ಸಿಎಎ, ಎನ್‍ಸಿಆರ್ ವಿರೋಧಿ ಕಾರ್ಯಕ್ರಮದಲ್ಲಿ 'ಪಾಕಿಸ್ತಾನ್ ಜಿಂದಾಬಾದ್' ಎಂದ ಯುವತಿ, ಪೊಲೀಸ್ ವಶಕ್ಕೆ

ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ಮತ್ತು ಎನ್ಆರ್_ಸಿ (National Register of Citizens) ವಿರೋಧಿ ಕಾರ್ಯಕ್ರಮದಲ್ಲಿ ಪಾಕಿಸ್ತಾನ್ ಜಿಂದಾಬಾದ್ ಎಂದು ಕೂಗಿದ ಯುವತಿಯೋರ್ವಳನ್ನುಪೊಲೀಸರು ವಶಕ್ಕೆ ಪಡೆದಿರುವ ಘಟನೆ ನಡೆದಿದೆ.
ಪಾಕ್ ಪರ ಘೋಷಣೆ ಕೂಗಿದ ಯುವತಿ ಅಮೂಲ್ಯ
ಪಾಕ್ ಪರ ಘೋಷಣೆ ಕೂಗಿದ ಯುವತಿ ಅಮೂಲ್ಯ
Updated on

ಬೆಂಗಳೂರು: ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ಮತ್ತು ಎನ್ಆರ್_ಸಿ (National Register of Citizens) ವಿರೋಧಿ ಕಾರ್ಯಕ್ರಮದಲ್ಲಿ ಪಾಕಿಸ್ತಾನ್ ಜಿಂದಾಬಾದ್ ಎಂದು ಕೂಗಿದ ಯುವತಿಯೋರ್ವಳನ್ನುಪೊಲೀಸರು ವಶಕ್ಕೆ ಪಡೆದಿರುವ ಘಟನೆ ನಡೆದಿದೆ.

ಸಿಎಎ ಹಾಗೂ ಎನ್‍ಸಿಆರ್ ವಿರೋಧಿಸಿ ಇಂದು ಬೆಂಗಳೂರಿನ ಫ್ರೀಡಂ ಪಾರ್ಕಿನಲ್ಲಿ ಪ್ರತಿಭಟನೆ ನಡೆಸಲಾಗುತ್ತಿತ್ತು. ಈ ಪ್ರತಿಭಟನಾ ಕಾರ್ಯಕ್ರಮದಲ್ಲಿ ಎಂಐಎಂ ಮುಖ್ಯಸ್ಥ ಆಸಾದುದ್ದೀನ್ ಓವೈಸಿ ಸೇರಿದಂತೆ ಹಲವು ನಾಯಕರು ಭಾಗವಹಿಸಿದ್ದರು. ಪೌರತ್ವ ತಿದ್ದುಪಡಿ ಕಾಯ್ದೆ, ಎನ್ ಆರ್ ಸಿ ವಿರೋಧಿಸಿ ಟಿಪ್ಪು ಸುಲ್ತಾನ್‌ ಯುನೈಟೆಡ್‌ ಫ್ರಂಟ್‌, ಹಿಂದೂ-ಮುಸ್ಲಿಂ-ಸಿಖ್- ಈಸಾಯಿ ಫೆಡರೇಷನ್ ನಗರದ ಸ್ವಾತಂತ್ರ್ಯ ಉದ್ಯಾನದಲ್ಲಿ ಗುರುವಾರ ಸಂಜೆ ಆಯೋಜಿಸಿದ್ದ ಪ್ರತಿಭಟನಾ ಸಮಾವೇಶದಲ್ಲಿ ಯುವತಿಯೊಬ್ಬಳು ಪಾಕಿಸ್ತಾನ ಜಿಂದಾಬಾದ್ ಎಂದು ಪಾಕ್ ಪರ ಜೈಕಾರ ಕೂಗಿದ್ದಾಳೆ.

