ರಾಜ್ಯ ಸರ್ಕಾರದಿಂದ ವಿವಾಹ ಭಾಗ್ಯ: 'ಸಪ್ತಪದಿ' ಯೋಜನೆ ಪ್ರಚಾರಕ್ಕೆ ರಥಯಾತ್ರೆ

ಮದುವೆಗೆ ದುಂದು ವೆಚ್ಚ ಮಾಡಿ ಬಡ ಮತ್ತು ಮಧ್ಯಮ ವರ್ಗದ ಕುಟುಂಬಗಳು ಆರ್ಥಿಕ ಸಂಕಷ್ಟಕ್ಕೆ ಒಳಗಾಗುತ್ತಿರುವುದನ್ನು ತಪ್ಪಿಸಲು ಸರಕಾರವೇ ಆರಂಭಿಸಿರುವ ‘ಸಪ್ತಪದಿ’ ಸಾಮೂಹಿಕ ವಿವಾಹ ಯೋಜನೆ ಯಶಸ್ವಿಗೆ ಮುಜರಾಯಿ ಇಲಾಖೆ ಸರ್ವಸಿದ್ಧತೆ ಆರಂಭಿಸಿದೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
Updated on

ಬೆಂಗಳೂರು: ಮದುವೆಗೆ ದುಂದು ವೆಚ್ಚ ಮಾಡಿ ಬಡ ಮತ್ತು ಮಧ್ಯಮ ವರ್ಗದ ಕುಟುಂಬಗಳು ಆರ್ಥಿಕ ಸಂಕಷ್ಟಕ್ಕೆ ಒಳಗಾಗುತ್ತಿರುವುದನ್ನು ತಪ್ಪಿಸಲು ಸರಕಾರವೇ ಆರಂಭಿಸಿರುವ ‘ಸಪ್ತಪದಿ’ ಸಾಮೂಹಿಕ ವಿವಾಹ ಯೋಜನೆ ಯಶಸ್ವಿಗೆ ಮುಜರಾಯಿ ಇಲಾಖೆ ಸರ್ವಸಿದ್ಧತೆ ಆರಂಭಿಸಿದೆ. 

ರಾಜ್ಯದ ಆಯ್ದ 100 ಪ್ರತಿಷ್ಠಿತ ದೇವಾಲಯಗಳಲ್ಲಿ ಏಪ್ರಿಲ್‌ 26ರಂದು ನಡೆಯಲಿರುವ ಸಾಮೂಹಿಕ ವಿವಾಹ ಕಾರ್ಯಕ್ರಮಕ್ಕೆ ಸಂಬಂಧಿಸಿದಂತೆ ಸಾರ್ವಜನಿಕರಿಗೆ ಮಾಹಿತಿ ನೀಡಲು ಪ್ರಚಾರ ರಥಯಾತ್ರೆ ಆರಂಭಿಸಲಾಗುತ್ತಿದೆ.

ವಧು-ವರನಿಗೆ ಉಡುಗೆ, ಬಂಗಾರದ ಉಡುಗೊರೆ ನೀಡುವ ಜತೆಗೆ, ಎರಡೂ ಕಡೆಯ ಬಂಧುಗಳಿಗೆ ಊಟೋಪಚಾರದ ವ್ಯವಸ್ಥೆಯನ್ನೂ ದೇವಾಲಯ ಆಡಳಿತ ಮಂಡಳಿಗಳೇ ಮಾಡುತ್ತಿವೆ. ಈ ಸಾಮೂಹಿಕ ವಿವಾಹಕ್ಕೆ ಹೆಸರು ನೋಂದಾಯಿಸಿಕೊಳ್ಳಲು ಮಾರ್ಚ್‌ 27 ಕೊನೆಯ ದಿನವಾಗಿದೆ. 

ಈ ಬಗ್ಗೆ ಸಾರ್ವಜನಿಕರಿಗೆ ಮಾಹಿತಿ ನೀಡಲು ಪ್ರಚಾರ ರಥಯಾತ್ರೆ ಆರಂಭಿಸಲಾಗುತ್ತಿದೆ. ಫೆಬ್ರವರಿ 13ರಂದು ಕೊಲ್ಲೂರು ಮೂಕಾಂಬಿಕಾ ದೇವಾಲಯದಲ್ಲಿ ರಥಯಾತ್ರೆ ಉದ್ಘಾಟನೆ ಆಗಲಿದೆ’ ಎಂದು ಮುಜರಾಯಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದರು.

‘ರಾಜ್ಯದ 12 ಪ್ರತಿಷ್ಠಿತ ದೇವಾಲಯಗಳಿಂದ ಪ್ರಚಾರ ರಥಗಳನ್ನು ಸಿದ್ಧಪಡಿಸಲಾಗಿದೆ. ರಥಯಾತ್ರೆ ಮೂಲಕ ಈ ಯೋಜನೆ ಬಗ್ಗೆ ಸಾರ್ವಜನಿಕರ ಗಮನ ಸೆಳೆಯಲು ನಿರ್ಧರಿಸಲಾಗಿದೆ. 

ಈ ಪ್ರಚಾರ ರಥಗಳು ಸಂಬಂಧಪಟ್ಟ ಜಿಲ್ಲೆಯಾದ್ಯಂತ ಸಂಚರಿಸಿ, ಸಾಮೂಹಿಕ ವಿವಾಹಕ್ಕೆ ನೋಂದಾಯಿಸಲು ಧ್ವನಿವರ್ಧಕಗಳ ಮೂಲಕ ಪ್ರಚಾರ ಮಾಡಲಾಗುವುದು. ಈ ಕಾರ್ಯಕ್ರಮಕ್ಕೆ ತಗುಲುವ ವೆಚ್ಚವನ್ನು ಸಂಬಂಧಿತ ದೇವಾಲಯಗಳ ನಿಧಿಯಿಂದಲೇ ಭರಿಸಲಾಗುವುದು’ ಎಂದು ಕೋಟಾ ಶ್ರೀನಿವಾಸ ಪೂಜಾರಿ ತಿಳಿಸಿದರು.

‘ಸಾಮೂಹಿಕ ವಿವಾಹಕ್ಕೆ ಸಂಬಂಧಿಸಿದಂತೆ ಟೋಲ್‌ ಫ್ರೀ ದೂರವಾಣಿ ಸಂಖ್ಯೆ 18004256654 ಅನ್ನು ವ್ಯವಸ್ಥೆ ಮಾಡಲಾಗಿದೆ. 

ಸಾರ್ವಜನಿಕರು ಈ ನಂಬರ್‌ಗೆ ಕರೆ ಮಾಡಿ ಯಾವುದೇ ಮಾಹಿತಿ ಪಡೆಯಬಹುದಾಗಿದೆ. ಜತೆಗೆ, ರಾಜ್ಯಾದ್ಯಂತ 750 ಪ್ರಚಾರ ಫಲಕ ಅಳವಡಿಸಲಾಗುತ್ತಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X
Google Preferred source

Advertisement

X
Kannada Prabha
www.kannadaprabha.com