ಪೇಜಾವರ ಮಠದಿಂದ ವಿಶ್ವೇಶತೀರ್ಥ ಶ್ರೀಗಳ ಹೆಸರಿನಲ್ಲಿ ರಾಮ ಮಂದಿರಕ್ಕೆ 5 ಲಕ್ಷ ರೂ ದೇಣಿಗೆ 

ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣಕ್ಕೆ ಟ್ರಸ್ಟ್ ನಿರ್ಮಾಣವಾಗುತ್ತಿದ್ದಂತೆಯೇ ಮಂದಿರ ನಿರ್ಮಾಣಕ್ಕೆ ದೇಣಿಗೆ ಸಂಗ್ರಹ ಕಾರ್ಯ ಪ್ರಾರಂಭವಾಗಿದೆ. 
ಪೇಜಾವರ ಮಠದಿಂದ ವಿಶ್ವೇಶತೀರ್ಥ ಶ್ರೀಗಳ ಹೆಸರಿನಲ್ಲಿ ರಾಮ ಮಂದಿರಕ್ಕೆ 5 ಲಕ್ಷ ರೂ ದೇಣಿಗೆ
ಪೇಜಾವರ ಮಠದಿಂದ ವಿಶ್ವೇಶತೀರ್ಥ ಶ್ರೀಗಳ ಹೆಸರಿನಲ್ಲಿ ರಾಮ ಮಂದಿರಕ್ಕೆ 5 ಲಕ್ಷ ರೂ ದೇಣಿಗೆ

ನವದೆಹಲಿ: ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣಕ್ಕೆ ಟ್ರಸ್ಟ್ ನಿರ್ಮಾಣವಾಗುತ್ತಿದ್ದಂತೆಯೇ ಮಂದಿರ ನಿರ್ಮಾಣಕ್ಕೆ ದೇಣಿಗೆ ಸಂಗ್ರಹ ಕಾರ್ಯ ಪ್ರಾರಂಭವಾಗಿದೆ. 

ಈಗಾಗಲೇ ಬಿಹಾರದಿಂದ ಹನುಮಾನ್ ಟ್ರಸ್ಟ್  ರಾಮ ಮಂದಿರ ನಿರ್ಮಾಣಕ್ಕೆ ದೇಣಿಗೆ ನೀಡಿದೆ ಈ ಬೆನ್ನಲ್ಲೇ ನಡೆದ  
ಅಯೋಧ್ಯೆ ರಾಮ ಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್ ನ ಮೊದಲ ಸಭೆಯಲ್ಲಿ ಉಡುಪಿ ಪೇಜಾವರ ಮಠದಿಂದ ರಾಮಮಂದಿರ ನಿರ್ಮಾಣಕ್ಕೆ 5 ಲಕ್ಷ ರೂಪಾಯಿ ದೇಣಿಗೆ ನೀಡಲಾಗಿದೆ. 

ದೆಹಲಿಯಲ್ಲಿ ನಡೆದ ಸಭೆಯಲ್ಲಿ ಉಡುಪಿ ಪೇಜಾವರ ಮಠಾಧೀಶರಾದ ವಿಶ್ವಪ್ರಸನ್ನ ತೀರ್ಥರು ಈ ಬಗ್ಗೆ ಮಾಹಿತಿ ನೀಡಿದ್ದು, ರಾಮ ಮಂದಿರ ನಿರ್ಮಾಣಕ್ಕೆ 5 ಲಕ್ಷ ರೂಪಾಯಿ ದೇಣಿಗೆಯನ್ನು ವಿಶ್ವೇಶತೀರ್ಥ ಸ್ವಾಮೀಜಿ ಹೆಸರಲ್ಲಿ ನೀಡಿದ್ದೇವೆ ಎಂದು ಹೇಳಿದ್ದಾರೆ. 

ಉಡುಪಿ ಕೃಷ್ಣಮಠದ ಪ್ರಸಾದವನ್ನು ಟ್ರಸ್ಟ್ ಸದಸ್ಯರಿಗೆ ನೀಡಲಾಗಿದೆ, ದೇಣಿಗೆ ನೀಡುವವರು ನೇರ ಬ್ಯಾಂಕ್ ಖಾತೆಗೆ ಹಾಕುವ ವ್ಯವಸ್ಥೆ ಮಾಡಲಾಗಿದೆ. ರಾಮ ಮಂದಿರ ಶಾಸ್ತ್ರೋಕ್ತವಾಗಿ ನಿರ್ಮಾಣವಾಗಬೇಕೆಂಬ ತೀರ್ಮಾನ ಸಭೆಯಲ್ಲಿ ಕೈಗೊಳ್ಳಲಾಗಿದೆ ದೇಶಾದ್ಯಂತ ದೇಗುಲ, ಮನೆಗಳಲ್ಲಿ ರಾಮಜಪ ಪಾರಾಯಣಕ್ಕೆ ತೀರ್ಮಾನಿಸಿದ್ದು, ಮಂದಿರ ನಿರ್ಮಾಣದವರೆಗೆ ದೇಶಾದ್ಯಂತ ರಾಮಾಯಣ ಪಾರಾಯಣ ನಡೆಯಲಿದೆ ಎಂದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com