

ಬೆಂಗಳೂರು: ಪೌರತ್ವ (ತಿದ್ದುಪಡಿ) ಕಾಯ್ದೆ ವಿರುದ್ಧ ನಾಟಕ ಪ್ರದರ್ಶಿಸಿದ ವಿವಾದಕ್ಕೆ ಸಂಬಂಧಿಸಿದಂತೆ ಬೀದರ್ ನಗರದ ಶಾಹಿನ್ ಶಾಲಾ ಮಕ್ಕಳ ವಿಚಾರಣೆ ನಡೆಸುವಾಗ ಪೊಲೀಸರಿಂದ ಯಾವುದೇ ಕಾನೂನು ಹಾಗೂ ನಿಯಮಗಳು ಉಲ್ಲಂಘನೆಯಾಗಿಲ್ಲ ಎಂದು ರಾಜ್ಯ ಸರ್ಕಾರ ಹೈಕೋರ್ಟ್‌ಗೆ ಹೇಳಿಕೆ ನೀಡಿದೆ.
ಮಕ್ಕಳ ವಿರುದ್ಧ ದೇಶದ್ರೋಹದ ಪ್ರಕರಣ ದಾಖಲಿಸಿದ್ದನ್ನು ಪ್ರಶ್ನಿಸಿ ವಕೀಲರಾದ ನಯನ ಜ್ಯೋತಿ ಝಾವರ್ ಹಾಗೂ ಮಾನವ ಹಕ್ಕುಗಳ ಸಂಘಟನೆ ‘ಸಿಕ್ರೆಮ್’ ಸಲ್ಲಿಸಿದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನನ್ನು ಮುಖ್ಯ ನ್ಯಾಯಮೂರ್ತಿ ಎ.ಎಸ್. ಓಕಾ ನೇತೃತ್ವದ ವಿಭಾಗೀಯ ಪೀಠ ವಿಚಾರಣೆ ನಡೆಸಿದರು.
ವಿಚಾರಣೆ ವವೇಳೆ ಅಡ್ವಕೇಟ್ ಜನರಲ್ ಅವರು, ಶಾಲಾ ಆಡಳಿತ ಮಂಡಳಿ ಸದಸ್ಯರು, ಮುಖ್ಯ ಶಿಕ್ಷಕರು, ವರ್ಗ ಶಿಕ್ಷಕರು, ಮಕ್ಕಳ ರಕ್ಷಣಾಧಿಕಾರಿ, ಮಕ್ಕಳ ಕಲ್ಯಾಣ ಸಮಿತಿ ಸದಸ್ಯರು, ವಿಶೇಷ ಮಕ್ಕಳ ಪೊಲೀಸ್ ಘಟಕದ ಸದಸ್ಯರ ಸಮ್ಮುಖದಲ್ಲಿ ಮಕ್ಕಳ ಹೇಳಿಕೆಗಳನ್ನು ಪಡೆದುಕೊಳ್ಳಲಾಗಿದೆ ಎಂದು ಸ್ಪಷ್ಟನೆ ನೀಡಿದರು. ವಿಚಾರಣೆಯನ್ನು ಮಾರ್ಚ್ 7ಕ್ಕೆ ಮುಂದೂಡಲಾಗಿದೆ.