ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಅಬ್ಬರ ಕಡಿಮೆಯಾಗುತ್ತಿದ್ದು, ಗುರುವಾರ 952 ಪಾಸಿಟಿವ್ ಪ್ರಕರಣಗಳು ವರದಿಯಾಗಿವೆ. ಇದರೊಂದಿಗೆ ಸೋಂಕಿತರ ಸಂಖ್ಯೆ 9,19,496ಕ್ಕೆ ಏರಿಕೆಯಾಗಿದೆ.
ಇನ್ನು ಕಳೆದ 24 ಗಂಟೆಯಲ್ಲಿ ರಾಜ್ಯದಲ್ಲಿ ಕೊರೋನಾ ಸೋಂಕಿನಿಂದ 9 ಸೋಂಕಿತರು ಮೃತಪಟ್ಟಿದ್ದು, ಸಾವಿನ ಸಂಖ್ಯೆ 12,090ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.
ಇಂದು ಬೆಂಗಳೂರಿನಲ್ಲಿ 554 ಮಂದಿಗೆ ಕೊರೋನಾ ಪಾಸಿಟಿವ್ ದೃಢಪಟ್ಟಿದ್ದು, ನಗರದಲ್ಲಿ ಸೋಂಕಿನಿಂದ ಆರು ಮಂದಿ ಮೃತಪಟ್ಟಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.
ರಾಜ್ಯದಲ್ಲಿ ಇಂದು 1282 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದರೊಂದಿಗೆ ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ 8,96,116ಕ್ಕೆ ಏರಿಕೆಯಾಗಿದೆ. ಇನ್ನು 11,271 ಸಕ್ರೀಯ ಪ್ರಕರಣಗಳಿದ್ದು, ಈ ಪೈಕಿ 194 ಮಂದಿ ಕೋವಿಡ್ ಆಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
Advertisement