ರಾಜ್ಯ ಸಿಇಟಿ ಪರೀಕ್ಷಾ ವೇಳಾಪಟ್ಟಿ ಪ್ರಕಟ

ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಇಂಜಿನಿಯರಿಂಗ್, ಪದವಿ ಕೋರ್ಸ್ ಗಳ ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ) ಪರೀಕ್ಷಾ ದಿನಾಂಕ ಪ್ರಕಟಿಸಿದೆ. 
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಬೆಂಗಳೂರು: ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಇಂಜಿನಿಯರಿಂಗ್, ಪದವಿ ಕೋರ್ಸ್ ಗಳ ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ) ಪರೀಕ್ಷಾ ದಿನಾಂಕ ಪ್ರಕಟಿಸಿದೆ.

ಏಪ್ರಿಲ್ 22ರಿಂದ ಏಪ್ರಿಲ್ 24 ರವರೆಗೆ ಸಿಇಟಿ ಪರೀಕ್ಷೆಗಳು ನಡೆಯಲಿವೆ. ಏ. 22ರಂದು ಬುಧವಾರ ಬೆಳಗ್ಗೆ 10.30ರಿಂದ 11.50ರವರೆಗೆ ಜೀವಶಾಸ್ತ್ರ, 2.30ರಿಂದ 3.50ರವರೆಗೆ ಗಣಿತ, ಏ.23ರಂದು ಗುರುವಾರ ಬೆಳಗ್ಗೆ 10.20ರಿಂದ 11.50ರವರೆಗೆ ಭೌತಶಾಸ್ತ್ರ, 2.30ರಿಂದ 3.50ರವರೆಗೆ ರಸಾಯನ ಶಾಸ್ತ್ರ ಪರೀಕ್ಷೆಗಳು ನಡೆಯಲಿವೆ.

ಬೆಂಗಳೂರು ಕೇಂದ್ರದಲ್ಲಿ ಡಿ. 24ರಂದು ಬೆಳಗ್ಗೆ 11.30ರಿಂದ ಮಧ್ಯಾಹ್ನ 12.30ರವರೆಗೆ ಹೊರನಾಡು ಹಾಗೂ ಗಡಿನಾಡು ಕನ್ನಡಿಗ ಅಭ್ಯರ್ಥಿಗಳಿಗೆ ಕನ್ನಡ ಭಾಷಾ ಪರೀಕ್ಷೆ ನಡೆಯಲಿದೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com