ಕೋಳಿ ಮಾಂಸದಲ್ಲಿ ಕರೋನ ಸೋಂಕು ಇಲ್ಲ: ರಾಜ್ಯ ಸರ್ಕಾರದ ಸ್ಪಷ್ಟನೆ

ಕೋಳಿ ಮಾಂಸದಲ್ಲಿ ಕೋವಿಡ್ - 19 ಅಂದರೆ ಕರೋನ ವೈರಸ್ ಸೋಂಕು ಇಲ್ಲ ಎಂದು ರಾಜ್ಯ ಸರ್ಕಾರ ಸ್ಪಷ್ಟಪಡಿಸಿದೆ. 
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
Updated on

ಬೆಂಗಳೂರು: ಕೋಳಿ ಮಾಂಸದಲ್ಲಿ ಕೋವಿಡ್ - 19 ಅಂದರೆ ಕರೋನ ವೈರಸ್ ಸೋಂಕು ಇಲ್ಲ ಎಂದು ರಾಜ್ಯ ಸರ್ಕಾರ ಸ್ಪಷ್ಟಪಡಿಸಿದೆ. 

ಇತ್ತೀಚೆಗೆ ಚೀನಾದಲ್ಲಿ ಕಾಣಿಸಿಕೊಂಡಿರುವ ಕೋವಿಡ್ - 19 ವೈರಸ್ ಸೋಂಕು ಕೋಳಿಗಳಿಂದ ಹರಡುತ್ತದೆ ಎಂಬ ವದಂತಿ ಹಾಗೂ ತಪ್ಪು ಸಂದೇಶಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿವೆ. ಆದರೆ, ಈ ವದಂತಿಗೆ ಯಾವುದೇ ವೈಜ್ಞಾನಿಕ ಆಧಾರ ಇಲ್ಲ. ನಮ್ಮ ದೇಶದಲ್ಲಿ ಕೋಳಿಗಳಿಗೆ ಕರೋನ ವೈರಾಣು ಸೋಂಕು ಕಾಣಿಸಿಕೊಂಡ ಬಗ್ಗೆ ಇದುವರೆಗೆ ಯಾವುದೇ ವರದಿಗಳಿಲ್ಲ. ಈ ವೈರಾಣು ಸೋಂಕು ಹರಡುವಿಕೆಯಲ್ಲಿ ಕೋಳಿಗಳ ಪಾತ್ರವೇನೂ ಇಲ್ಲ.  ಸೋಂಕು-ಪೀಡಿತ ಮನುಷ್ಯರ ಸಂಪರ್ಕದಿಂದ ಮಾತ್ರ ಈ ಸೋಂಕು ಇತರರಿಗೆ ಹರಡುತ್ತದೆ ಎಂದು ಹೇಳಿದೆ. 

ಸಾಮಾನ್ಯವಾಗಿ ಕೋಳಿ ಮಾಂಸವನ್ನು ೧೦೦ ಡಿಗ್ರಿ ಸೆಂಟಿಗ್ರೇಡ್ ಉಷ್ಣತೆಯಲ್ಲಿ ಬೇಯಿಸಲಾಗುತ್ತದೆ. ಈ ಉಷ್ಣತೆಯಲ್ಲಿ ಯಾವುದೇ ವೈರಾಣುಗಳು ಬದುಕುಳಿಯಲು ಸಾಧ್ಯವಿಲ. ಆದ್ದರಿಂದ, ಸಾರ್ವಜನಿಕರು ಕರೋನಾ ವೈರಾಣು ಸೋಂಕು ಕೋಳಿಗಳಿಂದ ಹರಡುತ್ತದೆ ಎಂಬ ವದಂತಿಗಳಿಗೆ ಕಿವಿ ಗೊಡಬಾರದು. ಈ ರೀತಿಯ ವದಂತಿಗಳನ್ನು ಹರಡುವುದರಿಂದ ಸಾರ್ವಜನಿಕ ಉತ್ತಮ ಪೌಷ್ಟಿಕಾಂಶ ನೀಡುವ ನೀಡುವ ಕೋಳಿ ಮಾಂಸ ಮತ್ತು ಮೊಟ್ಟೆ ಸೇವನೆಯ ಮೇಲೆ ಗಣನೀಯ ದುಷ್ಪರಿಣಾಮಗಳಾಗುತ್ತವೆ. ಈಗಾಗಲೇ ಹೆಚ್ಚಿನ ಸಂಖ್ಯೆಯಲ್ಲಿ ಮಕ್ಕಳು, ಬಾಣಂತಿಯರು, ಪೋಷಕಾಂಶ ಕೊರತೆಯಿಂದ ನರಳುತ್ತಿರುವ ಹಿನ್ನೆಲೆಯಲ್ಲಿ ಇಂತಹ ವದಂತಿಗಳು ಸಾಮಾಜಿಕ ಸ್ವಾಸ್ಥ್ಯವನ್ನು ಮತ್ತಷ್ಟು ಹದಗೆಡಿಸುತ್ತಿವೆ ಎಂದು ಹೇಳಿದೆ.

ಕೋಳಿ ಮಾಂಸ ಮತ್ತು ಮೊಟ್ಟೆಯನ್ನು ಚೆನ್ನಾಗಿ ಬೇಯಿಸಿ ತಿನ್ನುವುದು ಆರೋಗ್ಯಕ್ಕೆ ಒಳ್ಳೆಯದು. ಕೋಳಿ ಮಾಂಸ ಮತ್ತು ಮೊಟ್ಟೆ ಉತ್ತಮ ಪ್ರೋಟೀನ್ ಪೂರೈಸುವ ಆಹಾರವಾಗಿವೆ. ಯಾರೂ ಇಂತಹ ವದಂತಿಗಳನ್ನು ಹರಡಬಾರದು ಎಂದು ಪಶು ಸಂಗೋಪನಾ ಮತ್ತು ಮೀನುಗಾರಿಕಾ ಇಲಾಖೆಯ ಸರ್ಕಾರದ ಕಾರ್ಯದರ್ಶಿ ಎ ಬಿ ಇಬ್ರಾಹಿಂ ಅವರು ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ.
 
ಹೆಚ್ಚಿನ ಮಾಹಿತಿಗಾಗಿ 080 - 2341 8075 ಮತ್ತು 080 - 2341 6431, ಸಹಾಯವಾಣಿ : 1800 425 012 ಹಾಗೂ 080 - 2341 7100 ಸಂಪರ್ಕಿಸಬಹುದಾಗಿದೆ ಎಂದು ಅಧಿಕೃತ ಪ್ರಕಟಣೆ ತಿಳಿಸಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com