ರಾಜ್ಯ ಕಾಂಗ್ರೆಸ್ ನಾಯಕರ ನಿದ್ದೆಗೆಡಿಸಿದ್ದ ಪಾತಕಿ ರವಿ ಪೂಜಾರಿ ಬೆಂಗಳೂರಿಗೆ

1993 ರ ಮುಂಬಯಿ ಸರಣಿ ಬಾಂಬ್ ಸ್ಪೋಟರ ಮಾಸ್ಟರ್ ಮೈಂಡ್ ರವಿ ಪೂಜಾರಿಯನ್ನು ಬಿಗಿ ಭದ್ರತೆಯೊಂದಿಗೆ ಬೆಂಗಳೂರಿಗೆ ಕರೆ ತರಲಾಗಿದೆ. 
ರವಿ ಪೂಜಾರಿ
ರವಿ ಪೂಜಾರಿ

ಬೆಂಗಳೂರು:  1993 ರ ಮುಂಬಯಿ ಸರಣಿ ಬಾಂಬ್ ಸ್ಪೋಟರ ಮಾಸ್ಟರ್ ಮೈಂಡ್ ರವಿ ಪೂಜಾರಿಯನ್ನು ಬಿಗಿ ಭದ್ರತೆಯೊಂದಿಗೆ ಬೆಂಗಳೂರಿಗೆ ಕರೆ ತರಲಾಗಿದೆ. 

ಮಡಿವಾಳದ ಇಂಟರ್‌ಗೇಷನ್‌ ಕಚೇರಿಯಲ್ಲಿ ವಿಚಾರಣೆಗೆ ಒಳಪಡಿಸಲಿದ್ದು, ನಂತರ ಕೋರ್ಟ್‌ಗೆ ಹಾಜರುಪಡಿಸಲಾಗುತ್ತದೆ. 

ಸಿಸಿಬಿ ಇನ್ಸ್‌ಪೆಕ್ಟರ್‌ ಮಹೇಶ್‌ ಬೋಳೆತ್ತಿನ್‌ ಹಾಗೂ ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಎಡಿಜಿಪಿ ಅಮರ್‌ಕುಮಾರ್‌ ಪಾಂಡೆ ನೇತೃತ್ವದಲ್ಲಿ ಈ ಕಾರ್ಯಾಚರಣೆ ನಡೆದಿದೆ.

ರವಿ ಪೂಜಾರಿಯನ್ನು ವಶಕ್ಕೆ ಪಡೆದುಕೊಳ್ಳಲಾಗಿದ್ದು, ಭಾರತೀಯ ಪೊಲೀಸರ ವಶದಲ್ಲೇ ಇರುವ ಪೂಜಾರಿಯನ್ನು ಭಾನುವಾರ ತಡರಾತ್ರಿ ದಿಲ್ಲಿಗೆ ಕರೆತಂದು ದಿಲ್ಲಿಯಿಂದಲೇ ಬೆಂಗಳೂರಿಗೆ ಕರೆತರಲು ಯೋಜನೆ ರೂಪಿಸಲಾಗಿತ್ತು.

ಕಾಂಗ್ರೆಸ್ ನಾಯಕರುಗಳಾದ , ತನ್ವೀರ್ ಸೇಠ್, ಹೆಚ್‍ಎಂ ರೇವಣ್ಣ, ಕೇರಳ ವಿರೋಧ ಪಕ್ಷದ ನಯಕ ರಮೇಶ್ ಚೆನ್ನಾತ್ತಾಲಾ ಹಾಗೂ ಸಂಸದ ಡಿಕೆ ಸುರೇಶ್  ತಮಗೆ ರವಿ ಪೂಜಾರಿಯಿಂದ ಬೆದರಿಕೆ ಇದೆ ಎಂದು ದೂರು ದಾಖಲಿಸಿದ್ದರು. 

ಮಲ್ಪೆ ಮೂಲದ ಈ ಗ್ಯಾಂಗ್‍ಸ್ಟರ್ ವಿರುದ್ಧ ಮಂಗಳೂರಿನಲ್ಲಿ 39, ಬೆಂಗಳೂರಿನಲ್ಲಿ 38 ಕೇಸ್ ಇವೆ.
 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com