ಪಾಕಿಸ್ತಾನ ಪರ ಘೋಷಣೆ ಕೂಗುವವರನ್ನು ಗಲ್ಲಿಗೆ ಹಾಕಿ: ಜಮೀರ್ ಅಹ್ಮದ್

ಪಾಕಿಸ್ತಾನದ ಪರವಾಗಿ ಘೋಷಣೆ ಕೂಗಿದವರಿಗೆ ಜೀವಾವಧಿ ಶಿಕ್ಷೆಯಾಗಲಿ. ಒಂದು ವೇಳೆ ಉದ್ದೇಶಪೂರ್ವಕವಾಗಿ ಇಂತಹ ಘೋಷಣೆಗಳನ್ನು ಕೂಗುವವರಿಗೆ ಗಲ್ಲು ಶಿಕ್ಷೆ ವಿಧಿಸಬೇಕು ಎಂದು ಮಾಜಿ ಸಚಿವ ಝಮೀರ್ ಅಹ್ಮದ್ ಖಾನ್ ಹೇಳಿದರು.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಬೆಂಗಳೂರು: ಪಾಕಿಸ್ತಾನದ ಪರವಾಗಿ ಘೋಷಣೆ ಕೂಗಿದವರಿಗೆ ಜೀವಾವಧಿ ಶಿಕ್ಷೆಯಾಗಲಿ. ಒಂದು ವೇಳೆ ಉದ್ದೇಶಪೂರ್ವಕವಾಗಿ ಇಂತಹ ಘೋಷಣೆಗಳನ್ನು ಕೂಗುವವರಿಗೆ ಗಲ್ಲು ಶಿಕ್ಷೆ ವಿಧಿಸಬೇಕು ಎಂದು ಮಾಜಿ ಸಚಿವ ಝಮೀರ್ ಅಹ್ಮದ್ ಖಾನ್ ಹೇಳಿದರು.

ಶುಕ್ರವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸ್ವಾತಂತ್ರ ಉದ್ಯಾನವನದಲ್ಲಿ ಸಂಸದ ಅಸದುದ್ದೀನ್ ಉವೈಸಿ, ನಿನ್ನೆ ಸಿಎಎ, ಎನ್‌ಆರ್‌ಸಿ ವಿರುದ್ಧ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ವೇಳೆ ಯುವತಿ ಅಮೂಲ್ಯ ಪಾಕಿಸ್ತಾನದ ಪರವಾಗಿ ಘೋಷಣೆ ಕೂಗಿದ್ದನ್ನು ನಾನು ಮಾಧ್ಯಮಗಳಲ್ಲಿ ನೋಡಿದ್ದೇನೆ ಎಂದರು.

ಏನೋ ಒಂದು ಬಾರಿ ಹೇಳಿದ್ದರೆ ಬಾಯಿ ತಪ್ಪಿ ಹೇಳಿರಬಹುದು ಎಂದು ಭಾವಿಸಬಹುದಿತ್ತು. ಆದರೆ, ಒಂದೇ ಘೋಷಣೆಯನ್ನು ಮೂರು ಬಾರಿ ಹೇಳಿದ್ದಾರೆ. ವೇದಿಕೆ ಮೇಲೆ ಇದ್ದವರು ಘೋಷಣೆ ಕೂಗದಂತೆ ಆಕೆಯನ್ನು ತಡೆಯಲು ಪ್ರಯತ್ನಿಸಿದರೂ ಆಕೆ ಸುಮ್ಮನಾಗಲಿಲ್ಲ. ಈ ಘಟನೆಯನ್ನು ನಾನು ತೀವ್ರವಾಗಿ ಖಂಡಿಸುತ್ತೇನೆ ಎಂದು ಝಮೀರ್ ಅಹ್ಮದ್ ಖಾನ್ ಹೇಳಿದರು.

ಆಕೆಗೂ ಕಾಂಗ್ರೆಸ್‌ ಪಕ್ಷಕ್ಕೂ ಯಾವುದೇ ಸಂಬಂಧ ಇಲ್ಲ
ಪಾಕಿಸ್ತಾನ ಜಿಂದಾಬಾದ್‌ ಘೋಷಣೆ ಕೂಗಿದವರಿಗೆ ಜೀವಾವಧಿ ಶಿಕ್ಷೆ ಆಗಬೇಕು. ಇದು ದೇಶದ್ರೋಹ. ಅಮೂಲ್ಯ ಹೇಳಿಕೆಯನ್ನು ಖಂಡಿಸುತ್ತೇನೆ. ನಾನು 2, 3 ಕಡೆ ಸಿಎಎ ವಿರೋಧಿ ಸಭೆ ಆಯೋಜಿಸಿದ್ದಾಗ ಅಮೂಲ್ಯ ಸ್ವಯಂ ಪ್ರೇರಿತರಾಗಿ ಪಾಲ್ಗೊಂಡಿದ್ದಳು. ಆಕೆಗೂ ಕಾಂಗ್ರೆಸ್‌ ಪಕ್ಷಕ್ಕೂ ಯಾವುದೇ ಸಂಬಂಧ ಇಲ್ಲ. ಯಾರೇ ಪಾಕ್‌ ಪರ ಘೋಷಣೆ ಕೂಗಿದರೂ ನಾವು ಸಹಿಸಲ್ಲ ಎಂದು ಮಾಜಿ ಸಚಿವ ಜಮೀರ್‌ ಅಹ್ಮದ್‌ ಖಾನ್‌ ಸ್ಪಷ್ಟಪಡಿಸಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com