕೋವಿಡ್ ಪ್ರಕರಗಳು ಎಷ್ಟು ವರದಿಯಾಗುತ್ತವೆ ಎಂಬುದರ ಆಧಾರದ ಮೇಲೆ ಸಾವಿನ ಸಂಖ್ಯೆಯು ಅವಲಂಬಿತವಾಗಿರುತ್ತದೆ. ಹೆಚ್ಚೆಚ್ಚು ಸೋಂಕು ವರದಿಯಾದರೆ ಸಾವಿನ ಸಂಖ್ಯೆ ಕೂಡ ಜಾಸ್ತಿಯಾಗುವ ಸಾಧ್ಯತೆಯಿದೆ ಎನ್ನುತ್ತಾರೆ ರಾಜ್ಯ ಕೋವಿಡ್ ಸಾವಿನ ಅಂಕಿಅಂಶ ಸಮಿತಿಯ ಸದಸ್ಯ ಹಾಗೂ ಹಿರಿಯ ಶ್ವಾಸಕೋಶತಜ್ಞ ಡಾ ಕೆ ಎಸ್ ಸತೀಶ್. 

ಕೊರೋನಾದಿಂದ ಸಾಯುವವರ ಸಂಖ್ಯೆ ಕಡಿಮೆಯಿರುವ ಜಿಲ್ಲೆಗಳನ್ನು ನೋಡಿದರೆ ಸೋಂಕಿತರಿಗೆ ಬೇಗನೆ ಚಿಕಿತ್ಸೆ ದೊರಕುತ್ತದೆ. ಸೋಂಕಿತರಲ್ಲಿ ಅರಿವು ಚೆನ್ನಾಗಿರುತ್ತದೆ ಎಂದು ಗೊತ್ತಾಗುತ್ತದೆ. ಸೋಂಕಿನಿಂದ ಸಾಯುವವರ ಸಂಖ್ಯೆ ಹೆಚ್ಚಿರುವ ಜಿಲ್ಲೆಗಳಲ್ಲಿ ಜನರಿಗೆ ಬೇಗನೆ ಸೂಕ್ತ ಸಮಯಕ್ಕೆ ಸೂಕ್ತ ಚಿಕಿತ್ಸೆ ಸಿಗುತ್ತಿಲ್ಲ ಎಂದು ಮತ್ತು ಅರಿವಿನ ಕೊರತೆಯಿರುವುದು ಎದ್ದು ಕಾಣುತ್ತದೆ ಎನ್ನುತ್ತಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com