ಕಾಶ್ಮೀರಿ ವಿದ್ಯಾರ್ಥಿಗಳ ಪರ ವಾದಿಸುವ ವಕೀಲರಿಗೆ ಭದ್ರತೆ ನೀಡಿ: ಪೊಲೀಸರಿಗೆ ಹೈಕೋರ್ಟ್ ಆದೇಶ

ಪಾಕಿಸ್ತಾನದ ಪರ ಘೋಷಣೆ ಕೂಗಿದ ಕೆಎಲ್ ಇ ಇಂಜಿನಿಯರಿಂಗ್ ಕಾಲೇಜಿನ ಮೂವರು ಕಾಶ್ಮೀರಿ ವಿದ್ಯಾರ್ಥಿಗಳ ಪರ ವಕಾಲತ್ತು ಮಾಡುವ ವಕೀಲರಿಗೆ ಸೂಕ್ತ ಭದ್ರತೆ ನೀಡುವಂತೆ ಹೈಕೋರ್ಟ್ ಗುರುವಾರ ಪೊಲೀಸರಿಗೆ ಆದೇಶಿಸಿದೆ.
ಬಂಧಿತ ವಿದ್ಯಾರ್ಥಿಗಳು - ಹುಬ್ಬಳ್ಳಿ ಪೊಲೀಸ್ ಆಯುಕ್ತರು
ಬಂಧಿತ ವಿದ್ಯಾರ್ಥಿಗಳು - ಹುಬ್ಬಳ್ಳಿ ಪೊಲೀಸ್ ಆಯುಕ್ತರು

ಬೆಂಗಳೂರು: ಪಾಕಿಸ್ತಾನದ ಪರ ಘೋಷಣೆ ಕೂಗಿದ ಕೆಎಲ್ ಇ ಇಂಜಿನಿಯರಿಂಗ್ ಕಾಲೇಜಿನ ಮೂವರು ಕಾಶ್ಮೀರಿ ವಿದ್ಯಾರ್ಥಿಗಳ ಪರ ವಕಾಲತ್ತು ಮಾಡುವ ವಕೀಲರಿಗೆ ಸೂಕ್ತ ಭದ್ರತೆ ನೀಡುವಂತೆ ಹೈಕೋರ್ಟ್ ಗುರುವಾರ ಪೊಲೀಸರಿಗೆ ಆದೇಶಿಸಿದೆ.

ಕಾಶ್ಮೀರಿ ವಿದ್ಯಾರ್ಥಿಗಳ ಪರ ಯಾವುದೇ ವಕೀಲರು ವಕಾಲತ್ತು ಮಾಡದಂತೆ ಹುಬ್ಬಳ್ಳಿ ವಕೀಲರ ಸಂಘ ನಿರ್ಣಯ ಕೈಗೊಂಡಿದ್ದು, ಇದನ್ನು ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್, ವಿದ್ಯಾರ್ಥಿಗಳ ಪರ ವಾದಿಸುವ ವಕೀಲರಿಗೆ ಪೊಲೀಸರು ಸೂಕ್ತ ಭದ್ರತೆ ನೀಡಬೇಕು ಮತ್ತು ಹುಬ್ಬಳ್ಳಿ ವಕೀಲರ ಸಂಘ ಕೈಗೊಂಡಿರುವ ನಿರ್ಣಯವನ್ನು ಪುನರ್ ಪರಿಶೀಲಿಸಬೇಕು ಎಂದು ಆದೇಶಿಸಿದೆ. ಅಲ್ಲದೆ ಈ ಸಂಬಂಧ ರಾಜ್ಯ ಸರ್ಕಾರ, ರಾಜ್ಯ ಪೊಲೀಸ್ ಮಹಾ ನಿರ್ದೇಶಕರಿಗೆ ಹುಬ್ಬಳ್ಳಿ-ಧಾರವಾಡ ಪೊಲೀಸ್ ಆಯುಕ್ತರಿಗೆ ಮತ್ತು ಹುಬ್ಬಳ್ಳಿ ವಕೀಲರ ಸಂಘಕ್ಕೆ ನೋಟಿಸ್​ ಜಾರಿಗೊಳಿಸಿದೆ.

ಇನ್ನು ವಿಚಾರಣೆ ವೇಳೆ ಹುಬ್ಬಳ್ಳಿ ವಕೀಲರ ಸಂಘದ ಪದಾಧಿಕಾರಿಗಳನ್ನೂ ಪ್ರತಿವಾದಿಗಳನ್ನಾಗಿ ಸೇರಿಸುವಂತೆ ಅರ್ಜಿದಾರರಿಗೆ ನ್ಯಾಯಪೀಠ ಸೂಚಿಸಿದೆ.

ಆರೋಪಿಗಳ ಪರ ವಕಾಲತ್ತು ವಹಿಸಲು ಮುಂದಾಗುವ ವಕೀಲರಿಗೆ ಸಂಪೂರ್ಣ ಪೊಲೀಸ್ ಭದ್ರತೆ ಒದಗಿಸುವಂತೆ ಹುಬ್ಬಳ್ಳಿ ಪೊಲೀಸ್ ಆಯುಕ್ತರಿಗೆ ನಿರ್ದೇಶನ ನೀಡಿದ ಹೈಕೋರ್ಟ್, ವಿಚಾರಣೆಯನ್ನು ಮಾ.3ಕ್ಕೆ ಮುಂದೂಡಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com