ಕೊರೋನಾ ಸೋಂಕಿಗೆ ಔಷಧಿ ಕಂಡುಹಿಡಿದ ನಿತ್ಯಾನಂದ!

ಜಗತ್ತಿನಾದ್ಯಂತ ಹರಡುತ್ತಿರುವ ಮಾರಕ ಕೊರೋನಾ ವೈರಸ್ ಗೆ ಸ್ವಯಂ ಘೋಷಿತ ದೇವಮಾನವ ನಿತ್ಯಾನಂದ ಔಷಧಿ ಕಂಡುಹಿಡಿರುವುದಾಗಿ ವಿಡಿಯೋವೊಂದನ್ನು ಪೋಸ್ಟ್ ಮಾಡಲಾಗಿದೆ.
ನಿತ್ಯಾನಂದ
ನಿತ್ಯಾನಂದ
Updated on: 

ಬೆಂಗಳೂರು: ಜಗತ್ತಿನಾದ್ಯಂತ ಹರಡುತ್ತಿರುವ ಮಾರಕ ಕೊರೋನಾ ವೈರಸ್ ಗೆ ಸ್ವಯಂ ಘೋಷಿತ ದೇವಮಾನವ ನಿತ್ಯಾನಂದ ಔಷಧಿ ಕಂಡುಹಿಡಿರುವುದಾಗಿ ವಿಡಿಯೋವೊಂದನ್ನು ಪೋಸ್ಟ್ ಮಾಡಲಾಗಿದೆ.

“ಓಂ ನಿತ್ಯಾನಂದ ಪರಮ ಶಿವೋಹಂ” ಎಂಬ ಅಖಂಡ ಮಹಾವಾಕ್ಯ ಮಂತ್ರವನ್ನು ನಿರಂತರ 48 ಗಂಟೆಗಳ ಕಾಲ ಪಠಿಸಿದರೆ ಕೊರೊನಾ ದೇಹ ಬಿಟ್ಟು ಹೋಗುತ್ತೆ ಎಂದು ವಿಡಿಯೋದಲ್ಲಿ ತಿಳಿಸಲಾಗಿದೆ. 

ಈ ಅಖಂಡ ಮಹಾವಾಕ್ಯದ ಮಂತ್ರವನ್ನು 48 ಗಂಟೆ ಪಠಿಸಿದರೆ  ಧನಾತ್ಮಕ, ಆಧ್ಯಾತ್ಮಿಕ ಶಕ್ತಿ ವೃದ್ದಿಯಾಗಿ ದೇಹದಿಂದ ಕೊರೊನಾ ಓಡಿಹೋಗುತ್ತೆ. ನಿಮ್ಮ ಪ್ರೀತಿ ಹಾಗೂ ಸಹಾನುಭೂತಿಯಿಂದ ಜಗತ್ತಿಗೆ ಒಳಿತು ಮಾಡಲು ಸಾಧ್ಯವಾಗಬಹುದು. 
ಶುಕ್ರವಾರದಿಂದ ಭಾನುವಾರದವರೆಗೂ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಿ ಎಂದು  ವಿಡಿಯೋ ಮೂಲಕ ನಿತ್ಯಾನಂದ ಸಂದೇಶ ರವಾನಿಸಿದ್ದಾನೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com