ಸೂಕ್ತ ದಾಖಲೆ ಸಲ್ಲಿಸುವ ಎಲ್ಲಾ ರೈತರ ಸಾಲ ಮನ್ನಾ: ಸಿಎಂ ಯಡಿಯೂರಪ್ಪ

ಸೂಕ್ತ ದಾಖಲೆ ಸಲ್ಲಿಸುವ ಎಲ್ಲಾ ರೈತರ ಸಾಲಮನ್ನಾ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಶನಿವಾರ ಸ್ಪಷ್ಟಪಡಿಸಿದ್ದಾರೆ.
ಬಿಎಸ್ ಯಡಿಯೂರಪ್ಪ
ಬಿಎಸ್ ಯಡಿಯೂರಪ್ಪ

ಬೆಂಗಳೂರು: ಸೂಕ್ತ ದಾಖಲೆ ಸಲ್ಲಿಸುವ ಎಲ್ಲಾ ರೈತರ ಸಾಲಮನ್ನಾ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಶನಿವಾರ ಸ್ಪಷ್ಟಪಡಿಸಿದ್ದಾರೆ.

ಸಾಲ ಮನ್ನಾ ವಿಚಾರದಲ್ಲಿ ಜೆಡಿಎಸ್ ನಾಯಕ ಎಚ್.ಡಿ. ಕುಮಾರಸ್ವಾಮಿ ಮತ್ತಿತರರು ಮಾಡಿರುವ ಆರೋಪಗಳಿಗೆ ಟ್ವೀಟ್ ಮೂಲಕ ಯಡಿಯೂಋಪ್ಪ ಸ್ಪಷ್ಟನೆ ನೀಡಿದ್ದಾರೆ.

ನಮ್ಮ ಸರ್ಕಾರ ರೈತರ ಪರವಾಗಿದ್ದು, ಯಾವುದೇ ಕಾರಣಕ್ಕೂ ಕೊಟ್ಟ ಮಾತಿನಿಂದ ಹಿಂದೆ ಸರಿಯುವ ಪ್ರಶ್ನೆ ಇಲ್ಲ. ಯಾವುದೇ ಕಾರಣಕ್ಕೂ ರೈತರಿಗೆ ಅನ್ಯಾಯವಾಗಲು ಬಿಡುವುದಿಲ್ಲ. ಕೆಲವರು ದಾರಿ ತಪ್ಪಿಸುವ ಹೇಳಿಕೆ ನೀಡುತ್ತಿದ್ದಾರೆ. ರೈತರು ವದಂತಿಗಳಿಗೆ ಮತ್ತು ತಪ್ಪು ಸಂದೇಶಗಳಿಗೆ ಕಿವಿಕೊಡಬಾರದು ಎಂದು ಮನವಿ ಮಾಡಿದ್ದಾರೆ. 

ರಾಜ್ಯ ಆರ್ಥಿಕ ಮುಗ್ಗಟ್ಟು ಎದುರಿಸುತ್ತಿರುವ ಕಾರಣ ಸರಿಯಾದ ದಾಖಲೆ ಸಲ್ಲಿಸದ 1.10 ಲಕ್ಷ ರೈತರು ಸಾಲಮನ್ನಾ ಯೋಜನೆಯಿಂದ ಹೊರಗುಳಿಯಲಿದ್ದಾರೆ ಮತ್ತು 2019-20 ಆರ್ಥಿಕ ವರ್ಷದಿಂದ ರಾಜ್ಯ ಸರ್ಕಾರ ಸಾಲಮನ್ನಾ ಯೋಜನೆಗೆ ಇತಿಶ್ರೀ ಹಾಡಲಿದೆ ಎಂದು ಇಂದು ಸಂಜೆಯಿಂದ ವರದಿಯಾಗುತ್ತಿತ್ತು. ಆರ್ಥಿಕ ಸಚಿವಾಲಯದ ಸಿಬ್ಬಂದಿಗಳೇ ಈ ಕುರಿತು ಮಾಹಿತಿ ನೀಡಿದ್ದರು.

ಈ ಸುದ್ದಿ ರಾಜ್ಯಾದ್ಯಂತ ದೊಡ್ಡ ಮಟ್ಟದಲ್ಲಿ ಸದ್ದು ಮಾಡುತ್ತಿದ್ದಂತೆ ಮಾಜಿ ಮುಖ್ಯಮಂತ್ರಿ ಹೆಚ್​.ಡಿ. ಕುಮಾರಸ್ವಾಮಿ ಸರಣಿ ಟ್ವಿಟ್ ಮಾಡುವ​ ಮೂಲಕ ರಾಜ್ಯ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದರು. ಆದರೆ, ಈ ಕುರಿತು ಟ್ವಿಟ್​ ಮೂಲಕ ಮುಖ್ಯಮಂತ್ರಿ ಬಿ.ಎಸ್​. ಯಡಿಯೂರಪ್ಪ ಸ್ಪಷ್ಟನೆ ನೀಡಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com