ಗ್ರಾಮ ಪಂಚಾಯಿತಿ ಚುನಾವಣೆ: 91,339 ಸ್ಥಾನಗಳ ಪೈಕಿ 54,041 ಸ್ಥಾನಗಳ ಫಲಿತಾಂಶ ಪ್ರಕಟ: ಕರ್ನಾಟಕ ಚುನಾವಣಾ ಆಯೋಗ

ತೀವ್ರ ಕುತೂಹಲ ಕೆರಳಿಸಿದ್ದ ಕರ್ನಾಟಕ ಗ್ರಾಮ ಪಂಚಾಯಿತಿ ಚುನಾವಣಾ ಫಲಿತಾಂಶ ಪ್ರಕಟವಾಗಿದ್ದು, ಒಟ್ಟು 91,339 ಸ್ಥಾನಗಳ ಪೈಕಿ 54,041 ಸ್ಥಾನಗಳ ಫಲಿತಾಂಶ ಪ್ರಕಟವಾಗಿದೆ ಎಂದು ರಾಜ್ಯ ಚುನಾವಣಾ ಆಯೋಗ ಮಾಹಿತಿ ನೀಡಿದೆ.
ಗ್ರಾಮ ಪಂಚಾಯಿತಿ ಚುನಾವಣೆ ಮತ ಎಣಿಕೆ ಪ್ರಗತಿಯಲ್ಲಿ
ಗ್ರಾಮ ಪಂಚಾಯಿತಿ ಚುನಾವಣೆ ಮತ ಎಣಿಕೆ ಪ್ರಗತಿಯಲ್ಲಿ

ಬೆಂಗಳೂರು: ತೀವ್ರ ಕುತೂಹಲ ಕೆರಳಿಸಿದ್ದ ಕರ್ನಾಟಕ ಗ್ರಾಮ ಪಂಚಾಯಿತಿ ಚುನಾವಣಾ ಫಲಿತಾಂಶ ಪ್ರಕಟವಾಗಿದ್ದು, ಒಟ್ಟು 91,339 ಸ್ಥಾನಗಳ ಪೈಕಿ 54,041 ಸ್ಥಾನಗಳ ಫಲಿತಾಂಶ ಪ್ರಕಟವಾಗಿದೆ ಎಂದು ರಾಜ್ಯ ಚುನಾವಣಾ ಆಯೋಗ ಮಾಹಿತಿ ನೀಡಿದೆ.

ರಾಜ್ಯದ ಒಟ್ಟು 5,728 ಗ್ರಾಮ ಪಂಚಾಯಿತಿಗಳ ಒಟ್ಟು 91,339 ಸ್ಥಾನಗಳಿಗೆ ಚುನಾವಣೆ ನಡೆದಿದ್ದು, ಈ ಚುನಾವಣೆ ಫಲಿತಾಂಶ ಪ್ರಕಟವಾಗುತ್ತಿದೆ. ಒಟ್ಟು 91,339 ಸ್ಥಾನಗಳ ಪೈಕಿ ಈ ವರೆಗೂ 54,041 ಸ್ಥಾನಗಳ ಫಲಿತಾಂಶ ಪ್ರಕಟವಾಗಿದ್ದು, ಬಾಕಿ ಉಳಿದ 36,781 ಸ್ಥಾನಗಳ ಫಲಿತಾಂಶ ನಾಳೆ ಘೋಷಣೆ  ಮಾಡಲಾಗುತ್ತದೆ ಎಂದು ಚುನಾವಣಾ ಆಯೋಗ ಹೇಳಿದೆ.  
 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com