ಬಳ್ಳಾರಿ: ಜಾತಿ ವಿಚಾರಕ್ಕೆ ನಮ್ಮ ಪ್ರೀತಿ ವಿರೋಧಿಸಿದ್ರಿ, ನಮಗೆ ಈ ಬದುಕೆಬೇಡ, ಒಂದೇ ಮರಕ್ಕೆ ಪ್ರೇಮಿಗಳು ನೇಣು!

ಬೇರೆ ಜಾತಿ ಎಂಬ ಕಾರಣಕ್ಕೆ ಮನೆಯವರು ಪ್ರೇಮ ವಿವಾಹಕ್ಕೆ ಒಪ್ಪದ ಹಿನ್ನೆಲೆಯಲ್ಲಿ ಪ್ರೇಮಿಗಳಿಬ್ಬರು ಒಂದೇ ಮರಕ್ಕೆ ನೇಣು ಹಾಕಿಕೊಂಡು ಆತ್ಮಹತ್ಯೆಗೆ ಶರಣಾಗಿರುವ ದಾರುಣ ಘಟನೆ ಬಳ್ಳಾರಿಯಲ್ಲಿ ನಡೆದಿದೆ.
ಆತ್ಮಹತ್ಯೆಗೆ ಶರಣಾಗಿರುವ ಪ್ರೇಮಿಗಳು
ಆತ್ಮಹತ್ಯೆಗೆ ಶರಣಾಗಿರುವ ಪ್ರೇಮಿಗಳು

ಹೊಸಪೇಟೆ: ಬೇರೆ ಜಾತಿ ಎಂಬ ಕಾರಣಕ್ಕೆ ಮನೆಯವರು ಪ್ರೇಮ ವಿವಾಹಕ್ಕೆ ಒಪ್ಪದ ಹಿನ್ನೆಲೆಯಲ್ಲಿ ಪ್ರೇಮಿಗಳಿಬ್ಬರು ಒಂದೇ ಮರಕ್ಕೆ ನೇಣು ಹಾಕಿಕೊಂಡು ಆತ್ಮಹತ್ಯೆಗೆ ಶರಣಾಗಿರುವ ದಾರುಣ ಘಟನೆ ಬಳ್ಳಾರಿಯಲ್ಲಿ ನಡೆದಿದೆ. 

ಹೂವಿನಹಡಗಲಿ ತಾಲೂಕಿನ ಹೊಳಗುಂದಿ ಗ್ರಾಮದ ಹೊರವಲಯದಲ್ಲಿ ಘಟನೆ ನಡೆದಿದೆ. 26 ವರ್ಷದ ನಿಂಗಮ್ಮ ಹಾಗೂ 30 ವರ್ಷದ ಗುರುರಾಜ್ ಎಂಬುವರು ಪ್ರೀತಿಸುತ್ತಿದ್ದರು. ಆದರೆ ಈ ಪ್ರೀತಿಗೆ ಪೋಷಕರು ವಿರೋಧಿಸಿದ ಹಿನ್ನೆಲೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ನಿಂಗಮ್ಮ ಹಗರಿಬೊಮ್ಮನಹಳ್ಳಿ ತಾಲೂಕಿನ ಸೊನ್ನ ಗ್ರಾಮದವರು. ಗುರುರಾಜ್ ಚಿಲುಗೋಡ್ ಗ್ರಾಮದ ಯುವಕ.  ನಾಲ್ಕೈದು ವರ್ಷದಿಂದ ಇಬ್ಬರು ಪರಸ್ಪರ ಪ್ರೀತಿಸುತ್ತಿದ್ದರು. ಆದರೆ ಜಾತಿಯ ಕಾರಣಕ್ಕೆ ಮನೆಯವರು ಇವರಿಗೆ ಮದುವೆ ಮಾಡಲು ನಿರಾಕರಿಸಿದ್ದರು. ಈ ಹಿನ್ನೆಲೆ ಇಬ್ಬರು ರಾತ್ರಿ ಮನೆ ಬಿಟ್ಟು ಹೋಗಿ ಆತ್ಮಹತ್ಯೆಗೆ ಶರಣಾಗಿದ್ದಾರೆ‌.

ಸ್ಥಳಕ್ಕೆ ಹೂವಿನಹಡಗಲಿ ಪೊಲೀಸರ ಭೇಟಿ ನೀಡಿ ಪರಿಶೀಲನೆ ನಡೆಸಿದರು. 

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com