ಗೋ ಹತ್ಯೆ ನಿಷೇಧ ಕಾಯ್ದೆಗೆ ಸುಗ್ರೀವಾಜ್ಞೆ ಹೊರಡಿಸಲು ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ

ವಿಧಾನ ಪರಿಷತ್ತಿನಲ್ಲಿ ಮಂಡನೆಯಾಗದ ಗೋ ಹತ್ಯೆ ನಿಷೇಧ ಮಸೂದೆಯ ನ್ನು ಸುಗ್ರೀವಾಜ್ಞೆ ಮೂಲಕ ಜಾರಿಗೆ ತರಲು ಸಂಪುಟ ಸಭೆ ತೀರ್ಮಾನಿಸಿದೆ ಎಂದು ಸಚಿವ ಪ್ರಭು ಚವ್ಹಾಣ್ ತಿಳಿಸಿದ್ದಾರೆ.
ಪಶು ಸಂಗೋಪನಾ ಸಚಿವ ಪ್ರಭು ಚವ್ಹಾಣ್
ಪಶು ಸಂಗೋಪನಾ ಸಚಿವ ಪ್ರಭು ಚವ್ಹಾಣ್

ಬೆಂಗಳೂರು: ವಿಧಾನ ಪರಿಷತ್ತಿನಲ್ಲಿ ಮಂಡನೆಯಾಗದ ಗೋ ಹತ್ಯೆ ನಿಷೇಧ ಮಸೂದೆಯನ್ನು ಸುಗ್ರೀವಾಜ್ಞೆ ಮೂಲಕ ಜಾರಿಗೆ ತರಲು ಸಂಪುಟ ಸಭೆ ತೀರ್ಮಾನಿಸಿದೆ ಎಂದು ಸಚಿವ ಪ್ರಭು ಚವ್ಹಾಣ್ ತಿಳಿಸಿದ್ದಾರೆ.

ವಿಧಾನಸೌಧದಲ್ಲಿ ಸಚಿವ ಸಂಪುಟ ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,ಇಂದಿನ ಸಚಿವ ಸಂಪುಟ ಸಭೆಯಲ್ಲಿ ಕರ್ನಾಟಕ ಜಾನುವಾರು ಸಂರಕ್ಷಣೆ ಮತ್ತು ಹತ್ಯೆ ಪ್ರತಿಬಂಧಕ ನಿಯಮಾವಳಿಗೆ ಒಪ್ಪಿಗೆ ನೀಡಿದ್ದು ಸುಗ್ರೀವಾಜ್ಞೆ ಹೊರಡಿಸಲು ರಾಜ್ಯಪಾಲರಿಗೆ ಶಿಫಾರಸ್ಸು ಮಾಡಲಾಗಿದೆ ಎಂದರು. 

ಗೋವು ನಮ್ಮ ಭಾರತೀಯ ಸಂಸ್ಕೃತಿಯ, ಶ್ರದ್ದೆಯ ಹಾಗೂ ರೈತರ ಜೀವನಾಧಾರದ ಮೂಲವಾಗಿದೆ. ವರ್ಷದಿಂದ ವರ್ಷಕ್ಕೆ ಗೋವುಗಳ ಸಂಖ್ಯೆ ಗಣನೀಯವಾಗಿ ಕಡಿಮೆ ಆಗುತ್ತಿರುವುದು ನಿಜಕ್ಕೂ ಕಳವಳಕಾರಿ ಸಂಗತಿಯಾಗಿದೆ. ಇಂತಹ ಸಂದರ್ಭದಲ್ಲಿ ಪಕ್ಷಭೇದವನ್ನು ಮರೆತು ಗೋವುಗಳ ಸಂರಕ್ಷಣೆಗೆ ಎಲ್ಲರೂ ಮುಂದಾದರೆ ನಾಡಿನ ಪಶುಸಂಪತ್ತು ವೃದ್ಧಿಸುತ್ತದೆ ಎಂದು ಅವರು ಹೇಳಿದರು.

ಕೇವಲ ರಾಜಕೀಯ ದುರುದ್ದೇಶಕ್ಕೆ ಮಸೂದೆಯನ್ನು ವಿರೋಧಿಸಿ ಸಮಾಜದಲ್ಲಿ ಜನಸಾಮಾನ್ಯರ ನಡುವೆ ತಪ್ಪು ಕಲ್ಪನೆ ಮೂಡಿಸುವುದು ಅಸಹನೀಯ ಎಂದು ಸಚಿವರು ಅಭಿಪ್ರಾಯ ವ್ಯಕ್ತಪಡಿಸಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com