ರಾಜ್ಯ ಬಜೆಟ್'ಗೆ ದಿನಗಣನೆ ಆರಂಭ: ಸಿಎಂಗೆ ಎದುರಾದ ಸಮಯದ ಅಭಾವ, ಸಾರ್ವಜನಿಕ ರಜೆಯಂದೂ ಅಧಿಕಾರಿಗಳೊಂದಿಗೆ ಸಭೆ

2020-21ನೇ ಸಾಲಿನ ರಾಜ್ಯ ಬಜೆಟ್'ಗೆ ದಿನಗಣನೆ ಆರಂಭಗೊಂಡಿದ್ದು, ಸಮಯದ ಅಭಾವ ಎದುರಾಗಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಸಾರ್ವಜನಿಕ ರಜಾ ದಿನದಂದೂ ಕೂಡ ವಿತ್ತ ಸಚಿವಾಲಯ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿದ್ದಾರೆ. 
ಯಡಿಯೂರಪ್ಪ
ಯಡಿಯೂರಪ್ಪ

ಬೆಂಗಳೂರು: 2020-21ನೇ ಸಾಲಿನ ರಾಜ್ಯ ಬಜೆಟ್'ಗೆ ದಿನಗಣನೆ ಆರಂಭಗೊಂಡಿದ್ದು, ಸಮಯದ ಅಭಾವ ಎದುರಾಗಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಸಾರ್ವಜನಿಕ ರಜಾ ದಿನದಂದೂ ಕೂಡ ವಿತ್ತ ಸಚಿವಾಲಯ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿದ್ದಾರೆ. 

ಮಾರ್ಚ್ 5 ರಂದು ರಾಜ್ಯ ಬಜೆಟ್ ಮಂಡನೆಯಾಗಲಿದ್ದು, ಈ ಹಿನ್ನೆಲೆಯಲ್ಲಿ ಸಾರ್ವಜನಿಕ ರಜಾ ದಿನವಾಗಿದ್ದರೂ ನಾಲ್ಕನೇ ಶನಿವಾರದಂದೂ ಕೂಡ ಆರ್ಥಿಕ ಇಲಾಖೆಯ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಮಾತುಕತೆ ನಡೆಸಿದ್ದಾರೆ. 

ಫೆಬ್ರವರಿ 11 ರಿಂದಲೂ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಸುದೀರ್ಘವಾಗಿ ವಿವಿಧ ಇಲಾಖೆಗಳು ಹಾಗೂ ಸಚಿವಾಲಯಗಳ ಅಧಿಕಾರಿಗಳೊಂದಿಗೆ ಸಭೆ ಹಾಗೂ ಮಾತುಕತೆಗಳನ್ನು ನಡೆಸುತ್ತಿದ್ದು, ರಾಜ್ಯದ ಆರ್ಥಿಕ ಪರಿಸ್ಥಿತಿ ಬಗ್ಗೆ ಮಾಹಿತಿ ಪಡೆದುಕೊಳ್ಳುತ್ತಿದ್ದಾರೆ. ಅಲ್ಲದೆ, ಇಂದು ಶಿವಮೊಗ್ಗ ಜಿಲ್ಲೆಗೆ ಭೇಟಿ ನೀಡಲಿದ್ದು, ಮುಂದಿನ ಮೂರು ದಿನಗಳ ಕಾಲ ವಿವಿಧ ಜಿಲ್ಲೆಗಳಿಗೆ ಭೇಟಿ ನೀಡಿ ಅಧಿಕಾರಿಗಳೊಂದಿಗೆ ಮಾತುಕತೆ ನಡೆಸಲಿದ್ದಾರೆಂದು ಮುಖ್ಯಮಂತ್ರಿ ಕಚೇರಿಯ ಮೂಲಗಳು ಮಾಹಿತಿ ನೀಡಿವೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com