
ಮೈಸೂರು: ಕಾಗದ ಕಾರ್ಖಾನೆಯೊಂದಕ್ಕೆ ಬಾಂಬ್ ಬೆದರಿಕೆ ಕರೆ ಬಂದ ಹಿನ್ನೆಲೆಯಲ್ಲಿ ಜಿಲ್ಲೆಯ ನಂಜನಗೂಡು ತಾಲೂಕಿನ ತಾಂಡವಪುತ್ ಕೈಗಾರಿಕಾ ಪ್ರದೇಶದಲ್ಲಿ ಶನಿವಾರ ಆತಂಕದ ವಾತಾವರಣ ನಿರ್ಮಾಣವಾಗಿತ್ತು. ಬಳಿಕ ಅದು ಹುಸಿ ಬಾಂಬ್ ಬೆದರಿಕೆ ಕರೆ ಎಂದು ತಿಳಿದು ಬಂದಿದೆ.
ರಾಜ್‌ಶೀಲ್ ಪೇಪರ್ಸ್ ಕಾಗದ ಕಾರ್ಖಾನೆ ಅಧಿಕಾರಿಗಳಿಗೆ ಶನಿವಾರ ಬೆಳಿಗ್ಗೆ ಬಾಂಬ್ ಬೆದರಿಕೆ ಕರೆ ಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಮಾಹಿತಿ ಪಡೆದ ತಕ್ಷಣವೇ ಬಾಂಬ್ ನಿಷ್ಕ್ರಿಯ ದಳ ಸ್ಥಳಕ್ಕೆ ಧಾವಿಸಿ ಕಾರ್ಖಾನೆಯ ಆವರಣದಲ್ಲಿ ತಪಾಸಣೆ ನಡೆಸಿ, ನಂತರ ಇದು ಹುಸಿ ಬಾಂಬ್ ಕರೆ ಎಂದು ಪ್ರಕಟಿಸಿತು.
ಅಪರಿಚಿತ ವ್ಯಕ್ತಿಯೊಬ್ಬ ತನ್ನ ಮೊಬೈಲ್‌ನಿಂದ ಬಾಂಬ್ ಬೆದರಿಕೆ ಕರೆ ಮಾಡಿದ್ದು, ಸದ್ಯ ಮೊಬೈಲ್ ಸ್ವಿಚ್ ಆಫ್ ಆಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
Advertisement