

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ವೈರಸ್ ಸೋಂಕು ಹರಡದಂತೆ ಎಲ್ಲ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲಾಗಿದೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ.
ಈ ಖಾಯಿಲೆಗೆ ಯಾವುದೇ ನಿರ್ದಿಷ್ಟ ಔಷಧ ಮತ್ತು ಲಸಿಕೆಗಳು ಲಭ್ಯವಿರುವುದಿಲ್ಲ ಎಂದು ಖಚಿತಪಡಿಸಲಾಗಿದ್ದು ಈ ಹಿನ್ನೆಲೆಯಲ್ಲಿ ಹೆಚ್ಚಿನ ಮುಂಜಾಗ್ರತಾ ಕ್ರಮ ಕೈಗೊಳ್ಳಲಾಗಿದೆ.
ಇತ್ತೀಚೆಗೆ ಮಾರುಕಟ್ಟೆಯಲ್ಲಿ ಹೊಸ ಹೊಮಿಯೋಪತಿ ಔಷಧ ಬಂದಿದೆ ಎಂದು ಕೆಲವು ಕಂಪನಿಗಳ ಮಾರಾಟಗಾರರು ಸುಳ್ಳು ಮಾಹಿತಿ ನೀಡಿ ಅಪಪ್ರಚಾರ ಮಾಡುತ್ತಿದ್ದಾರೆ. ಆದರೆ ಇದರ ಬಗ್ಗೆ ಕೇಂದ್ರ ಸರ್ಕಾರದಿಂದ ಯಾವುದೇ ಮಾರ್ಗಸೂಚಿ, ಸಲಹೆ, ಸೂಚನೆ ಬಂದಿಲ್ಲ, ಎಂದು ಇಲಾಖೆ ತಿಳಿಸಿದೆ