ಕಾರಿಗೆ ಸರ್ಕಾರಿ ಬಸ್ ಢಿಕ್ಕಿ: ಪ್ರಾಣಾಪಾಯದಿಂದ ಚಿತ್ರದುರ್ಗ ಡಿಸಿ‌ ವಿನೋತ್ ಪ್ರಿಯಾ ಪಾರು

ಚಿತ್ರದುರ್ಗ ಜಿಲ್ಲಾಧಿಕಾರಿ ಆರ್‌.ವಿನೋತ್‌ ಪ್ರಿಯಾ ಅವರು ಪ್ರಯಾಣಿಸುತ್ತಿದ್ದ ಕಾರು ಹಾಗೂ ಸರ್ಕಾರಿ ಬಸ್ಸು ಮುಖಾಮುಖಿ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದ ಘಟನೆ ಜಿಲ್ಲೆಯ ಹೊಳಲ್ಕೆರೆ ತಾಲ್ಲೂಕಿನ ಶಿವಗಂಗಾ ಗ್ರಾಮದ ಬಳಿ ವರದಿಯಾಗಿದೆ. 
ಚಿತ್ರದುರ್ಗ ಜಿಲ್ಲಾಧಿಕಾರಿ ಕಾರಿಗೆ ಸರ್ಕಾರಿ ಬಸ್ ಢಿಕ್ಕಿ
ಚಿತ್ರದುರ್ಗ ಜಿಲ್ಲಾಧಿಕಾರಿ ಕಾರಿಗೆ ಸರ್ಕಾರಿ ಬಸ್ ಢಿಕ್ಕಿ
Updated on

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲಾಧಿಕಾರಿ ಆರ್‌.ವಿನೋತ್‌ ಪ್ರಿಯಾ ಅವರು ಪ್ರಯಾಣಿಸುತ್ತಿದ್ದ ಕಾರು ಹಾಗೂ ಸರ್ಕಾರಿ ಬಸ್ಸು ಮುಖಾಮುಖಿ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದ ಘಟನೆ ಜಿಲ್ಲೆಯ ಹೊಳಲ್ಕೆರೆ ತಾಲ್ಲೂಕಿನ ಶಿವಗಂಗಾ ಗ್ರಾಮದ ಬಳಿ ವರದಿಯಾಗಿದೆ. 

ಕಾರಿನ ಏರ್‌ಬ್ಯಾಗ್‌ ತೆರೆದುಕೊಂಡ ಪರಿಣಾಮ ಜಿಲ್ಲಾಧಿಕಾರಿ ವಿನೋತ್ ಪ್ರಿಯಾ, ಚಾಲಕ‌ ಮನ್ಸೂರ್ ಹಾಗೂ ಗನ್ ಮ್ಯಾನ್ ನವೀನ್ ಪ್ರಾಣಪಾಯದಿಂದ ಪಾರಾಗಿದ್ದಾರೆ. 

ಘಟನೆಯಲ್ಲಿ ಕಾರಿನ ಮುಂಭಾಗ ಸಂಪೂರ್ಣ ನಜ್ಜು ಗುಜ್ಜಾಗಿದೆ. ವಿನೋತ್‌ ಪ್ರಿಯಾ ಅವರು ಚಿತ್ರದುರ್ಗದಿಂದ ಹೊಳಲ್ಕೆರೆಗೆ ತೆರಳುತ್ತಿದ್ದಾಗ,  ಹೊಳಲ್ಕೆರೆಯಿಂದ ಚಿತ್ರದುರ್ಗಕ್ಕೆ ಸಾರಿಗೆ ಬಸ್ಸೊಂದು ಪ್ರಯಾಣಿಸುತ್ತಿತ್ತು. ಈ ವೇಳೆ ಜಾನುವಾರು ಏಕಾಏಕೀ ರಸ್ತೆಗೆ ಬಂದಿದ್ದರಿಂದ ಈ ಅಪಘಾತ ಸಂಭವಿಸಿದೆ ಎಂದು ತಿಳಿದು ಬಂದಿದೆ. 

ಘಟನೆಯ ಬಳಿಕ ಬಸ್ಸನ ಚಾಲಕನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಕಾರಿನ ಚಾಲಕನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.


ಜಿಲ್ಲಾಧಿಕಾರಿ ವಿನೋತ್ ಪ್ರಿಯಾ ಅವರ ಕೈ ಬೆರಳಿಗೂ ಚಿಕ್ಕ ಗಾಯವಾಗಿದ್ದು, ಚಿಕಿತ್ಸೆ ತೆಗೆದುಕೊಂಡು ಬಳಿಕ ಬೇರೆ ಕಾರಿನಲ್ಲಿ ಚಿತ್ರದುರ್ಗಕ್ಕೆ ವಾಪಾಸ್ಸಾದರು. ಘಟನೆಗೆ ಸಂಬಂಧಿಸಿದಂತೆ ಚಿತ್ರಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com