ರಾಷ್ಟ್ರದ್ರೋಹ ಪ್ರಕರಣ: ಸಿಎಂ ಕಚೇರಿ ಮುತ್ತಿಗೆಗೆ ಯತ್ನಿಸಿದ ಸಿದ್ದರಾಮಯ್ಯ, ಕಾಂಗ್ರೆಸ್ ನಾಯಕರು ಪೊಲೀಸ್ ವಶಕ್ಕೆ

ಬಿಜೆಪಿ ಸರ್ಕಾರದಿಂದ ಪೊಲೀಸ್ ಇಲಾಖೆಯನ್ನು ದುರ್ಬಳಕೆ ಮಾಡಿಕೊಳ್ಳುತ್ತಿರುವುದನ್ನು ವಿರೋಧಿಸಿ ಸಿಎಂ ಕಚೇರಿ ಮುತ್ತಿಗೆಗೆ ಯತ್ನಿಸಿದ ವಿಪಕ್ಷ ನಾಯಕ ಸಿದ್ದರಾಮಯ್ಯ, ಕಾಂಗ್ರೆಸ್ ಅಧ್ಯಕ್ಷ ದಿನೇಶ್ ಗುಂಡೂ ರಾವ್ ಸೇರಿದಂತೆ ಹಲವು ಕಾಂಗ್ರೆಸ್ ನಾಯಕರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. 
ರಾಷ್ಟ್ರದ್ರೋಹ ಪ್ರಕರಣ: ಸಿಎಂ ಕಚೇರಿ ಮುತ್ತಿಗೆಗೆ ಯತ್ನಿಸಿದ ಸಿದ್ದರಾಮಯ್ಯ, ಕಾಂಗ್ರೆಸ್ ನಾಯಕರು ಪೊಲೀಸ್ ವಶಕ್ಕೆ
ರಾಷ್ಟ್ರದ್ರೋಹ ಪ್ರಕರಣ: ಸಿಎಂ ಕಚೇರಿ ಮುತ್ತಿಗೆಗೆ ಯತ್ನಿಸಿದ ಸಿದ್ದರಾಮಯ್ಯ, ಕಾಂಗ್ರೆಸ್ ನಾಯಕರು ಪೊಲೀಸ್ ವಶಕ್ಕೆ

ಬೆಂಗಳೂರು: ಬಿಜೆಪಿ ಸರ್ಕಾರದಿಂದ ಪೊಲೀಸ್ ಇಲಾಖೆಯನ್ನು ದುರ್ಬಳಕೆ ಮಾಡಿಕೊಳ್ಳುತ್ತಿರುವುದನ್ನು ವಿರೋಧಿಸಿ ಸಿಎಂ ಕಚೇರಿ ಮುತ್ತಿಗೆಗೆ ಯತ್ನಿಸಿದ ವಿಪಕ್ಷ ನಾಯಕ ಸಿದ್ದರಾಮಯ್ಯ, ಕಾಂಗ್ರೆಸ್ ಅಧ್ಯಕ್ಷ ದಿನೇಶ್ ಗುಂಡೂ ರಾವ್ ಸೇರಿದಂತೆ ಹಲವು ಕಾಂಗ್ರೆಸ್ ನಾಯಕರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. 

ಬೀದರ್ ಶಾಲೆಯಲ್ಲಿ ಆಯೋಜಿಸಲಾಗಿದ್ದ ನಾಟಕದಲ್ಲಿ ಸಿಎಎ ಹಾಗೂ ಎನ್ ಆರ್ ಸಿ ಗೆ ಸಂಬಂಧಿಸಿದಂತೆ ಪ್ರಧಾನಿ ಮೋದಿ ಅವರನ್ನು ನಕಾರಾತ್ಮಕವಾಗಿ ತೋರಿಸಲಾಗಿತ್ತು. ಈ ಹಿನ್ನೆಲೆಯಲ್ಲಿ ಮುಖ್ಯಶಿಕ್ಷಕರ ವಿರುದ್ಧ ದಾಖಲಾಗಿದ್ದ ದೇಶದ್ರೋಹ ಪ್ರಕರಣ ಹಾಗೂ ಪೋಷಕರೊಬ್ಬರ ಬಂಧನವನ್ನು ಖಂಡಿಸಿ ರಾಜ್ಯ ಕಾಂಗ್ರೆಸ್ ಫೆ.15 ರಂದು ಬೆಂಗಳೂರಿನ ರೇಸ್ ಕೋರ್ಸ್ ರಸ್ತೆಯಲ್ಲಿರುವ ಗಾಂಧಿ ಪ್ರತಿಮೆಯಿಂದ ಪ್ರತಿಭಟನಾ ಮೆರವಣಿಗೆ ಕೈಗೊಂಡಿತ್ತು.

ಪ್ರತಿಭಟನೆಯಲ್ಲಿ ದಿನೇಶ್ ಗುಂಡೂರಾವ್ ಹಾಗೂ ಬೆಂಗಳೂರು ಗ್ರಾಮಾಂತರ ಸಂಸದ ಡಿ.ಕೆ ಸುರೇಶ್ ಬ್ಯಾರಿಕೇಡ್ ದಾಟಿ ಸಿಎಂ ಗೃಹ ಕಚೇರಿಯತ್ತ ಹೋಗಲು ಯತ್ನಿಸಿದರು. ಆದರೆ ಮಧ್ಯದಲ್ಲೇ ಅವರನ್ನು ತಡೆಹಿಡಿದು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಬಿಜೆಪಿಯನ್ನು ವಿರೋಧಿಸುವವರು ಹಾಗೂ ಅದರ ವಿಭಜನಕಾರಿ ನೀತಿಗಳನ್ನು ವಿರೋಧಿಸುವವರ ವಿರುದ್ಧ ಪೊಲೀಸ್ ಇಲಾಖೆಯನ್ನು ದುರ್ಬಳಕೆ ಮಾಡಿಕೊಂಡು ದೇಶದ್ರೋಹ ಪ್ರಕರಾಣಗಳನ್ನು ದಾಖಲಿಸುತ್ತಿದೆ ಎಂದು ಕಾಂಗ್ರೆಸ್ ನಾಯಕರು ಆರೋಪಿಸಿದ್ದಾರೆ. ತಮ್ಮನ್ನು ವಶಕ್ಕೆ ಪಡೆದ ಪೊಲೀಸರ ಕ್ರಮವನ್ನು ಸಿದ್ದರಾಮಯ್ಯ ಪ್ರಜಾಪ್ರಭುತ್ವ ವಿರೋಧಿ ಎಂದು ಹೇಳಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com