ಸಚಿವ ಆನಂದ್ ಸಿಂಗ್ ನೇಮಕ ಅಸಿಂಧುಕೋರಿದ್ದ ಅರ್ಜಿ ವಜಾ

ಆನಂದ್ ಸಿಂಗ್ ಅವರನ್ನು ಅರಣ್ಯ ಇಲಾಖೆಗೆ ಸಚಿವರನ್ನಾಗಿ ನೇಮಕ ಮಾಡಿರುವ ಕ್ರಮ ಅಸಿಂಧುಗೊಳಿಸಬೇಕು ಎಂದು ಕೋರಿದ್ದ ಅರ್ಜಿಯನ್ನು ಹೈಕೋರ್ಟ್ ಮಂಗಳವಾರ ವಜಾಗೊಳಿಸಿದೆ.
ಆನಂದ್ ಸಿಂಗ್
ಆನಂದ್ ಸಿಂಗ್
Updated on: 

ಬೆಂಗಳೂರು: ಆನಂದ್ ಸಿಂಗ್ ಅವರನ್ನು ಅರಣ್ಯ ಇಲಾಖೆಗೆ ಸಚಿವರನ್ನಾಗಿ ನೇಮಕ ಮಾಡಿರುವ ಕ್ರಮ ಅಸಿಂಧುಗೊಳಿಸಬೇಕು ಎಂದು ಕೋರಿದ್ದ ಅರ್ಜಿಯನ್ನು ಹೈಕೋರ್ಟ್ ಮಂಗಳವಾರ ವಜಾಗೊಳಿಸಿದೆ. 

ಈ ಕುರಿತಂತೆ ವಕೀಲ ಕೆ.ಬಿ.ವಿಜಯಕುಮಾರ್ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎ.ಎಸ್.ಓಕ ಅವರ ನೇತೃತ್ವದ ವಿಭಾಗೀಯ ಪೀಠವು, ಅರ್ಜಿಯಲ್ಲಿ ಯಾವುದೇ ಮೆರಿಟ್ ಇಲ್ಲ. ಆನಂದ್ ಸಿಂಗ್'ಗೆ ಹಂಚಿಕೆ ಮಾಡಿರುವ ಅರಣ್ಯ ಖಾತೆ ರದ್ದುಗೊಳಿಸುವಂತೆ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ನಿರ್ದೇಶಿಸುವಂತೆ ಅರ್ಜಿದಾರರು ಕೋರಿದ್ದಾರೆ. 

ವಾಸ್ತವಾಗಿ ಮುಖ್ಯ ಕಾರ್ಯದರ್ಶಿಗಳಿಗೆ ಅಂತಹ ಅಧಿಕಾರ ಇಲ್ಲ. ಹೀಗಾಗಿ, ಅರ್ಜಿ ಊರ್ಜಿತವಾಗುವುದಿಲ್ಲ ಎಂದು ತಿಳಿಸಿ ಅರ್ಜಿ ವಜಾಗೊಳಿಸಿತು. 

ಆನಂದ್ ಸಿಂಗ್ ಕುಟುಂಬ ಗಣಿಗಾರಿಕೆಯಲ್ಲಿ ಭಾಗಿಯಾಗಿದೆ. ಸಚಿವರ ವಿರುದ್ಧ ಅರಣ್ಯ ಇಲಾಖೆಯೇ 16 ಪ್ರಕರಣಗಳು ದಾಖಲಿಸಿದ್ದು, ಹೈಕೋರ್ಟ್ ಸೇರಿದಂತೆ ವಿವಿಧ ನ್ಯಾಯಾಲಯಗಳಲ್ಲಿ ವಿಚಾರಣೆ ಹಂತದಲ್ಲಿದೆ. ಆದ್ದರಿಂದ ಅವರಿಗೆ ಅರಣ್ಯ ಖಾತೆಯನ್ನು ಹಂಚಿಕೆ ಮಾಡಿ ಹೊರಡಿಸಿರುವ ಆದೇಶ ರದ್ದುಗೊಳಿಸಬೇಕೆದು ಕೋರಲಾಗಿತ್ತು. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com