ಮಹದಾಯಿ ಅಧಿಸೂಚನೆಗೆ ಸುಪ್ರೀಂ ಆದೇಶ: ಮುಖ್ಯಮಂತ್ರಿ ಯಡಿಯೂರಪ್ಪ ಸ್ವಾಗತ

ಮಹದಾಯಿ ನದಿ ನೀರು ಹಂಚಿಕೆ ಸಂಬಂಧ ಗೆಜೆಟ್‌ ಅಧಿಸೂಚನೆ ಹೊರಡಿಸಲು ಸುಪ್ರಿಂ ಕೋರ್ಟ್‌, ಕೇಂದ್ರ ಸರ್ಕಾರಕ್ಕೆ ಸೂಚನೆ ನೀಡಿರುವುದು ಸ್ವಾಗತಾರ್ಹ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದ್ದಾರೆ.
ಯಡಿಯೂರಪ್ಪ
ಯಡಿಯೂರಪ್ಪ
Updated on: 

ಬೆಂಗಳೂರು: ಮಹದಾಯಿ ನದಿ ನೀರು ಹಂಚಿಕೆ ಸಂಬಂಧ ಗೆಜೆಟ್‌ ಅಧಿಸೂಚನೆ ಹೊರಡಿಸಲು ಸುಪ್ರಿಂ ಕೋರ್ಟ್‌, ಕೇಂದ್ರ ಸರ್ಕಾರಕ್ಕೆ ಸೂಚನೆ ನೀಡಿರುವುದು ಸ್ವಾಗತಾರ್ಹ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದ್ದಾರೆ.

ಕುಡಿವ ನೀರಿಗಾಗಿ ಪರದಾಡುತ್ತಿದ್ದ ಉತ್ತರ ಕರ್ನಾಟಕದ ನಾಲ್ಕು ಜಿಲ್ಲೆಗಳ 11 ತಾಲ್ಲೂಕಿನ ಗ್ರಾಮಗಳ ಜನರ ಪಾಲಿಗೆ ಇದು ಬಹಳ ಸಂತಸದ ಸಂಗತಿ. ಕೋರ್ಟ್ ನ ಈ ಸೂಚನೆಯಿಂದ ನೀರಿನ ಬಳಕೆಗೆ ಇದ್ದ ತೊಡಕು ನಿವಾರಣೆಯಾದಂತಾಗಿದೆ ಎಂದು ಟ್ವೀಟ್ ಮಾಡಿದ್ದಾರೆ.

ಕಣಿವೆ ರಾಜ್ಯಗಳಿಗೆ ನೀರು ಹಂಚಿಕೆ ಮಾಡಿ ಮಹದಾಯಿ ಜಲ ವಿವಾದ ನ್ಯಾಯಮಂಡಳಿ ನೀಡಿರುವ ಐತೀರ್ಪು ಕುರಿತು ಅಧಿಸೂಚನೆ ಹೊರಡಿಸುವಂತೆ ಸುಪ್ರೀಂಕೋರ್ಟ್‌ ಗುರುವಾರ ಕೇಂದ್ರ ಸರ್ಕಾರಕ್ಕೆ ಸೂಚನೆ ನೀಡಿತ್ತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com