ರಾಷ್ಟ್ರೀಯ ಹೆದ್ದಾರಿ 50 ರಲ್ಲಿ  ಭೀಕರ ಅಪಘಾತ:ಲಾರಿ ಹರಿದು ಸ್ಥಳದಲ್ಲೇ ವ್ಯಕ್ತಿ ಸಾವು

ರಾಷ್ಟ್ರೀಯ ಹೆದ್ದಾರಿ 50 ರಲ್ಲಿ ಭೀಕರ ಅಪಘಾತವಾಗಿದೆ.ಕೊಪ್ಪಳದ ಕುಷ್ಟಗಿ ತಾಲ್ಲೂಕಿನ  ಕಲಕೇರಿ ಗ್ರಾಮದ ಬಳಿ ಲಾರಿ ಹರಿದು ಸ್ಥಳದಲ್ಲಿಯೇ ವ್ಯಕ್ತಿಯೊರ್ವ ಮೃತಪಟ್ಟಿದ್ದಾನೆ
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
Updated on: 

ಕೊಪ್ಪಳ: ರಾಷ್ಟ್ರೀಯ ಹೆದ್ದಾರಿ 50 ರಲ್ಲಿ ಭೀಕರ ಅಪಘಾತವಾಗಿದೆ.ಕೊಪ್ಪಳದ ಕುಷ್ಟಗಿ ತಾಲ್ಲೂಕಿನ  ಕಲಕೇರಿ ಗ್ರಾಮದ ಬಳಿ ಲಾರಿ ಹರಿದು ಸ್ಥಳದಲ್ಲಿಯೇ ವ್ಯಕ್ತಿಯೊರ್ವ ಮೃತಪಟ್ಟಿದ್ದಾನೆ.ಕೊಪ್ಪಳದ ಕುಷ್ಟಗಿ ಪೊಲೀಸ್ ಠಾಣಾ  ವ್ಯಾಪ್ತಿಯಲ್ಲಿ ಈ ದುರ್ಘಟನೆ ನಡೆದಿದೆ.

ಮೃತನನ್ನು ಶಿವಕುಮಾರ್ ಗೋನಾಳ (30) ಎಂದು ಗುರುತಿಸಲಾಗಿದೆ. ಇವರು ಪೊಲೀಸ್ ಇಲಾಖೆಯಲ್ಲಿ ಹೋಮ್  ಗಾರ್ಡ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದರು ಎನ್ನಲಾಗಿದೆ. 

ಶಿವಕುಮಾರ್ ಪೊಲೀಸ್ ಇಲಾಖೆಯಲ್ಲಿ ಗಸ್ತು ವಾಹನದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು ಎಂಬುದು ತಿಳಿದುಬಂದಿದೆ. ಮೃತ ವ್ಯಕ್ತಿಯ ಸಂಬಂಧಿಕರ ಆಕ್ರಂದನ ಮುಗಿಲು ಮುಟ್ಟಿದೆ. 

 ಕೊಪ್ಪಳದ ಕುಷ್ಟಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com