ಬೆಂಗಳೂರು: ಡಿವೈಡರ್ ಹಾರಿದ ಕಾರು; ಸರಣಿ ಅಪಘಾತದಿಂದ 9 ಮಂದಿಗೆ ಗಾಯ

ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ರಸ್ತೆಯ ಬ್ಯಾಟರಾಯನಪುರ ಮೇಲ್ಸೇತುವೆ ಬಳಿ ಐದು ಕಾರುಗಳ ನಡುವೆ ಸರಣಿ ಅಪಘಾತ ಸಂಭವಿಸಿದ ಪರಿಣಾಮ 9 ಮಂದಿ ಗಾಯಗೊಂಡಿದ್ದಾರೆ. 
ಡಿವೈಡರ್ ಜಂಪ್ ಮಾಡಿದ ಕಾರು
ಡಿವೈಡರ್ ಜಂಪ್ ಮಾಡಿದ ಕಾರು
Updated on

ಬೆಂಗಳೂರು: ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ರಸ್ತೆಯ ಬ್ಯಾಟರಾಯನಪುರ ಮೇಲ್ಸೇತುವೆ ಬಳಿ ಐದು ಕಾರುಗಳ ನಡುವೆ ಸರಣಿ ಅಪಘಾತ ಸಂಭವಿಸಿದ ಪರಿಣಾಮ 9 ಮಂದಿ ಗಾಯಗೊಂಡಿದ್ದಾರೆ. 

ಬೆಂಗಳೂರು ಕಡೆಗೆ ವೇಗವಾಗಿ ಬಂದ ಕಾರೊಂದು, ನಿಯಂತ್ರಣ ಕಳೆದುಕೊಂಡಿದ್ದರಿಂದ ವಿಭಜಕ ಹಾರಿ, ಎದುರು ಮಾರ್ಗದಲ್ಲಿ ಬಂದ ಕಾರಿಗೆ ಡಿಕ್ಕಿ ಹೊಡೆದಿದೆ. ಬಳಿಕ ಹಿಂಬದಿಯಲ್ಲಿ ಬರುತ್ತಿದ್ದ ಮೂರು ಕಾರುಗಳು ಒಂದಕ್ಕೊಂದು ಡಿಕ್ಕಿ ಹೊಡೆದಿವೆ.

ಈ ಸರಣಿ ಅಪಘಾತವು ಬೈಕ್ ಸವಾರರ ಜಾಲಿ ರೈಡ್ ಕಾರಣವಾಗಿರುವ ಶಂಕೆ ವ್ಯಕ್ತವಾಗಿದೆ. ಭಾನುವಾರವಾದ್ದರಿಂದ ಬೈಕ್ ಸವಾರರು ಏರ್‌ಪೋರ್ಟ್ ರಸ್ತೆಯಲ್ಲಿ ನಂದಿಬೆಟ್ಟದ ಕಡೆಗೆ ಜಾಲಿ ರೈಡ್ ಹೋಗುತ್ತಿದ್ದರು ವೇಗವಾಗಿ ಬರುತ್ತಿದ್ದ ಬೈಕ್ ಸವಾರರು ಸ್ವಿಫ್ಟ್ ಕಾರನ್ನು ಹಿಂದಿಕ್ಕಿ ಚಮಕ್ ಕೊಟ್ಟಿದ್ದರು. ಈ ವೇಳೆ ಗಾಬರಿಯಾದ ಕಾರು ಚಾಲಕ, ಎದುರು ರಸ್ತೆಗೆ ನುಗ್ಗಿದ್ದ ಪರಿಣಾಮ ಕಾರು ಪಲ್ಟಿಯಾಗಿದೆ.

ಅಪಘಾತದಿಂದ ಕೆಂಪೇಗೌಡ ವಿಮಾನ ನಿಲ್ದಾಣ ರಸ್ತೆಯಲ್ಲಿ ವಾಹನ ಸಂಚಾರ ಅಸ್ಥವ್ಯಸ್ಥಗೊಂಡಿತ್ತು. ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಹೆಬ್ಬಾಳ ಸಂಚಾರ ಪೊಲೀಸರು ಧಾವಿಸಿ ಅಪಘಾತದಲ್ಲಿ ಜಖಂಗೊಂಡ ಕಾರುಗಳ ತೆರವು ಮಾಡಿ, ಗಾಯಾಳುಗಳನ್ನು ಖಾಸಗಿ ಆಸ್ಪತ್ರೆಗೆ ದಾಖಲು ಮಾಡಿದ್ದಾರೆ

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com