ಮುನಿರತ್ನ ಚುನಾವಣಾ ಅಕ್ರಮಕ್ಕೆ ಸಾಕ್ಷಿ ಏನಿದೆ; ಹೈಕೋರ್ಟ್ ಪ್ರಶ್ನೆ?

ರಾಜರಾಜೇಶ್ವರಿ ನಗರ ವಿಧಾನಸಭಾ ಕ್ಷೇತ್ರದ ಚುನಾವಣೆಯಲ್ಲಿ ಹಿಂದೆ ಕಾಂಗ್ರೆಸ್ ಅಭ್ಯರ್ಥಿಯಾಗಿದ್ದ ಮುನಿರತ್ನ ಅಕ್ರಮ ಎಸಗಿ, ಜಯ ಗಳಿಸಿದ್ದಾರೆ ಎಂಬುದಕ್ಕೆ ಸಾಕ್ಷಿ ಏನಿದೆ ಎಂದು ಹೈಕೋರ್ಟ್ ಪ್ರಶ್ನಿಸಿದ್ದಾರೆ.
ಮುನಿರತ್ನ
ಮುನಿರತ್ನ
Updated on: 

ಬೆಂಗಳೂರು: ರಾಜರಾಜೇಶ್ವರಿ ನಗರ ವಿಧಾನಸಭಾ ಕ್ಷೇತ್ರದ ಚುನಾವಣೆಯಲ್ಲಿ ಹಿಂದೆ ಕಾಂಗ್ರೆಸ್ ಅಭ್ಯರ್ಥಿಯಾಗಿದ್ದ ಮುನಿರತ್ನ ಅಕ್ರಮ ಎಸಗಿ, ಜಯ ಗಳಿಸಿದ್ದಾರೆ ಎಂಬುದಕ್ಕೆ ಸಾಕ್ಷಿ ಏನಿದೆ ಎಂದು ಹೈಕೋರ್ಟ್ ಪ್ರಶ್ನಿಸಿದ್ದಾರೆ.

ಮುನಿರತ್ನ ಅವರ ಆಯ್ಕೆಯನ್ನು ಅಸಿಂಧುಗೊಳಿಸಿ ತಮ್ಮನ್ನು ವಿಜೇತ ಅಭ್ಯರ್ಥಿಯಾಗಿ ಘೋಷಿಸಬೇಕು ಎಂದು ಕೋರಿ ಬಿಜೆಪಿಯ ಪರಾಜಿತ ಅಭ್ಯರ್ಥಿ ತುಳಸಿ ಮುನಿರಾಜುಗೌಡ ಸಲ್ಲಿಸಿರುವ ಚುನಾವಣಾ ತಕರಾರು ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಕೃಷ್ಣ ಎಸ್‌.ದೀಕ್ಷಿತ್‌ ಅವರಿದ್ದ ಏಕಸದಸ್ಯ ಪೀಠ ಅರ್ಜಿದಾರರಿಗೆ ಈ ಪ್ರಶ್ನೆ ಕೇಳಿದೆ.

ಮುನಿರತ್ನ ಪರ ವಕೀಲರು, ಅರ್ಜಿದಾರರ ವಿರುದ್ಧದ ಆರೋಪಗಳಿಗೆ ಸೂಕ್ತ ಆಧಾರಗಳಿಲ್ಲ. ಅರ್ಜಿ ಹಿನ್ನೆಲೆಯಲ್ಲಿ ಆ ಕ್ಷೇತ್ರದ ಮರು ಚುನಾವಣೆಯನ್ನು ಕೂಡ ತಡೆಹಿಡಿಯಲಾಗಿದೆ. ಅರ್ಜಿಯನ್ನು ವಜಾಗೊಳಿಸಿದ ಚುನಾವಣೆಗೆ ಅನುವು ಮಾಡಿಕೊಡಬೇಕು ಎಂದು ಮನವಿ ಮಾಡಿದರು.

ಮುನಿರತ್ನ ಪರ ವಾದಿಸಿದ ವಕೀಲರು, ಮುನಿರಾಜುಗೌಡನಿಗೆ ತಮಗೆ ಒಟ್ಟು ಎಷ್ಟು ಮತಗಳು ಬೀಳಲಿದ್ದವು ಎಂಬುದರ ಬಗ್ಗೆ ಮಾಹಿತಿ ನೀಡಿಲ್ಲ. ಚುನಾವಣಾ ಅಕ್ರಮ ಕೇಳಿ ಬಂದ ಹಿನ್ನೆಲೆಯಲ್ಲಿ ಎಷ್ಟು ಮತದಾರರು ಪ್ರಭಾವಕ್ಕೆ ಒಳಗಾಗಿದ್ದಾರೆ ಎಂದು ಹೇಳಿಲ್ಲ. ಹೀಗಾಗಿ, ಅರ್ಜಿಯನ್ನು ವಜಾಗೊಳಿಸಬೇಕೆಂದು ಪೀಠಕ್ಕೆ ಮನವಿ ಮಾಡಿದರು. 

ಕೆಲಕಾಲ ವಕೀಲರ ವಾದ ಆಲಿಸಿದ ನ್ಯಾಯಪೀಠವು ಮುನಿರಾಜುಗೌಡನಿಗೆ ಪ್ರತಿಕ್ರಿಯಿಸಲು ಸೂಚನೆ ನೀಡಿ, ವಿಚಾರಣೆಯನ್ನು ಮುಂದೂಡಿತು.

2018ರ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿದ್ದ ಮುನಿರತ್ನ ಅವರು ರಾಜರಾಜೇಶ್ವರಿ ನಗರದಲ್ಲಿ ನಕಲಿ ವೋಟರ್ ಐಡಿ ಕಾರ್ಡ್‌ಗಳನ್ನು ಮುದ್ರಿಸಿ ಹಂಚುತ್ತಿದ್ದಾರೆ ಎಂದು ಮುನಿರತ್ನ ವಿರುದ್ಧ ಸ್ಪರ್ಧಿಸಿದ್ದ ಬಿಜೆಪಿ ಅಭ್ಯರ್ಥಿ ತುಳಸಿ ಮುನಿರಾಜುಗೌಡ ಆರೋಪಿಸಿದ್ದರು.

ಈ ಬಗ್ಗೆ ಅವರು ಚುನಾವಣೆ ಆಯೋಗಕ್ಕೂ ದೂರು ನೀಡಿದ್ದರು. ಇದನ್ನು ಪರಿಗಣಿಸಿದ್ದ ಆಯೋಗ ಕೆಲಕಾಲ ಕ್ಷೇತ್ರದ ಚುನಾವಣೆಯನ್ನೂ ಮುಂದೂಡಿತ್ತು. ಬಳಿಕ ಮುನಿರತ್ನ ಅವರು ಗೆಲುವು ಸಾಧಿಸಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com