ಬಿಗಿ ಭದ್ರತೆ ಕೊರತೆ: ಎಸ್ಎಸ್ಎಲ್ ಸಿ ಪ್ರಿಪರೇಟರಿ ಗಣಿತ ಪ್ರಶ್ನೆ ಪತ್ರಿಕೆ ಸೋರಿಕೆ

ಎಸ್ ಎಸ್ ಎಲ್ ಸಿ ಪ್ರಿಪರೇಟರಿ ಪರೀಕ್ಷೆಯ ಗಣಿತ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವುದನ್ನು ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ಒಪ್ಪಿಕೊಂಡಿದೆ. ಮಂಗಳವಾರ ಗಣಿತ ಪ್ರಿಪರೇಟರಿ ಪರೀಕ್ಷೆ ನಡೆಯಬೇಕಿತ್ತು.
ಕರ್ನಾಟಕ ಪರೀಕ್ಷಾ ಮಂಡಳಿ
ಕರ್ನಾಟಕ ಪರೀಕ್ಷಾ ಮಂಡಳಿ

ಬೆಂಗಳೂರು: ಎಸ್ ಎಸ್ ಎಲ್ ಸಿ ಪ್ರಿಪರೇಟರಿ ಪರೀಕ್ಷೆಯ ಗಣಿತ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವುದನ್ನು ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ಒಪ್ಪಿಕೊಂಡಿದೆ. ಮಂಗಳವಾರ ಗಣಿತ ಪ್ರಿಪರೇಟರಿ ಪರೀಕ್ಷೆ ನಡೆಯಬೇಕಿತ್ತು.

ಗಣಿತ ಪ್ರಶ್ನೆಪತ್ರಿಕೆ ವಾಟ್ಸಾಪ್ ನಲ್ಲಿ ಲೀಕ್ ಆಗಿದ್ದು ಎಲ್ಲೆಡೆ ವೈರಲ್ ಆಗಿದೆ. ಇದರ ಹಿಂದೆ ಯಾರಿದ್ದಾರೆ ಎಂಬುದನ್ನು ತಿಳಿದುಕೊಳ್ಳಲು ನಾವು ಈಗಾಗಲೇ  ಪೊಲೀಸರಿಗೆ ದೂರು ನೀಡಿದ್ದೇವೆ,  ಮುಂದಿನ ದಿನಗಳಲ್ಲಿ ಇಂತಹ ಪ್ರಮಾದಗಳಾದರೇ ಶಾಲೆಯ ಮುಖ್ಯೋಪಾಧ್ಯಾಯರೇ ನೇರ ಹೊಣೆಯಾಗುತ್ತಾರೆ ಎಂದು ಪರೀಕ್ಷಾ ಮಂಡಳಿಯ ನಿರ್ದೇಶಕಿ ವಿ. ಸುಮಂಗಲಾ ತಿಳಿಸಿದ್ದಾರೆ.

ಎಸ್ ಎಸ್ ಎಲ್ ಸಿ ಪೂರ್ವ ಸಿದ್ಧತಾ ಪರೀಕ್ಷೆ ಪ್ರಶ್ನೆ ಪತ್ರಿಕೆಗಳನ್ನು ಅಸಮರ್ಪಕ ರೀತಿಯಲ್ಲಿ ಪ್ಯಾಕ್ ಮಾಡಲಾಗುತ್ತದೆ ಎಂಬ ಬಗ್ಗೆ ದಿ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ವರದಿ ಮಾಡಿತ್ತು. ಪ್ರಶ್ನೆ ಪತ್ರಿಕೆಗಳನ್ನು ಸೀಲ್ ಮಾಡದೇ ಕೇವಲ ಸೆಲ್ಲೋಪೇನ್ ಟೇಪ್ ನಲ್ಲಿ ಅಂಟಿಸಲಾಗಿತ್ತು. ಹೀಗಾಗಿ ಪ್ರಶ್ನೆ ಪತ್ರಿಕೆ ಲೀಕ್ ಆಗುವ ಸಾಧ್ಯತೆಯಿದೆ ಎಂದು ಹೇಳಲಾಗಿತ್ತು,

ಈ ಬಗ್ಗೆ ಪರೀಕ್ಷಾ ಮಂಡಳಿಯವರನ್ನು ಪ್ರಶ್ನಿಸಿದಾಗ  ಎಲ್ಲಾ ಅಗತ್ಯ ಕ್ರಮಗಳನ್ನು ಕೈಗೊಂಡಿರುವುದಾಗಿ  ಮಂಡಳಿ ನಿರ್ದೇಶಕರು ತಿಳಿಸಿದ್ದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com