ಗದಗದಲ್ಲಿ ಅಗ್ನಿ ಅವಘಡ: 30ಕ್ಕೂ ಹೆಚ್ಚು ಅಂಗಡಿಗಳು ಬೆಂಕಿಗೆ ಆಹುತಿ 

ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಅಗ್ನಿ ಅವಘಡವುಂಟಾಗಿ ಗದಗದಲ್ಲಿ 30ಕ್ಕೂ ಹೆಚ್ಚು ಅಂಗಡಿಗಳು ಬೆಂಕಿಗೆ ಆಹುತಿಯಾದ ಘಟನೆ ಮಂಗಳವಾರ ನಸುಕಿನ ಜಾವ ಸಂಭವಿಸಿದೆ.
ಗದಗದಲ್ಲಿ ಅಗ್ನಿ ಅವಘಡ: 30ಕ್ಕೂ ಹೆಚ್ಚು ಅಂಗಡಿಗಳು ಬೆಂಕಿಗೆ ಆಹುತಿ 
Updated on

ಗದಗ: ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಅಗ್ನಿ ಅವಘಡವುಂಟಾಗಿ ಗದಗದಲ್ಲಿ 30ಕ್ಕೂ ಹೆಚ್ಚು ಅಂಗಡಿಗಳು ಬೆಂಕಿಗೆ ಆಹುತಿಯಾದ ಘಟನೆ ಮಂಗಳವಾರ ನಸುಕಿನ ಜಾವ ಸಂಭವಿಸಿದೆ.


ಇಂದು ನಸುಕಿನ ಜಾವ 5.30ರ ಸುಮಾರಿಗೆ ಈ ಅಗ್ನಿ ಅವಘಡ ಉಂಟಾಗಿರುವುದರಿಂದ ಆ ಸಮಯದಲ್ಲಿ ಅಂಗಡಿಗಳಲ್ಲಿ ಯಾರೂ ಇಲ್ಲದ ಕಾರಣ ಸಾವು, ನೋವು ಉಂಟಾಗಿಲ್ಲ ಎಂದು ಹೇಳಲಾಗುತ್ತಿದೆ.


ಸದ್ಯ ಅಗ್ನಿ ಶಾಮಕ ದಳ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ಬೆಂಕಿಯನ್ನು ನಂದಿಸುವ ಕಾರ್ಯದಲ್ಲಿ ನಿರತರಾಗಿದ್ದಾರೆ.ಬೃಹತ್ ಪ್ರಮಾಣದಲ್ಲಿ ಬೆಂಕಿ ಹತ್ತಿ ಉರಿಯುತ್ತಿದ್ದು 7 ಅಂಗಡಿಗಳು ಸಂಪೂರ್ಣ ಭಸ್ಮವಾಗಿವೆ. ಇನ್ನುಳಿದ ಅಂಗಡಿಗಳು ಬಹುತೇಕ ಬೆಂಕಿಗೆ ಆಹುತಿಯಾಗಿವೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com