ರಾಜ್ಯ
ಕರ್ನಾಟಕ: ನೂತನ ಮುಖ್ಯ ಕಾರ್ಯದರ್ಶಿ ರವಿಕುಮಾರ್ ಅಧಿಕಾರ ಸ್ವೀಕಾರ
ಕರ್ನಾಟಕದ ನೂತನ ಮುಖ್ಯ ಕಾರ್ಯದರ್ಶಿಯಾಗಿ ನೇಮಕವಾಗಿದ್ದ ಹಿರಿಯ ಐಎಎಸ್ ಅಧಿಕಾರಿ ಪಿ. ರವಿಕುಮಾರ್ ಅವರು ಇಂದು ಅಧಿಕೃತವಾಗಿ ಅಧಿಕಾರ ಸ್ವೀಕರಿಸಿದರು.
ಬೆಂಗಳೂರು: ಕರ್ನಾಟಕದ ನೂತನ ಮುಖ್ಯ ಕಾರ್ಯದರ್ಶಿಯಾಗಿ ನೇಮಕವಾಗಿದ್ದ ಹಿರಿಯ ಐಎಎಸ್ ಅಧಿಕಾರಿ ಪಿ. ರವಿಕುಮಾರ್ ಅವರು ಇಂದು ಅಧಿಕೃತವಾಗಿ ಅಧಿಕಾರ ಸ್ವೀಕರಿಸಿದರು.
ವಿಧಾನಸೌಧದ ಮೂರನೇ ಮಹಡಿಯಲ್ಲಿರುವ ಮುಖ್ಯ ಕಾರ್ಯದರ್ಶಿಯವರ ಕಾರ್ಯಾಲಯದಲ್ಲಿ ನಡೆದ ಸರಳ ಸಮಾರಂಭದಲ್ಲಿ ನಿರ್ಗಮಿತ ಮುಖ್ಯ ಕಾರ್ಯದರ್ಶಿ, ಟಿಎಂ ವಿಜಯ ಭಾಸ್ಕರ್ ಅವರು ಹೊಸದಾಗಿ ನಿಯುಕ್ತಿಗೊಂಡ ಮುಖ್ಯ ಕಾರ್ಯದರ್ಶಿ ರವಿಕುಮಾರ್ ಅವರಿಗೆ ಅಧಿಕಾರ ಹಸ್ತಾಂತರ ಪತ್ರ ನೀಡಿ ಸ್ವಾಗತಿಸಿದರು. ಇದಕ್ಕೂ ಮುನ್ನ ನಿರ್ಗಮಿಸುತ್ತಿರುವ ಮುಖ್ಯ ಕಾರ್ಯದರ್ಶಿ ಟಿಎಂ ವಿಜಯ್ ಭಾಸ್ಕರ್ ಅವರಿಗೆ ಹಿರಿಯ ಐಎಎಸ್ ಅಧಿಕಾರಿಗಳು ಮಧ್ಯಾಹ್ನ ಸನ್ಮಾನ ಮಾಡಿದರು.
ನೂತನ ಮುಖ್ಯಕಾರ್ಯದರ್ಶಿ ರವಿಕುಮಾರ್ ಅವರನ್ನು ಶಿಕ್ಷಣ ಸಚಿವ ಎಸ್.ಸುರೇಶ್ಕುಮಾರ್ ಅಭಿನಂದಿಸಿದರು. ಇನ್ನು 1984ರ ಬ್ಯಾಚ್ನ ಕರ್ನಾಟಕ ಕೇಡರ್ನ ಐಎಎಸ್ ಅಧಿಕಾರಿ, ಪಿ. ರವಿಕುಮಾರ್ ಒಂದುವರೆ ವರ್ಷದ ಅಧಿಕಾರಾವಧಿಯನ್ನು ಹೊಂದಿದ್ದಾರೆ.
Follow KannadaPrabha channel on WhatsApp
KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