
ಬೆಂಗಳೂರು: ಸಿಎಎ ಹಾಗೂ ಎನ್‍ಸಿಆರ್ ವಿರೋಧಿಸಿ ಇಂದು ಬೆಂಗಳೂರಿನ ಫ್ರೀಡಂ ಪಾರ್ಕಿನಲ್ಲಿ ನಡೆಯುತ್ತಿದ್ದ ಪ್ರತಿಭಟನಾ ಕಾರ್ಯಕ್ರಮದಲ್ಲಿ ಯುವತಿ ಪಾಕ್ ಪರ ಘೋಷಣೆ ಕೂಗಿದ ಘಟನೆ ಇದೀಗ ವ್ಯಾಪಕ ವೈರಲ್ ಆಗುತ್ತಿದೆ.
ಸಿಎಎ ಹಾಗೂ ಎನ್‍ಸಿಆರ್ ವಿರೋಧಿಸಿ ಇಂದು ಬೆಂಗಳೂರಿನ ಫ್ರೀಡಂ ಪಾರ್ಕಿನಲ್ಲಿ ನಡೆಯುತ್ತಿದ್ದ ಕಾರ್ಯಕ್ರಮದಲ್ಲಿ ಪಾಕಿಸ್ತಾನ ಪರ ಘೋಷಣೆ ಕೂಗಿ ಸುದ್ದಿಗೆ ಗ್ರಾಸವಾಗಿರುವ ಯುವತಿ ಅಮೂಲ್ಯ ವಿರುದ್ಧ ದೇಶಾದ್ಯಂತ ವ್ಯಾಪಕ ಆಕ್ರೋಶ ವ್ಯಕ್ತವಾಗುತ್ತಿದೆ. ಯುವತಿ ಅಮೂಲ್ಯ ಪಾಕ್ ಪರ ಘೋಷಣೆ ಕೂಗಿದ ವಿಡಿಯೋ ಇದೀಗ ವ್ಯಾಪಕ ವೈರಲ್ ಆಗುತ್ತಿದೆ.
ಯುವತಿ ಅಮೂಲ್ಯ ಮಾತು ಆರಂಭಿಸುವ ಮುನ್ನವೇ ಪಾಕಿಸ್ತಾನ ಜಿಂದಾಬಾದ್ ಎಂದು ಘೋಷಣೆ ಕೂಗಿದರು. ವೇದಿಕೆ ಮೇಲೆ ಬಂದ ಚಿಕ್ಕಮಗಳೂರಿನ ಕೊಪ್ಪ ಮೂಲದ ಯುವತಿ ಅಮೂಲ್ಯ ಪಾಕಿಸ್ತಾನಕ್ಕೆ ಜಿಂದಾಬಾದ್ ಎಂದು ಕೂಗಿದ್ದು, ಅಮೂಲ್ಯ ಈ ರೀತಿ ಘೋಷಣೆ ಕೂಗುತ್ತಿದ್ದಂತೆ ವೇದಿಕೆಯಲ್ಲೇ ಇದ್ದ ಓವೈಸಿ ತಬ್ಬಿಬ್ಬಾಗಿದ್ದಾರೆ. ವೇದಿಕೆಯ ಹಿಂಭಾಗಕ್ಕೆ ತೆರಳುತ್ತಿದ್ದ ಒವೈಸಿ, ಪಾಕ್ ಘೋಷಣೆ ಕೇಳುತ್ತಿದ್ದಂತೆಯೇ ಮತ್ತೆ ವೇದಿಕೆಗೆ ದೌಡಾಯಿಸಿ ಆಕೆಯನ್ನು ತಡೆದಿದ್ದಾರೆ. ಈ ವೇಳೆ ಕಾರ್ಯಕ್ರಮದ ಆಯೋಜಕರೂ ಕೂಡ ಕೂಡಲೇ ಅಮೂಲ್ಯ ಕೈಯಲ್ಲಿದ್ದ ಮೈಕ್ ಅನ್ನು ಕಿತ್ತುಕೊಳ್ಳುವ ಪ್ರಯತ್ನ ಮಾಡುತ್ತಾರೆ.
