

ಬೆಂಗಳೂರು: ರಾಜ್ಯದಲ್ಲಿ ಕಳೆದ 24 ಗಂಟೆಗಳ ಅವಧಿಯಲ್ಲಿ 973 ಹೊಸ ಸೋಂಕು ಪ್ರಕರಣಗಳು ವರದಿಯಾಗಿದ್ದು. ಆ ಮೂಲಕ ರಾಜ್ಯದಲ್ಲಿ ಒಟ್ಟಾರೆ ಸೋಂಕಿತರ ಸಂಖ್ಯೆ 9,18,544ಕ್ಕೆ ಏರಿಕೆಯಾಗಿದೆ.
ಈ ಬಗ್ಗೆ ರಾಜ್ಯ ಆರೋಗ್ಯ ಇಲಾಖೆ ಪತ್ರಿಕಾ ಪ್ರಕಟಣೆ ಹೊರಡಿಸಿದ್ದು, ರಾಜ್ಯಾದ್ಯಂತ ಕಳೆದ 24 ಗಂಟೆಗಳ ಅವಧಿಯಲ್ಲಿ ಒಟ್ಟು 1.03 ಲಕ್ಷ ಜನರಿಗೆ ಕೋವಿಡ್ ತಪಾಸಣೆ ಮಾಡಿದ್ದು, ಈ ಪೈಕಿ 973 ಜನರಲ್ಲಿ ಕೋವಿಡ್ ದೃಢಪಟ್ಟಿದೆ.ಆ ಮೂಲಕ ರಾಜ್ಯದಲ್ಲಿ ಒಟ್ಟಾರೆ ಸೋಂಕಿತರ ಸಂಖ್ಯೆ 9,18,544ಕ್ಕೆ ಏರಿಕೆಯಾಗಿದೆ.
ಇನ್ನು ಇದೇ ಅವಧಿಯಲ್ಲಿ ಸೋಂಕಿನಿಂದ ರಾಜ್ಯದಲ್ಲಿ ಇಂದು 7 ಮಂದಿ ಮೃತಪಟ್ಟಿದ್ದು, ಆ ಮೂಲಕ ರಾಜ್ಯದಲ್ಲಿ ಕೋವಿಡ್ ಸೋಂಕಿಗೆ ಬಲಿಯಾದವರ ಸಂಖ್ಯೆ 12,081ಕ್ಕೆ ಏರಿಕೆಯಾಗಿದೆ. ಇನ್ನು ಇಂದು ರಾಜ್ಯಾದ್ಯಂತ 1,217 ಸೋಂಕಿತರು ಗುಣಮುಖರಾಗಿದ್ದು, ಸೋಂಕಿನಿಂದ ಚೇತರಿಸಿಕೊಂಡವರ ಒಟ್ಟಾರೆ ಸಂಖ್ಯೆ 8,94,834ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ ಇನ್ನು 11,610 ಪ್ರಕರಣಗಳು ಸಕ್ರಿಯವಾಗಿದೆ ಎಂದು ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.
ಇನ್ನು ಇಂದು ದಾಖಲಾದ ಒಟ್ಟಾರೆ 973 ಹೊಸ ಸೋಂಕು ಪ್ರಕರಣಗಳ ಪೈಕಿ ಬೆಂಗಳೂರು ನಗರವೊಂದರಲ್ಲೇ 554 ಪ್ರಕರಣಗಳು ದಾಖಲಾಗಿದ್ದು, ಉಳಿದಂತೆ ತುಮಕೂರಿನಲ್ಲಿ 31, ಚಿಕ್ಕಬಳ್ಳಾಪುರ 31, ದಕ್ಷಿಣ ಕನ್ನಡದಲ್ಲಿ 31, ಹಾಸನದಲ್ಲಿ 31 ಹಾಗೂ ಮೈಸೂರಿನಲ್ಲಿ 34 ಪ್ರಕರಣಗಳು ದಾಖಲಾಗಿವೆ.