ಪ್ರಧಾನ ಭಾಷಣಕಾರರಾಗಿ ಆಗಮಿಸಿದ್ದ 19 ವರ್ಷದ ಯುವತಿ ಅಮೂಲ್ಯ ಮಾತು ಆರಂಭಿಸುವ ಮುನ್ನವೇ ಪಾಕಿಸ್ತಾನ ಜಿಂದಾಬಾದ್ ಎಂದು ಘೋಷಣೆ ಕೂಗಿದರು. ವೇದಿಕೆ ಮೇಲೆ ಬಂದ ಚಿಕ್ಕಮಗಳೂರಿನ ಕೊಪ್ಪ ಮೂಲದ ಯುವತಿ ಅಮೂಲ್ಯ ಪಾಕಿಸ್ತಾನಕ್ಕೆ ಜಿಂದಾಬಾದ್ ಎಂದು ಕೂಗಿದ್ದು, ಅಮೂಲ್ಯ ಈ ರೀತಿ ಘೋಷಣೆ ಕೂಗುತ್ತಿದ್ದಂತೆ ಓವೈಸಿ ಆಕೆಯನ್ನು ತಡೆದಿದ್ದಾರೆ. ಬಳಿಕ ಪೊಲೀಸರು ಕೂಡಲೇ ಅಮೂಲ್ಯಳನ್ನು ವೇದಿಕೆಯಿಂದ ಕರೆದುಕೊಂಡು ವಶಕ್ಕೆ ಪಡೆದಿದ್ದಾರೆ. ಅಮೂಲ್ಯ ಪಾಕಿಸ್ತಾನಕ್ಕೆ ಜೈಕಾರ ಕೂಗುತ್ತಿದ್ದಂತೆ ಓವೈಸಿ ಗೊಂದಲಗೊಂಡರು. ತಕ್ಷಣ ಸಂಘಟಕರು ಮೈಕ್ ಕಿತ್ತುಕೊಂಡು ಅಮೂಲ್ಯ ಅವರನ್ನು ತಡೆದಿದ್ದಾರೆ.

ಈ ಘಟನೆ ಕಾರ್ಯಕ್ರಮ ಆಯೋಜಕರಲ್ಲಿ ಕೆಲ ಕಾಲ ಗೊಂದಲ ಮೂಡುವಂತೆ ಮಾಡಿತು. ಇನ್ನು ಪ್ರಸ್ತುತ ಯುವತಿಯನ್ನು ವಶಕ್ಕೆ ಪಡೆದಿರುವ ಪೊಲೀಸರು ರಹಸ್ಯ ಪ್ರದೇಶಕ್ಕೆ ಕರೆದೊಯ್ದು ವಿಚಾರಣೆ ನಡೆಸಿದ್ದಾರೆ ಎನ್ನಲಾಗಿದೆ. ಪಾಕ್ ಪರ ಜೈಕಾರ ಕೂಗಿದ ಅಮೂಲ್ಯಳನ್ನು ಉಪ್ಪಾರ್‌ಪೇಟೆ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಅಲ್ಲದೆ ಆಕೆಯ ವಿರುದ್ಧ ದೇಶದ್ರೋಹ ಪ್ರಕರಣದಡಿ ಪ್ರಕರಣ ದಾಖಲಿಸಲು ಸಿದ್ಧತೆ ನಡೆಸಲಾಗುತ್ತಿದೆ. ಐಪಿಸಿ ಸೆಕ್ಷನ್ 124ಎ, 153(ಎ) (ಬಿ) (ಸಿ), 505(2) ಅಡಿ ಕೇಸ್ ದಾಖಲಿಸಿಕೊಳ್ಳುತ್ತಿದ್ದಾರೆ. ಅಮೂಲ್ಯಳ ಪಾಕಿಸ್ತಾನ್ ಜಿಂದಾಬಾದ್ ಘೋಷಣೆ ವಿಡಿಯೋ ಆಧಾರದ ಮೇಲೆ ಪೊಲೀಸರು ಎಫ್‍ಐಆರ್ ದಾಖಲಿಸಿಕೊಳ್ಳಲಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com