ಸಿಲಿಕಾನ್ ಸಿಟಿಯಲ್ಲಿ ಕಳ್ಳರ ಕೈಚಳಕ! ಮಾತಾಡುತ್ತಿದ್ದ ವ್ಯಕ್ತಿಯ ಮೊಬೈಲ್ ಕಸಿದು ಪರಾರಿಯಾದ ಖದೀಮರು
ರಾಜ್ಯ
ಸಿಲಿಕಾನ್ ಸಿಟಿಯಲ್ಲಿ ಕಳ್ಳರ ಕೈಚಳಕ! ಮಾತಾಡುತ್ತಿದ್ದ ವ್ಯಕ್ತಿಯ ಮೊಬೈಲ್ ಕಸಿದು ಖದೀಮರು ಪರಾರಿ
ರಸ್ತೆಯ ಮೇಲೆ ವ್ಯಕ್ತಿಯೋರ್ವರು ಮೊಬೈಲ್ ಫೋನ್ನಲ್ಲಿ ಮಾತನಾಡಿಕೊಂಡು ಹೋಗುತ್ತಿದ್ದಾಗ ಖದೀಮರು ಮೊಬೈಲ್ ಕಸಿದುಕೊಂಡು ಪರಾರಿಯಾಗಿರುವ ಘಟನೆ ಸಿಸಿಟಿವಿಯಲ್ಲಿ ಸೆರೆಯಾಗಿದೆ.
ಬೆಂಗಳೂರು: ರಸ್ತೆಯ ಮೇಲೆ ವ್ಯಕ್ತಿಯೋರ್ವರು ಮೊಬೈಲ್ ಫೋನ್ನಲ್ಲಿ ಮಾತನಾಡಿಕೊಂಡು ಹೋಗುತ್ತಿದ್ದಾಗ ಖದೀಮರು ಮೊಬೈಲ್ ಕಸಿದುಕೊಂಡು ಪರಾರಿಯಾಗಿರುವ ಘಟನೆ ಸಿಸಿಟಿವಿಯಲ್ಲಿ ಸೆರೆಯಾಗಿದೆ.
ಸಿಲಿಕಾನ್ ಸಿಟಿಯ ವಿವೇಕ್ ನಗರದಲ್ಲಿ ಬುಧವಾರ ರಾತ್ರಿ ಈ ಘಟನೆ ನಡೆದಿದೆ.
ವಿವೇಕ್ ನಗರದಲ್ಲಿ ದಂಪತಿ ರಸ್ತೆಯಲ್ಲಿ ನಡೆದುಕೊಂಡು ತಮ್ಮ ಮನೆಗೆ ತೆರಳುತ್ತಿದ್ದಾಗ ಬೈಕ್ನಲ್ಲಿ ಬಂದ ಇಬ್ಬರು ಯುವಕರು ಮೊಬೈಲ್ ಕಸಿದುಕೊಂಡು ಪರಾರಿಯಾಗಿದ್ದಾರೆ. ಈ ವೇಳೆ ಮೊಬೈಲ್ ಮಾಲೀಕ ಕಳ್ಳರ ಹಿಂದೆಯೇ ಓಡಿ ಹೋಗಿದ್ದಾರೆ. ಆದರೆ, ಓಡಿ ಹೋಗುವ ಬರದಲ್ಲಿ ಮುಗ್ಗರಿಸಿ ಕೆಳಗೆ ಬಿದ್ದಿದ್ದಾರೆ ಎನ್ನಲಾಗಿದೆ.
ವಿವೇಕ್ ನಗರದ ಆಸು ಪಾಸು ಇದಕ್ಕೆ ಹಿಂದೆಯೂ ಇಂತಹಾ ಅನೇಕ ಪ್ರಸಂಗಗಳು ವರದಿಯಾಗಿದೆ. ಸಧ್ಯ ಈ ಪ್ರಕರಣದ ದೃಶ್ಯಗಳು ಸಿಸಿಟಿವಿಯಲ್ಲಿ ಸೆರೆಯಾಗಿದೆ.
ವಿವೇಕ್ ನಗರ ಪೋಲೀಸ್ ಠಾಣೆಯಲ್ಲಿ ಮೊಬೈಲ್ ಕಳ್ಳತನ ಕುರಿತ ಪ್ರಕರಣ ದಾಖಲಾಗಿದ್ದು ರೋಪಿಗಳಿಗಾಗಿ ಹುಡುಕಾಟ ನಡೆದಿದೆ.
Follow KannadaPrabha channel on WhatsApp
KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