ಈ ವೇಳೆ ಎಚ್ಚೆತ್ತ ಅಮೂಲ್ಯ ಹಿಂದೂಸ್ತಾನ್ ಜಿಂದಾಬಾದ್ ಎಂದು ಹೇಳಿ ತೇಪೆ ಹಚ್ಚುವ ಕಾರ್ಯಕ್ಕೆ ಮುಂದಾಗುತ್ತಾರೆಯಾದರೂ, ಅಷ್ಟು ಹೊತ್ತಿಗಾಗಲೇ ಆಯೋಕರು ಮತ್ತು ಪೊಲೀಸರು ಆಕೆಯನ್ನು ವೇದಿಕೆಯಿಂದ ಕೆಳಗಿಳಿಸಲು ಮುಂದಾಗುತ್ತಾರೆ. ಬಳಿಕ ಪೊಲೀಸರು ಕೂಡಲೇ ಅಮೂಲ್ಯಳನ್ನು ವೇದಿಕೆಯಿಂದ ಕರೆದುಕೊಂಡು ವಶಕ್ಕೆ ಪಡೆದಿದ್ದಾರೆ. ಇವಿಷ್ಟೂ ಘಟನೆ ಕ್ಯಾಮೆರಾದಲ್ಲಿ ದಾಖಲಾಗಿದ್ದು, ವಿಡಿಯೋ ವೈರಲ್ ಆಗುತ್ತಿದೆ.
ಇನ್ನು ಪಾಕ್ ಪರ ಘೋಷಣೆ ಕೂಗಿದ ಯುವತಿ ಅಮೂಲ್ಯ ವಿರುದ್ಧ ಬೆಂಗಳೂರಿನ ಉಪ್ಪಾರಪೇಟೆ ಪೊಲೀಸರು, ಐಪಿಸಿ ಸೆಕ್ಷನ್ 124ಎ (ದೇಶದ್ರೋಹ), 153 (ಎ) (ಎರಡು ಗುಂಪುಗಳ ನಡುವೆ ಶತೃತ್ವ ಬಿತ್ತುವುದು) 153 (ಬಿ) (ಭಾವೈಕ್ಯತೆ, ರಾಷ್ಟ್ಪೀಯ ಐಕ್ಯತೆಗೆ ಧಕ್ಕೆ ತರುವುದು)ರ ಅಡಿ ಎಫ್ ಐಆರ್ ದಾಖಲಿಸಿಕೊಂಡಿದ್ದಾರೆ. ಮೂಲಗಳ ಪ್ರಕಾರ ಅಮೂಲ್ಯಳ ಪಾಕಿಸ್ತಾನ್ ಜಿಂದಾಬಾದ್ ಘೋಷಣೆಯ ವಿಡಿಯೋ ಆಧಾರದ ಮೇಲೆ ಪೊಲೀಸರು ಎಫ್‍ಐಆರ್ ದಾಖಲಿಸಿಕೊಂಡಿದ್ದಾರೆ ಎನ್ನಲಾಗಿದೆ.
ಮಗಳು ಮಾಡಿದ್ದು ಅಕ್ಷಮ್ಯ, ಆಕೆಗೆ ಬೇಲ್ ಕೂಡ ಕೊಡುವುದಿಲ್ಲ: ಅಮೂಲ್ಯ ತಂದೆ
ಪಾಕಿಸ್ತಾನ್ ಜಿಂದಾಬಾದ್ ಎಂದ ಯುವತಿ ಮೇಲೆ ಬಿತ್ತು ದೇಶದ್ರೋಹ ಪ್ರಕರಣ!
ಅಮೂಲ್ಯ ಮಾತ್ರವಲ್ಲ, ವೇದಿಕೆಯಲ್ಲಿದ್ದ ಎಲ್ಲರ ಮೇಲೂ ದೇಶದ್ರೋಹ ಕೇಸ್ ಹಾಕಿ: ಅನಂತ್ ಕುಮಾರ್ ಹೆಗ್ಡೆ
ಅಂದು ವಂದೇ ಮಾತರಂ ಹಾಡಿ ಎಂದು ಪೀಡಿಸಿದ್ದ ಯುವತಿಯಿಂದಲೇ ಇಂದು ಪಾಕ್ ಪರ ಘೋಷಣೆ!
ಪಾಕ್ ಪರ ಘೋಷಣೆ: ಪ್ರತಿಭಟನೆಯ ದಿಕ್ಕು ತಪ್ಪಿಸುವ ಹುನ್ನಾರ: ಒವೈಸಿ ಆರೋಪ
ಸಿಎಎ, ಎನ್‍ಸಿಆರ್ ವಿರೋಧಿ ಕಾರ್ಯಕ್ರಮದಲ್ಲಿ 'ಪಾಕಿಸ್ತಾನ್ ಜಿಂದಾಬಾದ್' ಎಂದ ಯುವತಿ, ಪೊಲೀಸ್ ವಶಕ್ಕೆ
Advertisement